Home
ಸುದ್ದಿಜಾಲ

ಪೊಕೊ M3 ಫಸ್ಟ್‌ ಲುಕ್: ಸ್ಪರ್ಧಾತ್ಮಕ ಬೆಲೆಯಲ್ಲಿ ಉತ್ತಮ ಸ್ಮಾರ್ಟ್‌ಫೋನ್!

ಜನಪ್ರಿಯ ಪೊಕೊ ಬ್ರ್ಯಾಂಡ್‌ ಈಗಾಗಲೇ ಕೆಲವು ಮಾಡೆಲ್‌ ಸ್ಮಾರ್ಟ್‌ಫೋನ್ ಪರಿಚಯಿಸಿ ಸೈ ಅನಿಸಿಕೊಂಡಿದೆ. ಸಂಸ್ಥೆಯು ಇದೀಗ ನೂತನವಾಗಿ ಪೊಕೊ M3 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಸ್ನ್ಯಾಪ್‌ಡ್ರಾಗನ್ 662 SOC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಪೊಕೊ M3

ಹೌದು, ಪೊಕೊ ಕಂಪೆನಿ ತನ್ನ ಬಹುನಿರೀಕ್ಷಿತ ಪೊಕೊ M3 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 4GB + 64GB ಮತ್ತು 4GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವುದು ಹೈಲೈಟ್‌ ಆಗಿದೆ. ಇನ್ನುಳಿದಂತೆ ಯಾವೆಲ್ಲಾ ಫೀಚರ್ಸ್‌ ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಪೊಕೊ M3 ಸ್ಮಾರ್ಟ್‌ಪೋನ್‌ 1,080x2,400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಗಿದ್ದು, 60 Hz ರೀಫ್ರೇಶ್ ರೇಟ್ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್‌ ಸೌಲಭ್ಯವನ್ನು ಪಡೆದಿದೆ.

ಯಾವ ಪ್ರೊಸೆಸರ್‌

ಯಾವ ಪ್ರೊಸೆಸರ್‌

ಪೊಕೊ M3 ಸ್ಮಾರ್ಟ್‌ಪೋನ್‌ ಸ್ನ್ಯಾಪ್‌ಡ್ರಾಗನ್ 662 SOC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್‌ ಬೆಂಬಲವನ್ನು ಪಡೆದಿದೆ. 6GB RAM ಮತ್ತು 64GB ಹಾಗೂ 6GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿದೆ. ಇದಲ್ಲದೆ ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾದ ಅವಕಾಶ ಇದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಪೊಕೊ M3 ಸ್ಮಾರ್ಟ್‌ಪೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2ಎಂಪಿ ಕ್ಯಾಮೆರಾ ಸೆನ್ಸಾರ್‌, ಮೂರನೇ ಕ್ಯಾಮೆರಾ 2ಎಂಪಿ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಪೊಕೊ M3 ಸ್ಮಾರ್ಟ್‌ಪೋನ್‌ 6000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಪೊಕೊ M3 ಸ್ಮಾರ್ಟ್‌ಪೋನ್‌ 4 ಜಿಬಿ + 64 ಜಿಬಿ ಶೇಖರಣಾ ರೂಪಾಂತರದ ಬೆಲೆಯು$149 (ಸರಿಸುಮಾರು 11,000ರೂ.) ಆಗಿದೆ. ಇನ್ನು 4 ಜಿಬಿ + 128 ಜಿಬಿ ಶೇಖರಣಾ ಆಯ್ಕೆಯ ಬೆಲೆಯು $169 (ಅಂದಾಜು 12,500ರೂ) ಆಗಿದೆ. ಈ ಸ್ಮಾರ್ಟ್‌ಫೋನ್ ಬ್ಲೂ, ಬ್ಲ್ಯಾಕ್‌ ಹಾಗೂ ಯೆಲ್ಲೊ ಬಣ್ಣಗಳ ಆಯ್ಕೆಯನ್ನು ಪಡೆದಿದೆ.

Best Mobiles in India

English summary
Poco M3 price starts at $149 (roughly Rs. 11,000) for the 4GB + 64GB storage variant.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+