Home
ಸುದ್ದಿಜಾಲ

ಇಂದು ಪೊಕೊ M3 ಸ್ಮಾರ್ಟ್‌ಫೋನ್ ಫಸ್ಟ್‌ ಸೇಲ್‌; ಬೆಲೆ ಎಷ್ಟು?..ಆಫರ್‌ ಏನು?

ಪೊಕೊ ಮೊಬೈಲ್ ಕಂಪನಿಯ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ಪೊಕೊ M3 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಫೆ.9) ಮಧ್ಯಾಹ್ನ 12ರಿಂದ ಇ-ಕಾಮರ್ಸ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಫಸ್ಟ್‌ ಸೇಲ್ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 10,999ರೂ.ಗಳು ಆಗಿದೆ.

ಸ್ಮಾರ್ಟ್‌ಫೋನ್

ಹೌದು, ಪೊಕೊ M3 ಸ್ಮಾರ್ಟ್‌ಫೋನ್ ಇಂದು ಮೊದಲ ಮಾರಾಟ ನಡೆಯಲಿದೆ. ಈ ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ, ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 6,000mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 6GB RAM ಮತ್ತು 64GB ವೇರಿಯಂಟ್ ಮಾದರಿ ಆಯ್ಕೆಯನ್ನು ಪಡೆದಿದೆ. ಇನ್ನುಳಿದಂತೆ ಈ ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಪೊಕೊ M3 ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಪೊಕೊ M3 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌

ಕ್ಯಾಮೆರಾ ಸೆಟ್‌ಅಪ್‌

ಪೊಕೊ M3 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ M3 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, GPS, ಇನ್ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಪೊಕೊ M3 ಬೆಲೆ 6GB RAM+ 64GB ಶೇಖರಣಾ ರೂಪಾಂತರಕ್ಕೆ 10,999 ರೂ. ಹಾಗೂ 6GB RAM + 128GB ಶೇಖರಣಾ ಮಾದರಿಯ ಬೆಲೆ 11,999 ರೂ. ಆಗಿದೆ. ಇನ್ನು ಈ ಫೋನ್ ಕೂಲ್ ಬ್ಲೂ, ಪೊಕೊ ಯೆಲ್ಲೊ ಮತ್ತು ಪವರ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ. (ಇಂದು) ಫೆಬ್ರವರಿ 9 ರಿಂದ ಮಧ್ಯಾಹ್ನ 12 ರಿಂದ (ಮಧ್ಯಾಹ್ನ) ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯವಿರುತ್ತದೆ. ಇದಲ್ಲದೆ ಐಸಿಐಸಿಐ ಬ್ಯಾಂಕ್ ಕಾರ್ಡ್ ಅಥವಾ ಇಎಂಐ ವಹಿವಾಟಿನ ಮೂಲಕ ಪೊಕೊ ಎಂ 3 ಖರೀದಿಸುವ ಗ್ರಾಹಕರು 1,000 ರೂ. ಇನ್‌ಸ್ಟಂಟ್ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ.

Best Mobiles in India

English summary
Poco M3 First Sale Today Via Flipkart Price Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+