ಪೊಕೊ M3 ಫೋನ್ ಭಾರೀ ಬೇಡಿಕೆ; 45 ದಿನಗಳಲ್ಲಿ ದಾಖಲೆಯ ಮಾರಾಟ!

|

ಜನಪ್ರಿಯ ಪೊಕೊ ಮೊಬೈಲ್ ಕಂಪನಿಯು ಫೆಬ್ರುವರಿ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿದ್ದ ಪೊಕೊ M3 ಸ್ಮಾರ್ಟ್‌ಫೋನ್ ಈಗಾಗಲೇ ಭರ್ಜರಿ ಮಾರಾಟ ಕಂಡು ಹೊಸ ದಾಖಲೆ ಬರೆದಿದೆ. ಅದಾಗ್ಯೂ ಪೊಕೊ M3 ಸ್ಮಾರ್ಟ್‌ಫೋನ್‌ ಸದ್ಯ ಭಾರೀ ಬೇಡಿಕೆಯಲ್ಲಿ ಕಾಣಿಸಿಕೊಂಡಿದ್ದು, ಬಿಡುಗಡೆ ಆಗಿ 45 ದಿನಗಳಲ್ಲಿ (ಅರ್ಧ ಮಿಲಿಯನ್) ಐದು ಲಕ್ಷ ಯೂನಿಟ್‌ಗಳ ಮಾರಾಟ ಕಂಡಿದೆ.

ಮಾರಾಟದ

ಪೊಕೊ M3 ಫೋನ್ ತನ್ನ ಮಾರಾಟದ ಮೊದಲ ದಿನದಂದು 1.5 ಲಕ್ಷ ಯೂನಿಟ್‌ಗಳನ್ನು ಮಾರಾಟ ಆಗಿರುವ ಬಗ್ಗೆ ವರದಿ ಆಗಿತ್ತು. ಹಾಗೆಯೇ ಫಸ್ಟ್‌ ಸೇಲ್‌ ವೇಳೆ 30 ಲಕ್ಷ ಜನರು ಪೊಕೊ M3 ಫೋನ್ ಖರೀದಿಸಲು ಆಸಕ್ತಿ ವ್ಯಕ್ತಪಡಿಸಿದ್ದರು. ಈ ವರ್ಷದ ಆರಂಭದಲ್ಲಿ ಪೊಕೊವನ್ನು ಮೂರನೇ ಅತಿದೊಡ್ಡ ಆನ್‌ಲೈನ್ ಸ್ಮಾರ್ಟ್‌ಫೋನ್ ಬ್ರಾಂಡ್ ಎಂದು ಘೋಷಿಸಲಾಯಿತು. ಇಂತಹ ಅದ್ಭುತ ಪ್ರತಿಕ್ರಿಯೆಯಿಂದಾಗಿ, ಇದೀಗ ಹೋಳಿ ಹಬ್ಬದ ಸಂದರ್ಭದಲ್ಲಿ ಪೊಕೊ ವಿಶೇಷ ಯೆಲ್ಲೊ ಮಾರಾಟವನ್ನು ಘೋಷಿಸಿದೆ. ಈ ಸೇಲ್ ಇದೇ ಮಾರ್ಚ್‌ 29ರಂದು ಫ್ಲಿಪ್‌ಕಾರ್ಟ್‌ ತಾಣದಲ್ಲಿ ನಡೆಯಲಿದೆ. ಹಾಗಾದರೇ ಪೊಕೊ M3 ಸ್ಮಾರ್ಟ್‌ಫೋನ್ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಪೊಕೊ M3 ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಪೊಕೊ M3 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌

ಕ್ಯಾಮೆರಾ ಸೆಟ್‌ಅಪ್‌

ಪೊಕೊ M3 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ M3 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, GPS, ಇನ್ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಪೊಕೊ M3 ಬೆಲೆ 6GB RAM+ 64GB ಶೇಖರಣಾ ರೂಪಾಂತರಕ್ಕೆ 10,999 ರೂ. ಹಾಗೂ 6GB RAM + 128GB ಶೇಖರಣಾ ಮಾದರಿಯ ಬೆಲೆ 11,999 ರೂ. ಆಗಿದೆ. ಇನ್ನು ಈ ಫೋನ್ ಕೂಲ್ ಬ್ಲೂ, ಪೊಕೊ ಯೆಲ್ಲೊ ಮತ್ತು ಪವರ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ.

Best Mobiles in India

English summary
Poco M3 in Massive Demand, Half Million Units Sold in 45 Days.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X