ಸದ್ಯದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಪೊಕೊ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರ ಮನ ಗೆದ್ದಿದೆ. ಸದ್ಯ ಇದೀಗ ತನ್ನ ಹೊಸ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಡೇಟ್‌ ಫಿಕ್ಸ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಇದೇ ಮೇ 19ರಂದು ಬಿಡುಗಡೆ ಆಗಲಿದೆ.

ಪೊಕೊ M3 ಪ್ರೊ 5G

ಹೌದು, ಪೊಕೊ ಕಂಪೆನಿ ಹೊಸ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ನಿಗದಿಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಹೊಂದಿರಲಿದೆ ಎನ್ನುವುದು ಖಚಿತವಾಗಿದೆ. ಇದು 7nm ಪ್ರೊಸೆಸರ್ ಮತ್ತು 5G ನೆಟ್‌ವರ್ಕ್ ಸಂಪರ್ಕವನ್ನು ಹೊಂದಿದೆ. ಜೊತೆಗೆ ಇದು ಸೆಲ್ಫಿ ಸ್ನ್ಯಾಪರ್‌ಗಾಗಿ ಪಂಚ್-ಹೋಲ್ ಕಟೌಟ್, ಸುರಕ್ಷತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಹಿಂಭಾಗದಲ್ಲಿ ಡ್ಯುಯಲ್-ಟೋನ್ ಫಿನಿಶ್ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರಲಿದೆ ಎನ್ನಲಾಗಿದೆ. ಇದು 405 ಪಿಪಿಐ ಸಾಂದ್ರತೆಯನ್ನು ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌ ಏನು?

ಪ್ರೊಸೆಸರ್‌ ಏನು?

ಇದು ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಹೊಂದಿದೆ.ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಫೋನ್ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ 4G, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, ಮತ್ತು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ.ಐಆರ್ ಬ್ಲಾಸ್ಟರ್ ಮತ್ತು ಹೈ-ರೆಸ್ ಆಡಿಯೊವನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಬೆಲೆ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
POCO M3 Pro 5G global launch is set for May 19th and the company has been pretty vocal about teasing its features.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X