Home
ಸುದ್ದಿಜಾಲ

ಭಾರತದಲ್ಲಿ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಮುಹೂರ್ತ ಫಿಕ್ಸ್‌!

ಜನಪ್ರಿಯ ಪೊಕೊ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕವನ್ನು ಜೂನ್ 8ಕ್ಕೆ ನಿಗದಿಪಡಿಸಲಾಗಿದೆ ಎಂದು ಕಂಪನಿ ಖಚಿತಪಡಿಸಿದೆ. ಈ ಸ್ಮಾರ್ಟ್‌ಫೋನ್‌ ಈ ವರ್ಷದ ಫೆಬ್ರವರಿಯಲ್ಲಿ ಭಾರತದಲ್ಲಿ ಬಿಡುಗಡೆಯಾದ ಪೊಕೊ ಎಂ3 ನ ನವೀಕರಿಸಿದ ಮಾದರಿಯಾಗಿದೆ.

ಪೊಕೊ

ಹೌದು, ಪೊಕೊ ಕಂಪೆನಿ ಹೊಸ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮುಹೂರ್ತ ಫಿಕ್ಸ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಇದೇ ಜೂನ್ 8ರಂದು ಫ್ಲಿಪ್‌ಕಾರ್ಟ್‌ನಲ್ಲಿ ಬಿಡುಗಡೆ ಆಗಲಿದೆ ಎಂದು ಪೊಕೊ ಖಚಿತಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇ ಹೊಂದಿರಲಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿರಲಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 83.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಹೊಂದಿರಲಿದೆ, ಆಂಡ್ರಾಯ್ಡ್ 11 ಆಧಾರಿತ MIUI 12 ನಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿರಲಿದೆ ಎನ್ನಲಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, ಎನ್‌ಎಫ್‌ಸಿ, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ ವಿ 5.1, ಜಿಪಿಎಸ್, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದು ಎಐ ಫೇಸ್ ಅನ್ಲಾಕ್ ಬೆಂಬಲದೊಂದಿಗೆ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿರಲಿದೆ. ಇದರ ಬೆಲೆ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Poco M3 Pro 5G India launch date is set for June 8, the company has confirmed.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+