ಇಂದು ಭಾರತಕ್ಕೆ ಲಗ್ಗೆ ಇಡಲಿದೆ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್!
ಪ್ರತಿಷ್ಠಿತ ಮೊಬೈಲ್ ತಯಾರಿಕಾ ಕಂಪನಿಗಳಲ್ಲಿ ಒಂದಾದ ಪೊಕೊ ಈಗಾಗಲೇ M ಸರಣಿಯಲ್ಲಿ ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಆ ಪೈಕಿ ಪೊಕೊ M3 ಪ್ರೊ ಫೋನ್ ಗ್ರಾಹಕರ ಗಮನ ಸೆಳೆದಿದೆ. ಇದೀಗ ಕಂಪನಿಯು ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್ ಅನ್ನು ಇಂದು (ಜೂ.8) ಭಾರತದಲ್ಲಿ ಅನಾವರಣ ಮಾಡಲು ಸಜ್ಜಾಗಿದೆ.

ಹೌದು, ಪೊಕೊ ಕಂಪೆನಿ ತನ್ನ ಹೊಸ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್ ಅನ್ನು ಇಂದು (ಜೂ.8) ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಈ ಫೋನ್ ಭಾರತದಲ್ಲಿ 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಲಾಂಚ್ ಆಗುವ ನಿರೀಕ್ಷೆಗಳಿವೆ. ಉಳಿದಂತೆ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಹೊಂದಿರಲಿದೆ ಎನ್ನುವುದು ಖಚಿತವಾಗಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಹಾಗೂ ಸೆಲ್ಫಿ ಸ್ನ್ಯಾಪರ್‌ಗಾಗಿ ಪಂಚ್-ಹೋಲ್, ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರಲಿದೆ ಎನ್ನಲಾಗಿದೆ. ಇದು 405 ಪಿಪಿಐ ಸಾಂದ್ರತೆಯನ್ನು ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್ ಏನು?
ಇದು ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಹೊಂದಿದೆ.ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಫೋನ್ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ 4G, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, ಮತ್ತು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ.ಐಆರ್ ಬ್ಲಾಸ್ಟರ್ ಮತ್ತು ಹೈ-ರೆಸ್ ಆಡಿಯೊವನ್ನು ಹೊಂದಿದೆ. ಭಾರತದಲ್ಲಿ ಈ ಫೋನ್ ಬೆಲೆಯು ಅಂದಾಜು 17,999ರೂ.ಗಳ ಆಸುಪಾಸಿನಲ್ಲಿ ಇರಲಿದೆ ಎಂದು ಹೇಳಲಾಗಿದೆ.


Click it and Unblock the Notifications



