Home
ಸುದ್ದಿಜಾಲ

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಲಾಂಚ್; ಫೀಚರ್ಸ್‌ ಏನು?

ಪೊಕೊ ಮೊಬೈಲ್‌ ಕಂಪನಿಯು ತನ್ನ ಬಹು ನಿರೀಕ್ಷಿತ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಇಂದು ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಗ್ರಾಹಕರನ್ನು ಸೆಳೆದಿದೆ.

ಪೊಕೊ

ಹೌದು, ಪೊಕೊ ಸಂಸ್ಥೆ ತನ್ನ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು ಯುರೋಪ್‌ನಲ್ಲಿ ಅನಾವರಣ ಮಾಡಿದೆ. ಈ ಫೋನ್‌ ಮೀಡಿಯಾ ಟೆಕ್ Dimensity 700 SoC ಪ್ರೊಸೆಸರ್‌ ಅನ್ನು ಪಡೆದಿದೆ. ಇದಕ್ಕೆ ಪೂರಕವಾಗಿ 4GB + 64GB ಮತ್ತು 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಫೋನ್ ಪಂಚ್ ಹೋಲ್‌ ಡಿಸ್‌ಪ್ಲೇ ರಚನೆ ಇದ್ದು, ಸ್ಕ್ರೀನ್‌ 90Hz ರೀಫ್ರೇಶ್ ರೇಟ್ ಪಡೆದಿದೆ. ಇನ್ನುಳಿದಂತೆ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 405 ಪಿಪಿಐ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB + 64GB ಮತ್ತು 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಹೊಂದಿದೆ.ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಫೋನ್ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ 4G, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, ಮತ್ತು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ.ಐಆರ್ ಬ್ಲಾಸ್ಟರ್ ಮತ್ತು ಹೈ-ರೆಸ್ ಆಡಿಯೊವನ್ನು ಹೊಂದಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 4GB + 64GB ವೇರಿಯಂಟ್ ಬೆಲೆಯು ಯುರೋಪ್‌ನಲ್ಲಿ EUR 159 (ಭಾರತದಲ್ಲಿ ಅಂದಾಜು 14,100ರೂ) ಆಗಿದೆ. ಅದೇ ರೀತಿ 6GB + 128GB ಸ್ಟೋರೇಜ್‌ ವೇರಿಯಂಟ್ ಬೆಲೆಯು EUR 179 (ಭಾರತದಲ್ಲಿ ಅಂದಾಜು 15,900ರೂ). ಆಗಿದೆ. ಇನ್ನು ಈ ಫೋನ್ ಬ್ಲೂ, ಬ್ಲ್ಯಾಕ್ ಹಾಗೂ ಯೆಲ್ಲೊ ಬಣ್ಣಗಳ ಆಯ್ಕೆಗಳನ್ನು ಪಡೆದಿದೆ.

Best Mobiles in India

English summary
Poco M3 Pro 5G is backed by a 5,000mAh battery with support for 18W fast charging.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+