Home
ಸುದ್ದಿಜಾಲ

ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ಕೊಡಲಿದೆ ಪೊಕೊ M3 ಸ್ಮಾರ್ಟ್‌ಫೋನ್‌!

ಶಿಯೋಮಿಯಿಂದ ಪ್ರತ್ಯೇಕಗೊಂಡ ಬಳಿಕ ಪೊಕೊ ಸಂಸ್ಥೆ ಸಖತ್‌ ಸೌಂಡ್‌ ಮಾಡ್ತಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ಪೊಕೊ ಇದೇ ಫೆಬ್ರವರಿಯಲ್ಲಿ ತನ್ನ ಪೊಕೊ M3 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಈಗಾಗಲೇ ಚೀನಾದಲ್ಲಿ ಬಿಡುಗಡೆ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಇದು ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಆಗಿರಲಿದೆ ಎನ್ನಲಾಗಿದೆ.

ಪೊಕೊ

ಹೌದು, ಪೊಕೊ ಕಂಪೆನಿ ತನ್ನ ಪೊಕೊ M3 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇದು ಅಂದಾಜು 11,000 ರೂ. ಬೆಲೆಯಲ್ಲಿ ಲಭ್ಯವಾಗುವ ನಿರೀಕ್ಷೆ ಇದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.53 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಇದು 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇ ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 19.5: 9 ರಚನೆಯ ಅನುಪಾತ ಮತ್ತು 90.34 ಶೇಕಡಾ ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿರಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಪೊಕೊ M3 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಅನ್ನು ಹೊಂದಿದ್ದು,ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿರಲಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಪೊಕೊ M3 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 6,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಇನ್ಫ್ರಾರೆಡ್ (ಐಆರ್) ಬ್ಲಾಸ್ಟರ್ ಮತ್ತು 3.5 ಎಂಎಂ ಹೆಡ್‌ಫೋನ್ ಪೋರ್ಟ್ ಅನ್ನು ಹೊಂದಿದೆ. ಇನ್ನು ಫೆಬ್ರವರಿಯಲ್ಲಿ ಪೊಕೊ ಎಂ 3 ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದ್ದು, ಇದು ಅಂದಾಜು 11,000 ರೂ ಬೆಲೆಯಲ್ಲಿ ಲಭ್ಯವಾಗುವ ನಿರೀಕ್ಷೆ ಇದೆ.

Best Mobiles in India

English summary
Poco M3 will be launched in India in February.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+