Just In
Don't Miss
- Automobiles
ಮಾರ್ಚ್ 18ರಂದು ಬಿಡುಗಡೆಯಾಗಲಿರುವ ಸ್ಕೋಡಾ ಕುಶಾಕ್ ಕಾರಿನ ವಿಶೇಷತೆಗಳೇನು?
- Finance
ಮಾರ್ಚ್ 06ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Movies
'ನನ್ನ ಪತ್ನಿಗೆ ಕಣ್ಣೀರು ಹಾಕೋಕು ಬರುತ್ತೆ, ಗನ್ ಹಿಡಿಯೋಕು ಬರುತ್ತೆ': ಪತ್ನಿ ಬಗ್ಗೆ ಸತ್ಯ ಸ್ಪಷ್ಟನೆ
- Sports
ಸಾಮಾಜಿಕ ಜಾಲತಾಣದಲ್ಲಿ ಆಶಿಷ್ ನೆಹ್ರಾ ಚಿತ್ರ ವೈರಲ್, ಯಾಕ್ ಗೊತ್ತಾ?!
- News
ಪ್ರೇಯಸಿ ಕರೆ ಸ್ವೀಕರಿಸಲಿಲ್ಲ ಎಂದು ಯುವಕ ಆತ್ಮಹತ್ಯೆ
- Lifestyle
Women's Day Special: ಬೆಂಗಳೂರಿನಲ್ಲಿ ಬಸ್ ಸ್ಟೇರಿಂಗ್ ಹಿಡಿದ ಮೊದಲ ಮಹಿಳೆ ಪ್ರೇಮಾ ರಾಮಪ್ಪ
- Education
KSCCF Recruitment 2021: 45 ಲೆಕ್ಕಿಗರು, ಎಫ್ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಹುನಿರೀಕ್ಷಿತ ಪೊಕೊ M3 ಸ್ಮಾರ್ಟ್‌ಫೋನ್ ಬಿಡುಗಡೆ! 6,000mAh ಬ್ಯಾಟರಿ ಸಾಮರ್ಥ್ಯ!
ಶಿಯೋಮಿಯಿಂದ ಪ್ರತ್ಯೇಕ ಗೊಂಡ ನಂತರ ಪೊಕೊ ಮೊಬೈಲ್ ಕಂಪನಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಸದ್ಯ ಇದೀಗ ತನ್ನ ಹೊಸ ಪೊಕೊ M3 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಡಾಟ್ ಡ್ರಾಪ್ ವಿನ್ಯಾಸವನ್ನು ಹೊಂದಿದ್ದು, 6.53 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ.

ಹೌದು, ಪೊಕೊ ಕಂಪೆನಿ ಹೊಸ ಪೊಕೊ M3 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಒಳಗೊಂಡಿರುವ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ಪೊಕೊ M3 ಸ್ಮಾರ್ಟ್‌ಪೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತ ಮತ್ತು 90.34% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲವನ್ನು ಪಡೆದಿದೆ. ಹಾಗೇಯೇ 4GB RAM ಮತ್ತು 64GB ಹಾಗೂ GB RAM+ 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾದ ಅವಕಾಶವನ್ನು ಸಹ ನೀಡಿದೆ.

ಕ್ಯಾಮೆರಾ ವಿಶೇಷ
ಪೊಕೊ M3 ಸ್ಮಾರ್ಟ್‌ಪೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ f/2.4 ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಪೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಪೊಕೊ M3 ಸ್ಮಾರ್ಟ್‌ಫೋನ್ 4GB RAM+ 64GB ಶೇಖರಣಾ ರೂಪಾಂತರಕ್ಕೆ ಬೆಲೆ $149 (ಸುಮಾರು ರೂ. 11,000) ನಿಗದಿಪಡಿಸಲಾಗಿದೆ, ಆದರೆ 4GB RAM + 128GB ಶೇಖರಣಾ ಆಯ್ಕೆಯು $169 (ಅಂದಾಜು 12,500 ರೂ.) ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಕೂಲ್ ಬ್ಲೂ, ಪೊಕೊ ಯೆಲ್ಲೊ ಮತ್ತು ಪವರ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ. ಇದು ನವೆಂಬರ್ 27 ರಿಂದ ಖರೀದಿಗೆ ಲಭ್ಯವಿರುತ್ತದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190