ಭಾರತದಲ್ಲಿ ಪೊಕೊ M3 ಸ್ಮಾರ್ಟ್‌ಫೋನ್ ಲಾಂಚ್! ಬೆಲೆ ಎಷ್ಟು?
ಬಹು ನಿರೀಕ್ಷಿತ ಪೊಕೊ M3 ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ಡಿಸ್‌ಪ್ಲೇ ನಾಚ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾದ ಪೊಕೊ M2 ಉತ್ತರಾಧಿಕಾರಿಯಾಗಿದೆ. ಪೊಕೊ M3 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಹೌದು, ಪೊಕೊ ಸಂಸ್ಥೆ ತನ್ನ ಪೊಕೊ M3 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು 6.53 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 128GB ಇಂಟರ್ ಸ್ಟೊರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಫೋನ್ ಅನೇಕ ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಈ ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್ ಹೇಗಿದೆ?
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷತೆ
ಪೊಕೊ M3 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, GPS, ಇನ್ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಪೊಕೊ M3 ಬೆಲೆ 6GB RAM+ 64GB ಶೇಖರಣಾ ರೂಪಾಂತರಕ್ಕೆ 10,999 ರೂ. ಹಾಗೂ 6GB RAM + 128GB ಶೇಖರಣಾ ಮಾದರಿಯ ಬೆಲೆ 11,999 ರೂ. ಆಗಿದೆ. ಇನ್ನು ಈ ಫೋನ್ ಕೂಲ್ ಬ್ಲೂ, ಪೊಕೊ ಯೆಲ್ಲೊ ಮತ್ತು ಪವರ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ. ಇದೇ ಫೆಬ್ರವರಿ 9 ರಿಂದ ಮಧ್ಯಾಹ್ನ 12 ರಿಂದ (ಮಧ್ಯಾಹ್ನ) ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯವಿರುತ್ತದೆ. ಇದಲ್ಲದೆ ಐಸಿಐಸಿಐ ಬ್ಯಾಂಕ್ ಕಾರ್ಡ್ ಅಥವಾ ಇಎಂಐ ವಹಿವಾಟಿನ ಮೂಲಕ ಪೊಕೊ ಎಂ 3 ಖರೀದಿಸುವ ಗ್ರಾಹಕರು 1,000 ರೂ. ತ್ವರಿತ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ.


Click it and Unblock the Notifications