Home
ಸುದ್ದಿಜಾಲ

ಬಜೆಟ್‌ ಬೆಲೆಯಲ್ಲಿ ಪೊಕೊ M4 5G ಸ್ಮಾರ್ಟ್‌ಫೋನ್‌ ಬಿಡುಗಡೆ!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಪೊಕೊ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಪೊಕೊ M4 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಪೊಕೊ M4 5G

ಹೌದು, ಪೊಕೊ ಕಂಪೆನಿ ಭಾರತದಲ್ಲಿ ಹೊಸ ಪೊಕೊ M4 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 12,999ರೂ.ಆರಂಭಿಕ ಬೆಲೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಪೊಕೊ M4 5G ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಪಡೆದುಕೊಂಡಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಪೊಕೊ M4 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು MIUI 13 ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ 2GB RAM ವಿಸ್ತರಣೆಯನ್ನು ಸಹ ಹೊಂದಿದೆ. ಜೊತೆಗೆ ಮೈಕ್ರೋ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಪೊಕೊ M4 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಅಪರ್ಚರ್ ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋಟ್ರೇಟ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ M4 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಮತ್ತು ಬ್ಲೂಟೂತ್ 5.1 ಮತ್ತು USB ಟೈಪ್-ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್‌ ಹಿಂಭಾಗದಲ್ಲಿ "ಹಿಪ್ನೋಟಿಕ್ ಸ್ವಿರ್ಲ್ ಡಿಸೈನ್" ಅನ್ನು ಹೊಂದಿದೆ

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಪೊಕೊ M4 5G ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 12,999ರೂ. ಬೆಲೆ ಹೊಂದಿದೆ. ಇನ್ನು 6GB RAM ಮತ್ತು 128GB ಸಂಗ್ರಹಣೆಯ ಆಯ್ಕೆಯು 14,999ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಅನ್ನು SBI ಕಾರ್ಡ್ ಮೂಲಕ ಖರೀದಿಸಿದರೆ 2,000ರೂ.ಗಳ ತ್ವರಿತ ರಿಯಾಯಿತಿ ಕೂಡ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ ಮೇ 5 ರಂದು ಫ್ಲಿಪ್‌ಕಾರ್ಟ್‌ನಲ್ಲಿ ಸೇಲ್‌ ಆಗಲಿದೆ. ಇದು ಕೂಲ್ ಬ್ಲೂ, ಪವರ್ ಬ್ಲಾಕ್ ಮತ್ತು ಹಳದಿ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ.

Best Mobiles in India

English summary
Poco M4 5G With 6.58-inch full-HD+ Display Launched in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+