Home
ಸುದ್ದಿಜಾಲ

ಇಂದು ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌! ಆಫರ್‌ ಏನು?

ಪೊಕೊ ಕಂಪೆನಿ ಭಾರತದಲ್ಲಿ ಕೆಲ ದಿನಗಳ ಹಿಂದೆ ಪರಿಚಯಿಸಿದ್ದ ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ತನ್ನ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಇಂದು (ಫೆ.22) ಮೊಲದ ಮಾರಾಟಕ್ಕೆ ಬರಲಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಹೊಂದಿದೆ. ಈ ಫೋನ್‌ 90Hz ರಿಪ್ರೆಶ್‌ ರೇಟ್‌ ಬೆಂಬಲಿಸುವ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಬೆಂಬಲವನ್ನು ಸಹ ನೀಡುತ್ತದೆ.

ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌

ಹೌದು, ಭಾರತದಲ್ಲಿ ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಇಂದು ಫಸ್ಟ್‌ ಸೇಲ್‌ ನಡೆಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದು 6.6 ಇಂಚಿನ ಫುಲ್‌ HD+ ಡಾಟ್ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 14,999ರೂ.ಆಗಿದ್ದು, ಮಾರಾಟದ ಸಮಯದಲ್ಲಿ ವಿಶೇಷ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ HD+ ಡಾಟ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌, 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು DCI-P3 ವೈಡ್ ಕಲರ್ ಗ್ಯಾಮಟ್ ಅನ್ನು ಸಹ ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಅನ್ನು ಆಧರಿಸಿದ MIUI 12.5 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಹಾಗೆಯೇ ಅಂತರ್ನಿರ್ಮಿತ RAM ಅನ್ನು ವಾಸ್ತವಿಕವಾಗಿ ವಿಸ್ತರಿಸುವ ಟರ್ಬೊ RAM ಫಿಚರ್ಸ್‌ ಅನ್ನು ಸಹ ಹೊಂದಿದೆ.

ಡ್ಯುಯಲ್‌ ರಿಯರ್‌ ಕ್ಯಾಮೆರಾ

ಡ್ಯುಯಲ್‌ ರಿಯರ್‌ ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು f/2.45 ಲೆನ್ಸ್‌ ಪಡೆದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಪ್ರೊ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.1, GPS/ A-GPS, ಇನ್ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 14,999.ರೂ. ಆಗಿದೆ. ಇನ್ನು ಈ ಫೋನ್ 6GB + 128GB ಆಯ್ಕೆಯ ಬೆಲೆ 16,999ರೂ.ಆಗಿದೆ. ಇದರ ಟಾಪ್-ಎಂಡ್ 8GB + 128GB ಮಾಡೆಲ್ ಬೆಲೆ 18,999ರೂ.ಆಗಿದೆ. ಇನ್ನು ಈ ಫೋನ್‌ ಕೂಲ್ ಬ್ಲೂ, ಪೊಕೊ ಹಳದಿ ಮತ್ತು ಪವರ್ ಬ್ಲಾಕ್ ಬಣ್ಣಗಳಲ್ಲಿ ಬರುತ್ತದೆ. ಇದು ಇಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ.

ಆಫರ್‌ ಏನಿದೆ?

ಆಫರ್‌ ಏನಿದೆ?

ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು SBI ಕಾರ್ಡ್‌ ಮೂಲಕ ಖರೀದಿಸುವ ಗ್ರಾಹಕರಿಗೆ 1,000ರೂ.ಗಳ ತ್ವರಿತ ರಿಯಾಯಿತಿ ದೊರೆಯಲಿದೆ. ಇದಲ್ಲದೆ ಫ್ಲಿಪ್‌ಕಾರ್ಟ್‌ UPI ವಹಿವಾಟುಗಳನ್ನು ಬಳಸುವಾಗ 999ರೂ. ರಿಯಾಯಿತಿ ಲಭ್ಯವಾಗಲಿದೆ. ಇನ್ನು ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರು ಗೂಗಲ್‌ ನೆಸ್ಟ್‌ ಮಿನಿ ಸ್ಮಾರ್ಟ್ ಸ್ಪೀಕರ್ ಅನ್ನು 1,999.ರೂ ಗಳಿಗೆ ದೊರೆಯಲಿದೆ.

Best Mobiles in India

English summary
Poco M4 Pro 5G First Sale in India Today: Price, Discount Offers
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+