Home
ಸುದ್ದಿಜಾಲ

ಭಾರತದಲ್ಲಿ ಪೊಕೊ M4 ಪ್ರೊ 5G ಲಾಂಚ್‌ಗೆ ಫಿಕ್ಸ್ ಆಯ್ತು ಮುಹೂರ್ತ!..ಫೀಚರ್ಸ್‌ ಏನು?

ಪೊಕೊ ಕಂಪನಿಯು ಕಡಿಮೆ ಅವಧಿಯಲ್ಲಿ ಭಿನ್ನ ಮೊಬೈಲ್ ಶ್ರೇಣಿಯ ಮೂಲಕ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಪೊಕೊ ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಇತ್ತೀಚಿನ ಪೊಕೊ M3 ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ ಮತ್ತು ಬೆಲೆಯಿಂದ ಹೆಚ್ಚು ಸದ್ದು ಮಾಡಿದೆ. ಅದರ ಮುಂದುವರಿದ ಭಾಗವಾಗಿ ಪೊಕೊ ಕಳೆದ ವರ್ಷ ಯುರೋಪ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದ, ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ಭಾರತದಲ್ಲಿ ಪೊಕೊ M4 ಪ್ರೊ 5G ಲಾಂಚ್‌ಗೆ ಫಿಕ್ಸ್ ಆಯ್ತು ಮುಹೂರ್ತ!..ಫೀಚರ್ಸ್‌ ಏನು

ಹೌದು, ಪೊಕೊ ಕಂಪೆನಿ ತನ್ನ ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಇದೇ ಫೆಬ್ರುವರಿ 15 ರಂದು ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಬಗ್ಗೆ ಪೊಕೊ ಸಂಸ್ಥೆಯು ಟ್ವಿಟ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 5G ಮಾದರಿಯನ್ನು ಹೊಂದಿದ್ದು, ಮೀಡಿಯಾ ಟೆಕ್ Dimensity 810 6nm SoC ಪ್ರೊಸೆಸರ್‌ ನಲ್ಲಿ ಕಾರ್ಯ ನಿರ್ವಹಿಸಲಿದೆ. ಜೊತೆಗೆ 4GB/6GB RAM ಸಾಮರ್ಥ್ಯದ ವೇರಿಯಂಟ್ ಆಯ್ಕೆ ಒಳಗೊಂಡಿರಲಿದೆ. ಇನ್ನುಳಿದಂತೆ ಈ ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ.

ಭಾರತದಲ್ಲಿ ಪೊಕೊ M4 ಪ್ರೊ 5G ಲಾಂಚ್‌ಗೆ ಫಿಕ್ಸ್ ಆಯ್ತು ಮುಹೂರ್ತ!..ಫೀಚರ್ಸ್‌ ಏನು

ಡಿಸ್‌ಪ್ಲೇ ರಚನೆ ಹೇಗೆ
ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ DCI-P3 ವೈಡ್ ಕಲರ್ ಗ್ಯಾಮಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು
ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11-ಆಧಾರಿತ MIUI 12.5 ಕಸ್ಟಮ್ ಸ್ಕಿನ್ ಔಟ್ ಆಫ್ ದಿ ಬಾಕ್ಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಡೈನಾಮಿಕ್ RAM ವಿಸ್ತರಣೆಯನ್ನು ಬೆಂಬಲಿಸುತ್ತದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಭಾರತದಲ್ಲಿ ಪೊಕೊ M4 ಪ್ರೊ 5G ಲಾಂಚ್‌ಗೆ ಫಿಕ್ಸ್ ಆಯ್ತು ಮುಹೂರ್ತ!..ಫೀಚರ್ಸ್‌ ಏನು

ಕ್ಯಾಮೆರಾ ಸೆನ್ಸಾರ್ ಎಷ್ಟು
ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್‌ ಅನ್ನು ಒಳಗೊಂಡಿದೆ. ಇದು 119-ಡಿಗ್ರಿ ಲೆನ್ಸ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಕ್ಯಾಮೆರಾ ಸೆಟಪ್‌ ನೈಟ್ ಮೋಡ್ ಸೇರಿದಂತೆ ಕೃತಕ ಬುದ್ಧಿಮತ್ತೆ (AI) ಚಾಲಿತ ಫೀಚರ್ಸ್‌ಗಳ ಪಟ್ಟಿಯಿಂದ ಬೆಂಬಲಿತವಾಗಿದೆ. ಅಲ್ಲದೆ ಇದು LED ಫ್ಲ್ಯಾಷ್‌ನೊಂದಿಗೆ ಜೋಡಿಸಲ್ಪಟ್ಟಿದೆ.

ಬ್ಯಾಟರಿ ಮತ್ತು ಇತರೆ
ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, NFC, FM ರೇಡಿಯೋ, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್ ಎಕ್ಸ್-ಆಕ್ಸಿಸ್ ಲೀನಿಯರ್ ಮೋಟಾರ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

Best Mobiles in India

English summary
Poco M4 Pro 5G Launch in India on February 15: Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+