ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌! ಫೀಚರ್ಸ್‌ ಹೇಗಿದೆ?

|

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಪೊಕೊ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಈ ಹೊಸ ಸ್ಮಾರ್ಟ್‌ಫೋನ್‌ ಅನ್ನು ಪೊಕೊ M4 ಪ್ರೊ 5g ಎಂದು ಹೆಸರಿಸಲಾಗಿದೆ. ಇದು ಇದೇ ನವೆಂಬರ್ 9ರಂದು ಜಾಗತಿಕವಾಗಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

ಪೊಕೊ

ಹೌದು, ಪೊಕೊ ಕಂಪೆನಿ ಹೊಸ ಪೊಕೊ M4 ಪ್ರೊ 5g ಸ್ಮಾರ್ಟ್‌ಫೋನ್‌ ಬಿಡುಗಡೆಗೆ ವೇದಿಕೆ ಸಿದ್ದಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅಲ್ಟ್ರಾ-ಫಾಸ್ಟ್ ಪ್ರೊಸೆಸರ್ ಬಲವನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಸಹ ಪಡೆದುಕೊಂಡಿರುವ ಸಾದ್ಯತೆ ಇದೆ. ಸದ್ಯ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಹಾಗೂ ವಿನ್ಯಾಸ ಬಗ್ಗೆ ಆನ್‌ಲೈನ್‌ನಲ್ಲಿ ಮಾಹಿತಿ ಸೋರಿಕೆಯಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಪೊಕೊ M4 ಪ್ರೊ ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ
90Hz ರಿಫ್ರೆಶ್‌ ರೇಟ್‌ ಹೊಂದಿದ್ದು, 20:9 ರಚನೆಯ ಅನುಪಾತ ಹೊಂದಿರಲಿದೆ. ಜೊತೆಗೆ ಈ ಡಿಸ್‌ಪ್ಲೇ 399 ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ 84.97 % ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಪೊಕೊ M4 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಅಥವಾ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 11 ಸಾಫ್ಟ್‌ವೇರ್ ಔಟ್-ಆಫ್-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಬಹಿರಂಗಪಡಿಸಿದೆ. ಜೊತೆಗೆ 8GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಪೊಕೊ M4 ಪ್ರೊ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ f/1.79 ವೈಡ್‌ ಆಂಗಲ್‌ ಲೆನ್ಸ್‌ ಹೊಂದಿರುವ ಸಾಧ್ಯತೆ ಇದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿರುವ ಸಾಧ್ಯತೆ ಇದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್ ಜೂಮ್, ಆಟೋ ಫ್ಲ್ಯಾಶ್, ಫೇಸ್‌ ಡಿಟೆಕ್ಷನ್‌, ಟಚ್‌ ಟು ಫೋಕಸ್‌ ಅನ್ನು ಒಳಗೊಂಡಿರಲಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ M4 ಪ್ರೊ ಸ್ಮಾರ್ಟ್‌ಫೋನ್‌ ಅಧಿಕೃತ ಟೀಸರ್ ಮೂಲಕ 5000 mAh ಸಾಮರ್ಥ್ಯದ ಬ್ಯಾಟರಿ ಹೊಂದಿರುವ ಸಾಧ್ಯತೆ ಇದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ ಎಂದು ಬಹಿರಂಗಪಡಿಸಿದ್ದಾರೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ, ಜಿಪಿಎಸ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಎಕ್ಸೆಲೋಮೀಟರ್, ಏಂಬಿಯಂಟ್ ಲೈಟ್ ಸೆನ್ಸಾರ್, ಗೈರೋಸ್ಕೋಪ್‌ ಮತ್ತು ಪ್ರಾಕ್ಸಿಮಿಟಿ ಸೆನ್ಸರ್ ಗಳನ್ನು ಒಳಗೊಂಡಿರುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಪೊಕೊ M4 ಪ್ರೊ ಸ್ಮಾರ್ಟ್‌ಫೋನ್‌ ಮುಂದಿನ ವಾರ ನವೆಂಬರ್ 9 ರಂದು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಭಾರತದಲ್ಲಿ ಬಿಡುಗಡೆ ದಿನಾಂಕವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ, ಆದರೆ ವದಂತಿಗಳ ಪ್ರಕಾರ ಇದು ಈ ತಿಂಗಳ ಕೊನೆಯಲ್ಲಿ ಲಾಂಚ್‌ ಆಗುವ ಸಾದ್ಯತೆ ಇದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4GB + 128GB, 6GB + 128GB, and 8GB + 128GB ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ. ಇದರ ನಡುವೆ ಪೊಕೊ M4 Pro ಕಳೆದ ತಿಂಗಳು ಚೀನಾದಲ್ಲಿ ಬಿಡುಗಡೆಯಾದ ರೆಡ್ಮಿ Note 11 ರ ಜಾಗತಿಕ ಆವೃತ್ತಿಯಾಗಿದೆ ಎಂದು ವಂದತಿಗಳಿವೆ. ಆದರೂ ಭಾರತದಲ್ಲಿ ರೆಡ್ಮಿ ನೋಟ್‌ 11 ಭಾರತದಲ್ಲಿ ರೆಡ್ಮಿ ನೋಟ್‌ 11T ಆಗಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತದೆ. ಆದ್ದರಿಂದ, ಪೊಕೊ M4 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆಯ ನಂತರ ತಿಳಿಯಲಿದೆ.

Best Mobiles in India

English summary
Official teasers have revealed that that Poco M4 Pro 5G will come packed with an ultra-fast processor.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X