Home
ಸುದ್ದಿಜಾಲ

ಭಾರತಕ್ಕೆ ಎಂಟ್ರಿ ಕೊಟ್ಟ ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌! ವಿಶೇಷತೆ ಏನು?

ಪ್ರಸ್ತುತ ದಿನಗಳಲ್ಲಿ ಪೊಕೊ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ತನ್ನ ವಿಭಿನ್ನ ಮಾದರಿಯ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲ ಪಡೆದಿದೆ. ಜೊತೆಗೆ 33W ಪ್ರೊ ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಬ್ಯಾಟರಿಯನ್ನು ಹೊಂದಿದೆ.

ಪೊಕೊ M4 ಪ್ರೊ 5G

ಹೌದು, ಪೊಕೊ ಕಂಪೆನಿ ಹೊಸ ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಡಾಟ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಡಾಟ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌, 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು DCI-P3 ವೈಡ್ ಕಲರ್ ಗ್ಯಾಮಟ್ ಅನ್ನು ಸಹ ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 11 ಅನ್ನು ಆಧರಿಸಿದ MIUI 12.5 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಮುಂದಿನ ಕೆಲವು ವಾರಗಳಲ್ಲಿ MIUI 13 ಅನ್ನು ಸ್ವೀಕರಿಸುವ ಭರವಸೆ ಇದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಹಾಗೆಯೇ ಅಂತರ್ನಿರ್ಮಿತ RAM ಅನ್ನು ವಾಸ್ತವಿಕವಾಗಿ ವಿಸ್ತರಿಸುವ ಟರ್ಬೊ RAM ಫಿಚರ್ಸ್‌ ಅನ್ನು ಸಹ ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು f/2.45 ಲೆನ್ಸ್‌ ಪಡೆದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಪ್ರೊ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.1, GPS/ A-GPS, ಇನ್ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಒಳಗೊಂಡಿದೆ. ಅಲ್ಲದೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಕೂಡ ಪಡೆದುಕೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಬೆಲೆ 4GB RAM + 64GB ಸ್ಟೋರೇಜ್ ರೂಪಾಂತರಕ್ಕಾಗಿ 14,999.ರೂ ಹೊಂದಿದೆ. ಇನ್ನು 6GB + 128GB ಕಾನ್ಫಿಗರೇಶನ್ ಬೆಲೆ 16,999ರೂ.ಆಗಿದೆ. ಇದಲ್ಲದೆ ಟಾಪ್-ಎಂಡ್ 8GB + 128GB ರೂಪಾಂತರದ ಬೆಲೆ 18,999.ರೂ.ಆಗಿದೆ. ಈ ಸ್ಮಾರ್ಟ್‌ಫೋನ್‌ ಕೂಲ್ ಬ್ಲೂ, ಪೊಕೊ ಯೆಲ್ಲೊ ಮತ್ತು ಪವರ್ ಬ್ಲಾಕ್‌ ಕಲರ್‌ ಆಯ್ಕೆಯನ್ನು ಹೊಂದಿದೆ. ಇದು ಇದೇ ಫೆಬ್ರವರಿ 22 ರಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ದೇಶದಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇದು ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ.

Best Mobiles in India

English summary
Poco M4 Pro 5G include a 90Hz display, 50-megapixel primary camera, and up to 8GB of RAM.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+