ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಲಾಂಚ್‌! ಪ್ರೊಸೆಸರ್‌ ಯಾವುದು?

|

ಪೊಕೊ ಕಂಪೆನಿ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿಗಳಲ್ಲಿ ಒಂದೆನಿಸಿಕೊಂಡಿದೆ. ಅತ್ಯುತ್ತಮ ಡಿಸ್‌ಪ್ಲೇ ವಿನ್ಯಾಸ ಹಾಗೂ ಕ್ಯಾಮೆರಾ ಫೀಚರ್ಸ್‌ಗಳಿಗೆ ಪೊಕೊ ಸ್ಮಾರ್ಟ್‌ಫೋನ್‌ ಸೈ ಎನಿಸಿಕೊಂಡಿದೆ. ಈಗಾಗಲೇ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಹೊಸ ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಹೊಂದಿದೆ.

ಪೊಕೊ M4 ಪ್ರೊ 5G

ಹೌದು, ಪೊಕೊ ಕಂಪೆನಿ ಹೊಸ ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.6-ಇಂಚಿನ ಫುಲ್‌ HD+ LCD ಡಿಸ್‌ಪ್ಲೇ ಹೊಂದಿದೆ. ಜೊತೆಗೆ 90Hz ರಿಫ್ರೆಶ್‌ ರೇಟ್‌ ಅನ್ನು ಹೊಂದಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಪವರ್ ಬ್ಲಾಕ್, ಕೂಲ್ ಬ್ಲೂ ಮತ್ತು ಪೊಕೊ ಹಳದಿ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ DCI-P3 ವೈಡ್ ಕಲರ್ ಗ್ಯಾಮಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11-ಆಧಾರಿತ MIUI 12.5 ಕಸ್ಟಮ್ ಸ್ಕಿನ್ ಔಟ್ ಆಫ್ ದಿ ಬಾಕ್ಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಡೈನಾಮಿಕ್ RAM ವಿಸ್ತರಣೆಯನ್ನು ಬೆಂಬಲಿಸುತ್ತದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್‌ ಅನ್ನು ಒಳಗೊಂಡಿದೆ. ಇದು 119-ಡಿಗ್ರಿ ಲೆನ್ಸ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಕ್ಯಾಮೆರಾ ಸೆಟಪ್‌ ನೈಟ್ ಮೋಡ್ ಸೇರಿದಂತೆ ಕೃತಕ ಬುದ್ಧಿಮತ್ತೆ (AI) ಚಾಲಿತ ಫೀಚರ್ಸ್‌ಗಳ ಪಟ್ಟಿಯಿಂದ ಬೆಂಬಲಿತವಾಗಿದೆ. ಅಲ್ಲದೆ ಇದು LED ಫ್ಲ್ಯಾಷ್‌ನೊಂದಿಗೆ ಜೋಡಿಸಲ್ಪಟ್ಟಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, NFC, FM ರೇಡಿಯೋ, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್ ಎಕ್ಸ್-ಆಕ್ಸಿಸ್ ಲೀನಿಯರ್ ಮೋಟಾರ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 229 ಯೂರೋಗಳು (ಸುಮಾರು 19,648ರೂ)ಬೆಲೆ ಹೊಂದಿದೆ. ಆದರೆ 6GB RAM ಮತ್ತು 128GB ಸ್ಟೋರೇಜ್ ರೂಪಾಂತರದ 249 ಯುರೋಗಳು (ಸುಮಾರು 21,364ರೂ)ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪವರ್ ಬ್ಲಾಕ್, ಕೂಲ್ ಬ್ಲೂ ಮತ್ತು ಪೊಕೊ ಹಳದಿ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿಯೂ ಕೂಡ ಬಿಡುಗಡೆಯಾಗಲಿದೆ. ಆದರೆ ಯಾವಾಗ ಬಿಡುಗಡೆ ಆಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Most Read Articles
Best Mobiles in India

English summary
Poco M4 Pro 5G features a 6.6-inch Full-HD+ LCD display with a 90Hz refresh rate. The phone comes with 240Hz touch sampling rate.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X