ಪೊಕೊ ಸಂಸ್ಥೆಯ ಈ ಸ್ಮಾರ್ಟ್‌ಫೋನಿಗೆ ಬಿಗ್ ಡಿಸ್ಕೌಂಟ್!..5000mAh ಬ್ಯಾಟರಿ!
ದೇಶದ ಸ್ಮಾರ್ಟ್‌ಫೋನ್ ವಲಯದಲ್ಲಿ ಪೊಕೊ ಕಂಪನಿಯು ಭಿನ್ನ ಮೊಬೈಲ್‌ಗಳ ಮೂಲಕ ತನ್ನ ಹೆಜ್ಜೆ ಗುರುತನ್ನು ಮೂಡಿಸಿದೆ. ಪೊಕೊ ಸಂಸ್ಥೆಯು M ಸರಣಿಯಲ್ಲಿ ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ ಗಮನ ಸೆಳೇದಿದ್ದು, ಇದೀಗ ಫೋನ್ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿಶೇಷ ರಿಯಾಯಿತಿ ಪಡೆದುಕೊಂಡಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಪೊಕೊ M4 ಪ್ರೊ ಮೊಬೈಲ್ ಶೇ. 26% ರಷ್ಟು ಡಿಸ್ಕೌಂಟ್ ಹೊಂದಿದ್ದು, ಗ್ರಾಹಕರು 14,870ರೂ. ಗಳ ರಿಯಾಯಿತಿ ಬೆಲೆಗೆ ಖರೀದಿಗೆ ಮಾಡಬಹುದಾಗಿದೆ. ಇದರೊಂದಿಗೆ ಆಯ್ದ ಕೆಲವು ಬ್ಯಾಂಕ್ ಗಳಿಂದ ಕ್ಯಾಶ್‌ಬ್ಯಾಕ್ ಹಾಗೂ ಇತರೆ ಡಿಸ್ಕೌಂಟ್ ಸಹ ಲಭ್ಯವಾಗಲಿವೆ.

ಇನ್ನು ಪೊಕೊ ಸಂಸ್ಥೆಯ ಈ ಮೊಬೈಲ್ 8GB RAM ಸ್ಟೋರೇಜ್ ವೇರಿಯಂಟ್ ಸೌಲಭ್ಯ ಪಡೆದಿದೆ. ಅಲ್ಲದೇ ಇದು ಮೀಡಿಯಾ ಟೆಕ್ ಹಿಲಿಯೋ G96 SoC ಪ್ರೊಸೆಸರ್ ಪವರ್ ನಲ್ಲಿ ಕೆಲಸ ಮಾಡಲಿದೆ. ಹಾಗಾದರೇ ಪೊಕೊ M4 ಪ್ರೊ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್ ಹೇಗಿದೆ
ಪೊಕೊ M4 ಪ್ರೊ ಮೊಬೈಲ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ HD+ ಅಮೋಲೆಡ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಜೊತೆಗೆ 1,000 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಅನ್ನು ಒಳಗೊಂಡಿದ್ದು, 180Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದರೊಂದಿಗೆ ಡಿಸ್‌ಪ್ಲೇಯು 409ppi ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದೆ.

ಪ್ರೊಸೆಸರ್ ಪವರ್ ಮಾಹಿತಿ
ಈ ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ G96 SoC ಪ್ರೊಸೆಸರ್ ಪಡೆದಿದ್ದು, ಆಂಡ್ರಾಯ್ಡ್ 11 ಸಪೋರ್ಟ್ ನೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ 6GB RAM ಮತ್ತು 64 GB, 6GB RAM + 128 GB , 8 GB RAM + 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಯನ್ನು ಪಡೆದಿದೆ. ಇದರ ಜೊತೆಗೆ ಈ ಫೋನ್ 11GB ವರೆಗೆ ಲಭ್ಯವಿರುವ ಮೆಮೊರಿ ವಿಸ್ತರಿಸಲು ಡೈನಾಮಿಕ್ RAM ವಿಸ್ತರಣೆ ಪಡೆದಿದೆ. ಹಾಗೆಯೇ ಮೈಕ್ರೋ ಎಸ್ ಕಾರ್ಡ್ ಸ್ಲಾಟ್ ಮೂಲಕ 1TB ವರೆಗೆ ಬಾಹ್ಯ ಮೆಮೊರಿ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶ ಸಹ ಇದೆ.
ಪೊಕೊ M4 ಪ್ರೊ ಕ್ಯಾಮೆರಾ ಸೆನ್ಸಾರ್
ಈ ಸ್ಮಾರ್ಟ್‌ಫೊನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಪಡೆದಿದೆ. ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬಿಗ್ ಬ್ಯಾಟರಿ ಮತ್ತು ಇತರೆ ಸೌಲಭ್ಯ
ಪೊಕೊ M4 ಪ್ರೊ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದೆ. ಇದಕ್ಕೆ ಪೂರಕವಾಗಿ 33W ಫಾಸ್ಟ್ ಚಾರ್ಜಿಂಗ್ ಸಫೋರ್ಟ್ ಹೊಂದಿದೆ. ಇದರೊಂದಿಗೆ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G LTE, Wi-Fi 802.11 a/b/g/n, ಬ್ಲೂಟೂತ್ v5, 3.5mm ಹೆಡ್‌ಫೋನ್ ಜ್ಯಾಕ್ ಮತ್ತು IR ಬ್ಲಾಸ್ಟರ್ ಸಪೋರ್ಟ್ ಇದೆ.


Click it and Unblock the Notifications








