ಇಂದು ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ ಮೊದಲ ಮಾರಾಟ! ಬೆಲೆ ಎಷ್ಟು?
ಪೊಕೊ ಕಂಪೆನಿ ಕೆಲ ದಿನಗಳ ಹಿಂದೆ ಭಾರತದಲ್ಲಿ ಹೊಸದಾಗಿ ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ ಲಾಂಚ್ ಮಾಡಿತ್ತು. ಈ ಸ್ಮಾರ್ಟ್‌ಫೋನ್ ತನ್ನ ಆಕರ್ಷಕ ಫೀಚರ್ಸ್‌ಗಳಿಂದಾಗಿ ಸಿಕ್ಕಾಪಟ್ಟೆ ಸೌಂಡ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಫಸ್ಟ್ ಸೇಲ್ ಇಂದು(ಮಾ.7) ಇಂದು ಮಧ್ಯಾಹ್ನ 12 ರಿಂದ ಫ್ಲಿಪ್‌ಕಾರ್ಟ್ ಮೂಲಕ ನಡೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.43-ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದ್ದು, 90Hz ನ ರಿಫ್ರೆಶ್ ರೇಟ್ ಅನ್ನು ಹೊಂದಿದೆ.

ಹೌದು, ಪೊಕೊ ಕಂಪೆನಿ ಹೊಸದಾಗಿ ಪರಿಚಯಸಿರುವ ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ ಮೊದಲ ಮಾರಾಟ ಇಂದು(ಮಾ.7)ನಡೆಯಲಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೂರು ವಿಭಿನ್ನ ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಒಳಗೊಂಡಿರುವ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ HD+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದ್ದು, 180Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದೆ. ಹಾಗೆಯೇ 409ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB, 6GB RAM + 128GB , 8GB RAM + 256GB ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ 11GB ವರೆಗೆ ಲಭ್ಯವಿರುವ ಮೆಮೊರಿಯನ್ನು "ವಿಸ್ತರಿಸಲು" ಉಚಿತ ಸಂಗ್ರಹಣೆಯನ್ನು ಬಳಸಿಕೊಳ್ಳಲು ಡೈನಾಮಿಕ್ RAM ವಿಸ್ತರಣೆಯನ್ನು ಸಹ ಹೊಂದಿದೆ. ಹಾಗೆಯೇ ಮೈಕ್ರೋ SD ಸ್ಲಾಟ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11 a/b/g/n, ಬ್ಲೂಟೂತ್ v5, 3.5mm ಹೆಡ್‌ಫೋನ್ ಜ್ಯಾಕ್ ಮತ್ತು IR ಬ್ಲಾಸ್ಟರ್ ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಡಿಟೆಕ್ಷನ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಇ-ಕಾಂಪಾಸ್, ಅಕ್ಸಿಲೆರೊಮೀಟರ್ ಮತ್ತು ಗೈರೊಸ್ಕೋಪ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 6GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಬೆಲೆ 14,999ರೂ.ಆಗಿದೆ. ಆದರೆ 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 16,499ರೂ.ಆಗಿದೆ. ಇದಲ್ಲದೆ 8GB RAM + 256GB ಸ್ಟೋರೇಜ್ ಮಾದರಿಯ ಬೆಲೆ 17,999ರೂ.ಹೊಂದಿದೆ. ಈ ಸ್ಮಾರ್ಟ್‌ಫೋನ್ ಕೂಲ್ ಬ್ಲೂ, ಪೊಕೊ ಹಳದಿ ಮತ್ತು ಪವರ್ ಬ್ಲಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇಂದು ಮಧ್ಯಾಹ್ನ 12 ಗಂಟೆಯ ನಂತರ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ.

ಆಫರ್ ಏನಿದೆ?
ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ ಸೇಲ್ ಆಫರ್‌ನಲ್ಲಿ HDFC ಬ್ಯಾಂಕ್ ಕಾರ್ಡ್ ಹೊಂದಿರುವವರಿಗೆ 1,000 ರಿಯಾಯಿತಿ ಪಡೆದುಕೊಳ್ಳಬಹುದು. ಜೊತೆಗೆ ಫ್ಲಿಪ್‌ಕಾರ್ಟ್ ಆರು ತಿಂಗಳ ಗಾನಾ ಪ್ಲಸ್ ಅನ್ನು ಉಚಿತವಾಗಿ ನೀಡುತ್ತಿದೆ.


Click it and Unblock the Notifications








