Home
ಸುದ್ದಿಜಾಲ

ಪೊಕೊ ಸಂಸ್ಥೆಯ ಈ ಫೋನ್‌ ಅನ್ನು ಈಗ ಸಸ್ತಾ ಬೆಲೆಗೆ ಖರೀದಿಸಬಹುದು!

ಪೊಕೊ ಮೊಬೈಲ್‌ ಸಂಸ್ಥೆಯು ಪ್ರಮುಖ ಬ್ರ್ಯಾಂಡ್‌ಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಪೊಕೊ ಸಂಸ್ಥೆಯ M ಸರಣಿಯ ಫೋನ್‌ಗಳು ಬಜೆಟ್‌ ಪ್ರೈಸ್‌ಟ್ಯಾಗ್‌ ಅನ್ನು ಪಡೆದಿದ್ದು, ಆ ಪೈಕಿ ಸಂಸ್ಥೆಯ ಪೊಕೊ M5 ಸ್ಮಾರ್ಟ್‌ಫೋನ್‌ ತನ್ನ ವರ್ಗದಲ್ಲೇ ಜಬರ್ದಸ್ತ್‌ ಫೀಚರ್ಸ್‌ ಹೊಂದಿದ್ದು, ಇದೀಗ ಸಖತ್ ಡಿಸ್ಕೌಂಟ್‌ ಪಡೆದಿದೆ.

ಹೌದು, ಪ್ರಮುಖ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ನಲ್ಲಿ ಪೊಕೊ M5 ಮೊಬೈಲ್‌ಗೆ ಶೇ. 52% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 6 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 18,999ರೂ. ಆಗಿದ್ದು, ಕೊಡುಗೆಯಲ್ಲಿ ಇದು 8,999ರೂ. ಗಳಿಗೆ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಇತರೆ ಕೊಡುಗೆಗಳು ಸಹ ಲಭ್ಯ ಆಗಲಿವೆ.

ಪೊಕೊ ಸಂಸ್ಥೆಯ ಈ ಫೋನ್‌ ಅನ್ನು ಈಗ ಸಸ್ತಾ ಬೆಲೆಗೆ ಖರೀದಿಸಬಹುದು!

ಈ ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಹಾಗಾದರೇ ಪೊಕೊ M5 ಮೊಬೈಲ್‌ ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಪೊಕೊ M5 ಫೋನಿನ ಫೀಚರ್ಸ್‌ ಹೀಗಿವೆ

ಪೊಕೊ M5 ಮೊಬೈಲ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 30Hz ನಿಂದ 90Hz ವರೆಗಿನ ವೇರಿಯಬಲ್ ರಿಫ್ರೆಶ್ ರೇಟ್‌ ಅನ್ನು ಸಪೋರ್ಟ್ ಮಾಡುತ್ತದೆ. ಈ ಡಿಸ್‌ಪ್ಲೇ 240Hz, DCI-P3 ಬಣ್ಣದ ಹರವುಗಳ ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಒಳಗೊಂಡಿದೆ.

ಪೊಕೊ ಸಂಸ್ಥೆಯ ಈ ಮೊಬೈಲ್‌ ಆಕ್ಟಾ-ಕೋರ್ 6nm ಮೀಡಿಯಾ ಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಇದು ಆಂಡ್ರಾಯ್ಡ್‌ 12 ಬೆಂಬಲ ಪಡೆದಿದೆ. ಹಾಗೆಯೇ 6GB RAM ಮತ್ತು 128GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿದ್ದು, ಟರ್ಬೊ RAM ಫೀಚರ್ಸ್‌ ಅನ್ನು ಬಳಸಿಕೊಂಡು RAM ಅನ್ನು ವಿಸ್ತರಿಸಲು ಅನುವು ಇದೆ.

ಪೊಕೊ M5 ಮೊಬೈಲ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಮತ್ತು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.

ಈ ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, 18W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಇದೆ. ಇನ್ನು ಈ ಬ್ಯಾಟರಿಯು ಒಂದೇ ಚಾರ್ಜ್‌ನಲ್ಲಿ ಎರಡು ದಿನಗಳ ಪ್ಲೇಟೈಮ್ ಅನ್ನು ಒದಗಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್‌ ಆಯ್ಕೆ ಪಡೆದಿದೆ.

ಅಲ್ಲದೇ ಪೊಕೊ M5 ಮೊಬೈಲ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಹಾಗೂ 6GB RAM + 128GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಅನ್ನು ಹೊಂದಿದೆ. ಈ ಫೋನ್‌ ಐಸಿ ಬ್ಲೂ, ಪೊಕೊ ಹಳದಿ ಮತ್ತು ಪವರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
POCO M5 available at huge price drop on flipkart. check offer price, specifications and other details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+