ಇಂದು ಪೊಕೊ M5 ಫಸ್ಟ್ ಸೇಲ್; ಬೆಲೆ ಎಷ್ಟು?..ಆಫರ್ ಏನು?
ಪೊಕೊ ಮೊಬೈಲ್ ಸಂಸ್ಥೆಯು ಇತ್ತೀಚಿಗಷ್ಟೆ ಹೊಸದಾಗಿ ಪರಿಚಯಿಸಿರುವ ಪೊಕೊ M5 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಸೆ. 13) ಮಧ್ಯಾಹ್ನ 1 ರಿಂದ ಇ-ಕಾಮರ್ಸ್ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಫಸ್ಟ್ ಸೇಲ್ ಆರಂಭವಾಗಲಿದೆ. ಇನ್ನು 5,000mAh ಬ್ಯಾಟರಿ ಪವರ್ ಹಾಗೂ ಟ್ರಿಪಲ್ ಕ್ಯಾಮೆರಾ ಫೀಚರ್ಸ್‌ಗಳು ಈ ಸ್ಮಾರ್ಟ್‌ಫೋನಿನ ಪ್ರಮುಖ ಹೈಲೈಟ್ಸ್‌ಗಳಾಗಿವೆ.

ಹೌದು, ಪೊಕೊ M5 ಸ್ಮಾರ್ಟ್‌ಫೋನ್ ಇಂದು ಮೊದಲ ಮಾರಾಟ ನಡೆಯಲಿದೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ಹೊಂದಿದ್ದು, ಮುಖ್ಯ ಸೆನ್ಸಾರ್ 50 ಮೆಗಾ ಪಿಕ್ಸಲ್ ಆಗಿದೆ. ಫಾಸ್ಟ್ ಚಾರ್ಜಿಂಗ್ ಬೆಂಬಲಿತ 5,000mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಈ ಫೋನ್ 4GB+64GB ಮತ್ತು 6GB+128GB ಸಂಗ್ರಹ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಪಡೆದಿದೆ. ಇನ್ನು ಈ ಫೋನಿನ 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನುಳಿದಂತೆ ಈ ಫೋನಿನ ಬೆಲೆ ಎಷ್ಟು ಮತ್ತು ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಪೊಕೊ M5 ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 30Hz ನಿಂದ 90Hz ವರೆಗಿನ ವೇರಿಯಬಲ್ ರಿಫ್ರೆಶ್ ರೇಟ್ ಅನ್ನು ಬೆಂಬಲಿಸುತ್ತದೆ. ಈ ಡಿಸ್‌ಪ್ಲೇ 240Hz, DCI-P3 ಬಣ್ಣದ ಹರವುಗಳ ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ಪೊಕೊ M5 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಹಿಲಿಯೋ G99 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಟರ್ಬೊ RAM ಫೀಚರ್ಸ್ ಅನ್ನು ಬಳಸಿಕೊಂಡು RAM ಅನ್ನು ವಿಸ್ತರಿಸಲು ಅನುವು ಮಾಡಿಕೊಡುತ್ತದೆ.

ಕ್ಯಾಮೆರಾ ಸೆಟ್‌ಅಪ್ ಎಷ್ಟಿದೆ?
ಪೊಕೊ M5 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ
ಪೊಕೊ M5 ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಬ್ಯಾಟರಿಯು ಒಂದೇ ಚಾರ್ಜ್‌ನಲ್ಲಿ ಎರಡು ದಿನಗಳ ಪ್ಲೇಟೈಮ್ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಪೊಕೊ M5 ಸ್ಮಾರ್ಟ್‌ಫೋನ್ ಭಾರತದಲ್ಲಿ ಬೇಸ್ ಮಾಡೆಲ್ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 12,499ರೂ. ಬೆಲೆ ಹೊಂದಿದೆ. ಇನ್ನು ಈ ಫೋನ್ 6GB RAM + 128GB ಸ್ಟೋರೇಜ್ ಮಾದರಿಯ ಆಯ್ಕೆಗೆ 14,499ರೂ. ಬೆಲೆ ಹೊಂದಿದೆ. ಇದು ಐಸಿ ಬ್ಲೂ, ಪೊಕೊ ಹಳದಿ ಮತ್ತು ಪವರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಇದೇ ಸೆಪ್ಟೆಂಬರ್ 13 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಐಸಿಐಸಿಐ ಬ್ಯಾಂಕ್ ಕಾರ್ಡ್‌ನಿಂದ ಖರೀದಿಸಿದರೆ 1,500ರೂ. ರಿಯಾಯಿತಿ ಸಿಗಲಿದೆ.


Click it and Unblock the Notifications








