Home
ಸುದ್ದಿಜಾಲ

ಮೊಬೈಲ್‌ ಪ್ರಿಯರ ಗಮನ ಸೆಳೆದಿದ್ದ ಈ ಫೋನ್‌ ಬೆಲೆಯಲ್ಲಿ ಈಗ 50% ಡಿಸ್ಕೌಂಟ್‌!

ಪೊಕೊ ಮೊಬೈಲ್‌ ಕಂಪನಿಯು ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಮೊಬೈಲ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಅವುಗಳ ಪೈಕಿ ಪೊಕೊ M ಸರಣಿಯಲ್ಲಿ ಪೊಕೊ M5 ಸ್ಮಾರ್ಟ್‌ಫೋನ್‌ ಗಮನ ಸೆಳೆದ ಮೊಬೈಲ್‌ಗಳಲ್ಲಿ ಒಂದು. ಇದೀಗ ಈ ಫೋನ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಭರ್ಜರಿ ರಿಯಾಯಿತಿ ಬೆಲೆಗೆ ಕಾಣಿಸಿಕೊಂಡಿದೆ.

ಹೌದು, ಜನಪ್ರಿಯ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಪೊಕೊ M5 ಸ್ಮಾರ್ಟ್‌ಫೋನ್‌ ಶೇ. 52% ರಷ್ಟು ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 6 GB RAM + 128 GB ಸ್ಟೋರೇಜ್‌ ವೇರಿಯಂಟ್‌ 18,999ರೂ. ಗಳ ದರ ಹೊಂದಿದ್ದು, ಸದ್ಯ ಫ್ಲಿಪ್‌ಕಾರ್ಟ್‌ ಕೊಡುಗೆಯಲ್ಲಿ 8,999ರೂ. ಗಳಿಗೆ ಗ್ರಾಹಕರು ಖರೀದಿ ಮಾಡಲು ಅವಕಾಶ ಇದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳಿಂದ ಕೊಡುಗೆ ಕೂಡಾ ದೊರೆಯುತ್ತದೆ.

ಮೊಬೈಲ್‌ ಪ್ರಿಯರ ಗಮನ ಸೆಳೆದಿದ್ದ ಈ ಫೋನ್‌ ಬೆಲೆಯಲ್ಲಿ ಈಗ 50% ಡಿಸ್ಕೌಂಟ್‌!

ಇನ್ನು ಪೊಕೊ M5 ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ ಸೌಲಭ್ಯವನ್ನು ಒಳಗೊಂಡಿದ್ದು, ಇದರ ಜೊತೆಗೆ ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಇದಲ್ಲದೇ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಇನ್ನುಳಿದಂತೆ ಪೊಕೊ M5 ಮೊಬೈಲ್‌ನ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್‌ ಮತ್ತು ರಚನೆ

ಪೊಕೊ M5 ಮೊಬೈಲ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದಿದ್ದು, 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 30Hz ನಿಂದ 90Hz ವರೆಗಿನ ವೇರಿಯಬಲ್ ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸುತ್ತದೆ. ಈ ಡಿಸ್‌ಪ್ಲೇ 240Hz, DCI-P3 ಬಣ್ಣದ ಹರವುಗಳ ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ.

ಮೊಬೈಲ್‌ ಪ್ರಿಯರ ಗಮನ ಸೆಳೆದಿದ್ದ ಈ ಫೋನ್‌ ಬೆಲೆಯಲ್ಲಿ ಈಗ 50% ಡಿಸ್ಕೌಂಟ್‌!

ಪ್ರೊಸೆಸರ್‌ ಕಾರ್ಯವೈಖರಿ ಹೇಗೆ

ಪೊಕೊದ ಈ ಫೋನ್‌ ಆಕ್ಟಾ ಕೋರ್ 6nm ಮೀಡಿಯಾ ಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ ಸಾಮರ್ಥ್ಯ ಅನ್ನು ಒಳಗೊಂಡಿದೆ. ಇದು ಆಂಡ್ರಾಯ್ಡ್‌ 12 ಸಪೋರ್ಟ್‌ನೊಂದಿಗೆ ಕೆಲಸ ಮಾಡುತ್ತದೆ. ಹಾಗೆಯೇ 6GB RAM ಮತ್ತು 128GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯ ಅನ್ನು ಹೊಂದಿದೆ. ಇದಲ್ಲದೆ ಟರ್ಬೊ RAM ಫೀಚರ್ಸ್‌ ಅನ್ನು ಬಳಸಿಕೊಂಡು RAM ಅನ್ನು ವಿಸ್ತರಿಸಲು ಅವಕಾಶ ಮಾಡುತ್ತದೆ.

ಮೊಬೈಲ್‌ ಪ್ರಿಯರ ಗಮನ ಸೆಳೆದಿದ್ದ ಈ ಫೋನ್‌ ಬೆಲೆಯಲ್ಲಿ ಈಗ 50% ಡಿಸ್ಕೌಂಟ್‌!

ತ್ರಿವಳಿ ಕ್ಯಾಮೆರಾ ಸೆನ್ಸಾರ್

ಪೊಕೊ ಸಂಸ್ಥೆಯ ಈ ಮೊಬೈಲ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆಯನ್ನು ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಮತ್ತು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳ ಮಾಹಿತಿ

ಪೊಕೊ M5 ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಈ ಬ್ಯಾಟರಿಯು ಒಂದೇ ಚಾರ್ಜ್‌ನಲ್ಲಿ ಎರಡು ದಿನಗಳ ಪ್ಲೇಟೈಮ್ ಅನ್ನು ಒದಗಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಹೊಂದಿದೆ.

Best Mobiles in India

English summary
POCO M5 received highest price cut on flipkart. check offer price and specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+