ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಪೊಕೊ M5 ಫೋನ್! ಏನೆಲ್ಲಾ ನಿರೀಕ್ಷಿಸಬಹುದು?
ಪೊಕೊ ಕಂಪೆನಿ ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ತನ್ನ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ಹೊಸ ಪೊಕೊ M5 ಸ್ಮಾರ್ಟ್‌ಫೋನ್ ಪರಿಚಯಿಸಲು ಪ್ಲಾನ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತಕ್ಕೆ ಎಂಟ್ರಿ ನೀಡಲಿದೆ ಎಂದು ವರದಿಯಾಗಿದೆ.

ಹೌದು, ಪೊಕೊ ಕಂಪೆನಿಯ ಹೊಸ ಪೊಕೊ M5 ಸ್ಮಾರ್ಟ್‌ಫೋನ್ ಸೆಪ್ಟೆಂಬರ್ ತಿಂಗಳ ಆರಂಭದಲ್ಲಿ ಭಾರತದಲ್ಲಿ ಲಾಂಚ್ ಆಗಲಿದೆ. ಈ ಸ್ಮಾರ್ಟ್‌ಫೋನ್ ಈಗಾಗಲೇ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಬಜೆಟ್ ಪ್ರೈಸ್‌ಟ್ಯಾಗ್‌ನಲ್ಲಿ ಬರುವ ಸಾದ್ಯತೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G99 SoC ಪ್ರೊಸೆಸರ್ ಬಲದಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರುವ ಸಾಧ್ಯತೆಯಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ಗಾತ್ರ ಎಷ್ಟಿರಬಹುದು?
ಪೊಕೊ M5 ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿರುವ ಸಾದ್ಯತೆಯಿದೆ. ಇನ್ನು ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರಲಿದೆ. ಇದು 60 Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿರಲಿದೆ. ಜೊತೆಗೆ 394 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿರಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಹೊಂದಿರಲಿದೆ ಎಂದು ವರದಿಯಾಗಿದೆ.

ಪ್ರೊಸೆಸರ್ ಬಲ ಯಾವುದು?
ಪೊಕೊ M5 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G99 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ. ಇದು ಆಂಡ್ರಾಯ್ಡ್ 12 ಔಟ್-ಆಫ್-ದಿ-ಬಾಕ್ಸ್ ನಲ್ಲಿ ರನ್ ಆಗಲಿದೆ ಎನ್ನಲಾಗಿದೆ. ಹಾಗೆಯೇ 6 GB RAM ಮತ್ತು 64 GB ಇಂಟರ್ ಸ್ಟೋರೇಜ್ ಅನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್ ಏನಿರಲಿದೆ?
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್ ಏನು? ಬೆಲೆ ಎಷ್ಟಿರಬಹುದು?
ಪೊಕೊ M5 ಸ್ಮಾರ್ಟ್‌ಫೋನ್ 33W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, VoLTE
ಬ್ಲೂಟೂತ್ v5.0, ವೈಫೈ, USB-C v2.0, ಐಆರ್ ಬ್ಲಾಸ್ಟರ್ ಅನ್ನು ಬೆಂಬಲಿಸಲಿದೆ. ಪೊಕೊ M5 ಸ್ಮಾರ್ಟ್‌ಫೋನ್ ಭಾರತದಲ್ಲಿ 15,000ರೂ. ಒಳಗಿನ ಬೆಲೆಯಲ್ಲಿ ದೊರೆಯುವ ಸಾದ್ಯತೆಯಿದೆ. ಇದು ಸೆಪ್ಟೆಂಬರ್ ಆರಂಭದಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

ಇದಲ್ಲದೆ ಪೊಕೊ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಹೊಸ ಪೊಕೊ F4 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಫೋನ್ 6.67 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಅಮೆಜಾನ್ ಪ್ರೈಮ್ ವೀಡಿಯೊದಲ್ಲಿ HDR10 ಪ್ಲಸ್ ಹಾಗೂ ನೆಟ್‌ಫ್ಲಿಕ್ಸ್‌ನಲ್ಲಿ ಡಾಲ್ಬಿ ವಿಷನ್ ಅನ್ನು ಬೆಂಬಲಿಸಲಿದೆ. ಅಲ್ಲದೆ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, ಡಾಲ್ಬಿ ಅಟ್ಮೋಸ್ ಮತ್ತು ಡಾಲ್ಬಿ ವಿಷನ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.


Click it and Unblock the Notifications








