ಭಾರತದಲ್ಲಿ ಪೊಕೊ M5 ಸ್ಮಾರ್ಟ್‌ಫೋನ್ ಬಿಡುಗಡೆ! ಬೆಲೆ ಎಷ್ಟು?
ಭಾರತದಲ್ಲಿ ಪೊಕೊ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಒಳ್ಳೆಯ ಬೇಡಿಕೆ ಇದೆ. ಇದೇ ಕಾರಣಕ್ಕೆ ಪೊಕೊ ಕಂಪೆನಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ತನ್ನ ಬಹು ನಿರೀಕ್ಷಿತ ಪೊಕೊ M5 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ವಾಟರ್-ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇಯೊಂದಿಗೆ ಬರುತ್ತದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G99 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಹೌದು, ಪೊಕೊ ಕಂಪೆನಿ ತನ್ನ ಪೊಕೊ M5 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಈ ಫೋನ್ ಟರ್ಬೊ RAM ಫೀಚರ್ಸ್ ಅನ್ನು ಹೊಂದಿದ್ದು, RAM ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಜೊತೆಗೆ 18W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಏನೆಲ್ಲಾ ಫೀಚರ್ಸ್ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಪೊಕೊ M5 ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 30Hz ನಿಂದ 90Hz ವರೆಗಿನ ವೇರಿಯಬಲ್ ರಿಫ್ರೆಶ್ ರೇಟ್ ಅನ್ನು ಬೆಂಬಲಿಸುತ್ತದೆ. ಈ ಡಿಸ್‌ಪ್ಲೇ 240Hz, DCI-P3 ಬಣ್ಣದ ಹರವುಗಳ ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ಪೊಕೊ M5 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 6nm ಮೀಡಿಯಾಟೆಕ್ ಹಿಲಿಯೋ G99 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಟರ್ಬೊ RAM ಫೀಚರ್ಸ್ ಅನ್ನು ಬಳಸಿಕೊಂಡು RAM ಅನ್ನು ವಿಸ್ತರಿಸಲು ಅನುವು ಮಾಡಿಕೊಡುತ್ತದೆ.

ಕ್ಯಾಮೆರಾ ಸೆಟ್‌ಅಪ್ ಎಷ್ಟಿದೆ?
ಪೊಕೊ M5 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ
ಪೊಕೊ M5 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಬ್ಯಾಟರಿಯು ಒಂದೇ ಚಾರ್ಜ್‌ನಲ್ಲಿ ಎರಡು ದಿನಗಳ ಪ್ಲೇಟೈಮ್ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಪೊಕೊ M5 ಸ್ಮಾರ್ಟ್‌ಫೋನ್ ಭಾರತದಲ್ಲಿ ಬೇಸ್ ಮಾಡೆಲ್ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 12,499ರೂ. ಬೆಲೆ ಹೊಂದಿದೆ. ಇನ್ನು ಈ ಫೋನ್ 6GB RAM + 128GB ಸ್ಟೋರೇಜ್ ಮಾದರಿಯ ಆಯ್ಕೆಗೆ 14,499ರೂ. ಬೆಲೆ ಹೊಂದಿದೆ. ಇದು ಐಸಿ ಬ್ಲೂ, ಪೊಕೊ ಹಳದಿ ಮತ್ತು ಪವರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಇದೇ ಸೆಪ್ಟೆಂಬರ್ 13 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ.

ಆಫರ್ ಏನಿದೆ?
ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇ ಸೇಲ್ ಸಮಯದಲ್ಲಿ, ಐಸಿಐಸಿಐ ಮತ್ತು ಆಕ್ಸಿಸ್ ಬ್ಯಾಂಕ್ ಕಾರ್ಡ್ ಮೂಲಕ ಈ ಸ್ಮಾರ್ಟ್‌ಫೋನ್ ಖರೀದಿಸಿದರೆ 1,500ರೂ.ಗಳ ಫ್ಲಾಟ್ ರಿಯಾಯಿತಿಯನ್ನು ಪಡೆಯಬಹುದು. ಜೊತೆಗೆ ಪೊಕೊ ಡಿಸ್ನಿ+ ಹಾಟ್‌ಸ್ಟಾರ್‌ಗೆ ಉಚಿತ 1-ವರ್ಷದ ಚಂದಾದಾರಿಕೆಯನ್ನು ಮತ್ತು ಆರು ತಿಂಗಳ ಉಚಿತ ಸ್ಕ್ರೀನ್ ರಕ್ಷಣೆಯನ್ನು ನೀಡುತ್ತದೆ ಎಂದು ಹೇಳಿಕೊಂಡಿದೆ.


Click it and Unblock the Notifications








