Home
ಸುದ್ದಿಜಾಲ

ಇಂದು ಪೊಕೊ M6 5G ಫಸ್ಟ್‌ ಸೇಲ್‌!..ಬೆಲೆಯೂ ಅಗ್ಗ, ಆಫರ್‌ ಕೂಡಾ ಇದೆ!

ಪೊಕೊ ಮೊಬೈಲ್ ಸಂಸ್ಥೆಯು ಇತ್ತೀಚಿಗಷ್ಟೆ ನೂತನವಾಗಿ ಲಾಂಚ್ ಮಾಡಿರುವ ಪೊಕೊ M6 5G ಫೋನ್‌ ಅಗ್ಗದ ಬೆಲೆಯ ಮೂಲಕ ಗ್ರಾಹಕರನ್ನು ಸೆಳೆದಿದೆ. ಈ ಮೊಬೈಲ್‌ ಇಂದು (ಡಿಸೆಂಬರ್‌ 26 ರಂದು) ಮಧ್ಯಾಹ್ನ 12 ರಿಂದ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ನಲ್ಲಿ ಮೊದಲ ಮಾರಾಟ ಪ್ರಾರಂಭ ಮಾಡಲಿದೆ. ಈ ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ.

ಹೌದು, ಪೊಕೊ M6 5G ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ ಇಂದು ಫಸ್ಟ್‌ ಸೇಲ್‌ ಪ್ರಾರಂಭಿಸಲಿದೆ. ಈ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಸೆನ್ಸಾರ್ ಆಗಿದೆ. ಹಾಗೆಯೇ ಈ ಮೊಬೈಲ್‌ 4GB RAM ಮತ್ತು 128GB ಸ್ಟೋರೇಜ್‌, 6GB RAM ಮತ್ತು 128GB ಸ್ಟೋರೇಜ್‌ ಹಾಗೂ 8GB RAM ಮತ್ತು 256GB ಆಯ್ಕೆಗಳನ್ನು ಒಳಗೊಂಡಿದೆ.

ಇಂದು ಪೊಕೊ M6 5G ಫಸ್ಟ್‌ ಸೇಲ್‌!..ಬೆಲೆಯೂ ಅಗ್ಗ, ಆಫರ್‌ ಕೂಡಾ ಇದೆ!

ಪೊಕೊ M6 5G ಮೊಬೈಲ್‌ ಆರಂಭಿಕ 4GB RAM ಮತ್ತು 128GB ವೇರಿಯಂಟ್‌ ಬೆಲೆಯು 10,499ರೂ. ಆಗಿದ್ದು, 6GB RAM ಮತ್ತು 128GB ವೇರಿಯಂಟ್‌ ಬೆಲೆಯು 11,499ರೂ. ಆಗಿದೆ. ಇನ್ನು ಈ ಫೋನ್‌ ಓರಿಯನ್ ಬ್ಲೂ ಮತ್ತು ಗ್ಯಾಲಕ್ಟಿಕ್ ಬ್ಲ್ಯಾಕ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ಪೊಕೊ M6 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಪೊಕೊ M6 5G ಫೀಚರ್ಸ್‌ ಹೀಗಿವೆ

POCO M6 5G ಮೊಬೈಲ್‌ 6.74 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದ್ದು, 600nits ಗರಿಷ್ಠ ಬ್ರೈಟ್‌ನೆಸ್‌ ನೀಡಲಿದೆ. ಇನ್ನು ಡಿಸ್‌ಪ್ಲೇ 180Hz ಟಚ್‌ ಸ್ಯಾಂಪ್ಲಿಂಗ್‌ ರೇಟ್‌ನೊಂದಿಗೆ ಬರಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಹೊಂದಿದೆ.

ಇಂದು ಪೊಕೊ M6 5G ಫಸ್ಟ್‌ ಸೇಲ್‌!..ಬೆಲೆಯೂ ಅಗ್ಗ, ಆಫರ್‌ ಕೂಡಾ ಇದೆ!

ಹಾಗೆಯೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್‌ ಬಲ ಪಡೆದಿದ್ದು, ಇದು ಆಂಡ್ರಾಯ್ಡ್‌ 13 ಆಧಾರಿತ MIUI 14 ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB, 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆ ಪಡೆದಿದೆ. ಇದಲ್ಲದೆ ಮೈಕ್ರೋ-SD ಕಾರ್ಡ್ ಸ್ಲಾಟ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಇದೆ.

ಪೊಕೊ M6 5G ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಕ್ಯಾಮೆರಾದೊಂದಿಗೆ PDAF ಮತ್ತು LED ಫ್ಲ್ಯಾಷ್ ಅನ್ನು ಸಹ ಲಭ್ಯ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒದಗಿಸಲಾಗಿದೆ.

ಪೊಕೊದ ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಒಳಗೊಂಡಿದ್ದು, ಇದು 18W ಫಾಸ್ಟ್‌ ಚಾರ್ಜಿಂಗ್ ಅನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ Wi-Fi 5, ಡ್ಯುಯಲ್ ಸಿಮ್, 5G SA & NSA, LTE, GSM, WCMDA, ಬ್ಲೂಟೂತ್ 5.3, ಮತ್ತು GPS ಜೊತೆಗೆ GLONASS, Beidou, ಮತ್ತು Galileo ಬೆಂಬಲವನ್ನು ಒಳಗೊಂಡಿದೆ. ಇದಲ್ಲದೆ ಸ್ಪ್ಲಾಶ್ ಪ್ರತಿರೋಧ, ಧೂಳಿನ ರಕ್ಷಣೆಯಂತಹ ಹೆಚ್ಚುವರಿ ಫೀಚರ್ಸ್‌ ಸಹ ಇವೆ.

ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB RAM ಮತ್ತು 128GB ಸ್ಟೋರೇಜ್‌, 6GB RAM ಮತ್ತು 128GB ಸ್ಟೋರೇಜ್‌ ಹಾಗೂ 8GB RAM ಮತ್ತು 256GB ಸ್ಟೋರೇಜ್‌ ಆಯ್ಕೆ ಪಡೆದಿದೆ. ಇನ್ನು ಈ ಫೋನ್‌ ಓರಿಯನ್ ಬ್ಲೂ ಮತ್ತು ಗ್ಯಾಲಕ್ಟಿಕ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದ್ದು, ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
POCO M6 5G first sale in india today via flipkart. offer, price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+