ಈ ಅಗ್ಗದ 5G ಮೊಬೈಲ್ ಈಗ ಮತ್ತಷ್ಟು ಸಸ್ತಾ ಬೆಲೆಗೆ ಲಭ್ಯ; ಪಕ್ಕಾ ವಾವ್ ಅಂತೀರಾ?
ಜನಪ್ರಿಯ ಇ ಕಾಮರ್ಸ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಈಗ ಬಿಗ್ ಬಿಲಿಯನ್ ಡೇಸ್ 2024 (Flipkart Big Billion Days Sale 2024) ಸೇಲ್ ಲೈವ್ ಇದ್ದು, ಸ್ಮಾರ್ಟ್‌ಫೋನ್‌ಗಳು ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇವೆ. ಇನ್ನು ಮೊಬೈಲ್ ಖರೀದಿಸುವ ಗ್ರಾಹಕರು ಲಭ್ಯ ಇರುವ ಬ್ಯಾಂಕ್ ಆಫರ್‌ಗಳನ್ನು ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿ ಪಡೆಯಬಹುದು. ಇದೀಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಪೊಕೊ M6 5G (POCO M6 5G) ಮೊಬೈಲ್ ಗ್ರಾಹಕರು ಆಫರ್ ದರದಲ್ಲಿ ಖರೀದಿ ಮಾಡಬಹುದು.
ಹೌದು, ದೈತ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಪೊಕೊ M6 5G (POCO M6 5G) ಮೊಬೈಲ್ ಶೇ. 33% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನಿನ 4 GB RAM + 64 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 7,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಆಫರ್ ಪಡೆದುಕೊಂಡರೆ, 7499ರೂ. ಗಳಿಗೆ ಕೂಡಾ ಲಭ್ಯವಾಗಲಿವೆ.

ಅಂದಹಾಗೆ ಪೊಕೊ M6 5G ಮೊಬೈಲ್ 4GB RAM ಮತ್ತು 128GB, 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಸ್ಟೋರೇಜ್ ಆಯ್ಕೆಗಳನ್ನು ಇದು ಒಳಗೊಂಡಿದೆ. ಹಾಗೆಯೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಇನ್ನುಳಿದಂತೆ ಪೊಕೊ M6 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಪೊಕೊ M6 5G ಫೋನಿನ ಫೀಚರ್ಸ್ ಮಾಹಿತಿ
ಪೊಕೊ M6 5G ಮೊಬೈಲ್ 6.74 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದೆ. ಅಲ್ಲದೇ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸಪೋರ್ಟ್ ಮಾಡಲಿದ್ದು, 600nits ಗರಿಷ್ಠ ಬ್ರೈಟ್‌ನೆಸ್ ಒದಗಿಸಲಿದೆ. ಇನ್ನು ಡಿಸ್‌ಪ್ಲೇ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಬೆಂಬಲ ಪಡೆದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಒಳಗೊಂಡಿದೆ.
ಪೊಕೊ M6 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 13 ಆಧಾರಿತ MIUI 14 ನಲ್ಲಿ ಕಾರ್ಯ ಮಾಡುತ್ತದೆ. ಇದರ ಜೊತೆಗೆ 4GB RAM ಮತ್ತು 128GB, 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಸ್ಟೋರೇಜ್ ವೇರಿಯೆಂಟ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಅಲ್ಲದೇ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಇದೆ.
ಪೊಕೊ M6 5G ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇನ್ನು ಕ್ಯಾಮೆರಾ ಜೊತೆಗೆ PDAF ಮತ್ತು LED ಫ್ಲ್ಯಾಷ್ ಅನ್ನು ಆಯ್ಕೆ ಕೂಡಾ ಲಭ್ಯ. ಇನ್ನು ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಪೊಕೊ M6 5G ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ Wi-Fi 5, ಡ್ಯುಯಲ್ ಸಿಮ್, 5G, ಬ್ಲೂಟೂತ್ 5.3, ಮತ್ತು GPS ಸಪೋರ್ಟ್ ಒಳಗೊಂಡಿದೆ.
ಪೊಕೊ M6 5G ಮೊಬೈಲ್ 4GB RAM + 128GB, 6GB RAM + 128GB ಹಾಗೂ 8GB RAM + 256GB ಸ್ಟೋರೇಜ್ ಆಯ್ಕೆಯಲ್ಲಿ ಗ್ರಾಹಕರು ಖರೀದಿಸಬಹುದು. ಇನ್ನು ಈ ಮೊಬೈಲ್ ಓರಿಯನ್ ಬ್ಲೂ ಮತ್ತು ಗ್ಯಾಲಕ್ಟಿಕ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಸಿಗಲಿದ್ದು, ಖರೀದಿದಾದರು ಫ್ಲಿಪ್‌ಕಾರ್ಟ್ ತಾಣದ ಮೂಲಕ ಕೊಳ್ಳಬಹುದು.


Click it and Unblock the Notifications








