Poco: ಪೊಕೊ M6 ಪ್ರೊ 4G ಸ್ಮಾರ್ಟ್‌ಫೋನ್ ಲಾಂಚ್! 1TBವರಗೆ ಸ್ಟೋರೇಜ್ ವಿಸ್ತರಿಸಲು ಅವಕಾಶ!
ಪೊಕೊ ಕಂಪೆನಿ ಟೆಕ್ ವಲಯದಲ್ಲಿ ಬಳಕೆದಾರರಿಗೆ ಅಚ್ಚರಿಯ ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ತನ್ನ ಪೊಕೊ M6 ಪ್ರೊ ಸ್ಮಾರ್ಟ್‌ಫೋನ್‌ನ 4G ರೂಪಾಂತರದ ಆಯ್ಕೆಯನ್ನು ಗ್ಲೋಬಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದರ 5G ರೂಪಾಂತರವು ಈಗಾಗಲೇ ಭಾರತದಲ್ಲಿ ಬಿಡುಗಡೆ ಆಗಿರುವುದನ್ನು ಗಮನಿಸಬಹುದು.
ಹೌದು, ಪೊಕೊ M6 ಪ್ರೊ 4G ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ರಚನೆ ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯೊಂದಿಗೆ ಬರುತ್ತದೆ. ಹಾಗಾದ್ರೆ ಪೊಕೊ M6 ಪ್ರೊ 4G ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಪೊಕೊ M6 ಪ್ರೊ 4G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಪೊಕೊ M6 ಪ್ರೊ 4G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,400 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ 120Hz ವರೆಗಿನ ರಿಫ್ರೆಶ್ ರೇಟ್‌ನೊಂದಿಗೆ, 2,160Hz ವರೆಗಿನ ಟಚ್ ಸ್ಯಾಪ್ಲಿಂಗ್ ರೇಟ್ ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 1,300 ನಿಟ್ಸ್ ವರೆಗೆ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ಹೊಂದಿದೆ. ಈ ಡಿಸ್‌ಪ್ಲೆಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯೊಂದಿಗೆ ಬರುತ್ತದೆ.
ಪೊಕೊ M6 ಪ್ರೊ 4G ಪ್ರೊಸೆಸರ್ ಯಾವುದು?
ಪೊಕೊ M6 ಪ್ರೊ 4G ಸ್ಮಾರ್ಟ್‌ಫೋನ್ 6nm ಮೀಡಿಯಾಟೆಕ್ ಹಿಲಿಯೋ G99-ಅಲ್ಟ್ರಾ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಮಾಲಿ-G57 MC2 GPU ಸರ್ಪೊಟ್ ಪಡೆದಿದೆ. ಇನ್ನು ಆಂಡ್ರಾಯ್ಡ್ 13 ಆಧಾರಿತ MIUI 14 ನೊಂದಿಗೆ ರನ್ ಆಗಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಪೊಕೊ M6 ಪ್ರೊ 4G ಕ್ಯಾಮೆರಾ ಸೆಟಪ್ ಏನಿದೆ?
ಪೊಕೊ M6 ಪ್ರೊ 4G ಸ್ಮಾರ್ಟ್‌ಪೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಪಡೆದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.
ಪೊಕೊ M6 ಪ್ರೊ 4G ಬ್ಯಾಟರಿ ಮತ್ತು ಇತರೆ ಸೌಲಭ್ಯ
ಪೊಕೊ M6 ಪ್ರೊ 4G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 67W ವೈರ್ಡ್ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, GPS, ಬ್ಲೂಟೂತ್ 5.2, NFC ಮತ್ತು USB ಟೈಪ್-ಸಿ ಸಂಪರ್ಕವನ್ನು ಸಹ ಬೆಂಬಲಿಸುತ್ತದೆ. ಇದು ಭದ್ರತೆಗಾಗಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP54 ರೇಟಿಂಗ್‌ನೊಂದಿಗೆ ಬರುತ್ತದೆ.

Poco M6 Pro 4G ಬೆಲೆ ಮತ್ತು ಲಭ್ಯತೆ
ಪೊಕೊ M6 ಪ್ರೊ 4G ಸ್ಮಾರ್ಟ್‌ಫೋನ್ 8GB + 256GB ಸ್ಟೋರೇಜ್ ಆಯ್ಕೆಗೆ $199 (ಸುಮಾರು 16,500ರೂ)ಬೆಲೆಯನ್ನು ಹೊಂದಿದೆ. ಇನ್ನು 12GB + 512GB ಕಾನ್ಫಿಗರೇಶನ್ ಆಯ್ಕೆಯ ಬೆಲೆ $249 (ಸುಮಾರು 20,700ರೂ)ಆಗಿದೆ. ಈ ಸ್ಮಾರ್ಟ್‌ಫೋನ್ ಕಪ್ಪು, ನೀಲಿ ಮತ್ತು ನೇರಳೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಫೋನ್‌ನ 4G ರೂಪಾಂತರವೂ ಭಾರತದಲ್ಲಿ ಎಂದಿನಿಂದ ಲಭ್ಯವಾಗಲಿದೆ ಅನ್ನೊದು ಮುಂದಿನ ದಿನಗಳಲ್ಲಿ ತಿಳಿಯಲಿದೆ.


Click it and Unblock the Notifications








