ಇತ್ತೀಚಿಗಷ್ಟೆ ಬಿಡುಗಡೆಯಾದ ಈ ಹೊಸ ಮೊಬೈಲ್ ಬೆಲೆಯಲ್ಲಿ ಭಾರೀ ಇಳಿಕೆ!
ಪೊಕೊ ಮೊಬೈಲ್ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ನೂತನ ಪೊಕೊ M6 ಪ್ರೊ 5G ಫೋನ್ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಫೋನ್ ಬಜೆಟ್ ಪ್ರೈಸ್‌ಟ್ಯಾಗ್ ಅನ್ನು ಪಡೆದಿದ್ದು, ಗ್ರಾಹಕರು ಭರ್ಜರಿ ಆಫರ್‌ನಲ್ಲಿ ಖರೀದಿ ಮಾಡಬಹುದಾಗಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಪೊಕೊ M6 ಪ್ರೊ 5G ಮೊಬೈಲ್ ಶೇ. 25% ರಷ್ಟು ಡಿಸ್ಕೌಂಟ್ ಪಡೆದಿದೆ. 4GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 15,999ರೂ. ಆಗಿದ್ದು, ಆಫರ್‌ನಲ್ಲಿ 11,999ರೂ. ದರದಲ್ಲಿ ಲಭ್ಯ ಇದೆ. ಇದರೊಂದಿಗೆ ಇತರೆ ಕೊಡುಗೆಗಳು ಕೂಡಾ ಸಿಗಲಿವೆ.

ಅಂದಹಾಗೆ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಮುಖ್ಯ ಸೆನ್ಸಾರ್ 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಇನ್ನು ಈ ಫೋನ್ ಪವರ್ ಬ್ಲ್ಯಾಕ್ ಹಾಗೂ ಫಾರೆಸ್ಟ್ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.
ಪೊಕೊ M6 ಪ್ರೊ 5G ಮೊಬೈಲ್ ಡಿಸ್‌ಪ್ಲೇ ಹಾಗೂ ವಿನ್ಯಾಸ ಮಾಹಿತಿ :
ಪೊಕೊ M6 ಪ್ರೊ 5G ಮೊಬೈಲ್ 6.79 ಇಂಚಿನ ಫುಲ್ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಹೊಂದಿದ್ದು, 2460 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಪಡೆದಿದೆ. ಇದರ ಜೊತೆಗೆ 90Hz ಅಡಾಪ್ಟಿವ್ ರಿಫ್ರೆಶ್ ರೇಟ್ ಆಯ್ಕೆ ಇದ್ದು, 91% ಸ್ಕ್ರೀನ್-ಟು-ಬಾಡಿ ಅನುಪಾತ, 550 nits ಬ್ರೈಟ್‌ನೆಸ್ ಸೌಲಭ್ಯ ಹೊಂದಿದೆ. ಅಲ್ಲದೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಇದೆ.
ಪೊಕೊ M6 ಪ್ರೊ 5G ಮೊಬೈಲ್ ಪ್ರೊಸೆಸರ್ ಕಾರ್ಯವೈಖರಿ :
ಪೊಕೊ M6 ಪ್ರೊ 5G ಮೊಬೈಲ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಸಹ ಪಡೆದಿದೆ. ಹಾಗೆಯೇ 6GB + 64GB ಮತ್ತು 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಸಹ ಇದೆ. ಅಲ್ಲದೇ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಇದೆ.
ಪೊಕೊ M6 ಪ್ರೊ 5G ಮೊಬೈಲ್ ಕ್ಯಾಮೆರಾ ಸೆನ್ಸಾರ್ ಹೀಗಿದೆ :
ಪೊಕೊ M6 ಪ್ರೊ 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್‌ನ ಸೆನ್ಸಾರ್ ಅನ್ನು ಪಡೆದಿದ್ದು, ಜೊತೆಗೆ ಎಲ್‌ಇಡಿ ಫ್ಲಾಶ್ ಲೈಟ್ ಆಯ್ಕೆ ಕೂಡಾ ಪಡೆದಿದೆ. ಸೆಕೆಂಡಿರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್‌ನ ಡೆಪ್ತ್ ಸೆನ್ಸರ್ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸಾಮರ್ಥ್ಯದಲ್ಲಿ ಇದೆ.
ಪೊಕೊ M6 ಪ್ರೊ 5G ಮೊಬೈಲ್ ಬ್ಯಾಟರಿ ಹಾಗೂ ಇತರೆ ಆಯ್ಕೆಗಳ ಆಯ್ಕೆ :
ಪೊಕೊ M6 ಪ್ರೊ 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, 18W ಫಾಸ್ಟ್ ಚಾರ್ಜಿಂಗ್‌ಗೆ ಸಪೋರ್ಟ್ ಪಡೆದಿದೆ. ಅಲ್ಲದೇ ಈ ಫೋನ್ 8.17mm ಸ್ಲಿಮ್ ರಚನೆ ಪಡೆದಿದ್ದು, ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP53 ರೇಟಿಂಗ್ ಸೌಲಭ್ಯ ಸಹ ಹೊಂದಿದೆ. ಇದರ ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆ ಇದೆ.


Click it and Unblock the Notifications