Home
ಸುದ್ದಿಜಾಲ

ಪೊಕೊದ ಈ ಫೋನಿಗೆ ಬರೋಬ್ಬರಿ 31% ಡಿಸ್ಕೌಂಟ್‌ ಲಭ್ಯ: ಮೊಬೈಲ್‌ ಪ್ರಿಯರಿಗೆ ಅಚ್ಚರಿ

ಟೆಕ್‌ ಲೋಕದಲ್ಲಿ ಸಾಕಷ್ಟು ಸದ್ದು ಮಾಡಿದ್ದ ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್‌ ಇದೀಗ ಡಿಸ್ಕೌಂಟ್‌ನಲ್ಲಿ ಸೇಲ್‌ ಆಗುತ್ತಿದೆ. ಅಮೆಜಾನ್‌ ತಾಣದಲ್ಲಿ ಡಿಸ್ಕೌಂಟ್‌ ಪಡೆದುಕೊಂಡಿರುವ ಈ ಸ್ಮಾರ್ಟ್‌ಫೋನ್‌ ಗ್ರಾಹಕರನ್ನು ಅಚ್ಚರಿಗೆ ದೂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ಸೈಟ್‌ನಲ್ಲಿ ಬಿಗ್‌ ಆಫರ್‌ ಪಡೆದುಕೊಂಡಿದೆ. ಇದರಿಂದ ಮೂಲಬೆಲೆಗಿಂತ ಅತಿ ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್‌ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಹಾಗಾದ್ರೆ ಸ್ಮಾರ್ಟ್‌ಫೋನ್‌ ಮೇಲಿನ ಡಿಸ್ಕೌಂಟ್‌ ಎಷ್ಟಿದೆ? ಡಿಸ್ಕೌಂಟ್‌ ನಂತರದ ಬೆಲೆ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊದ ಈ ಫೋನಿಗೆ ಬರೋಬ್ಬರಿ 31% ಡಿಸ್ಕೌಂಟ್‌ ಲಭ್ಯ: ಮೊಬೈಲ್‌ ಪ್ರಿಯರಿಗೆ ಅಚ್ಚರಿ

ಪೊಕೊ M6 ಪ್ರೊ 5G ಮೇಲಿನ ಡಿಸ್ಕೌಂಟ್‌ ಎಷ್ಟು?
ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನಿನ 4GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯನ್ನು ಅಮೆಜಾನ್‌ ತಾಣದಲ್ಲಿ 15,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಸ್ಮಾರ್ಟ್‌ಫೋನ್‌ ಮೇಲೆ ಅಮೆಜಾನ್‌ನಲ್ಲಿ 31% ಡಿಸ್ಕೌಂಟ್‌ ಪಡೆದುಕೊಂಡಿದೆ. ಆದರಿಂದ ಸ್ಮಾರ್ಟ್‌ಫೋನ್‌ ಅನ್ನು ನೀವು ಕೇವಲ 10,999ರೂ ಬೆಲೆಗೆ ಖರೀದಿಸಬಹುದಾಗಿದೆ. ಇದಲ್ಲದೆ ವಿವಿಧ ಬ್ಯಾಂಕ್‌ ಕಾರ್ಡ್‌ಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಕೂಡ ಲಭ್ಯವಾಗಲಿದೆ. ಈ ಫೋನ್‌ ಫಾರೆಸ್ಟ್‌ ಗ್ರೀನ್‌ ಕಲರ್‌ ಆಯ್ಕೆಯಲ್ಲಿ ದೊರೆಯಲಿದೆ.

ಪೊಕೊ M6 ಪ್ರೊ 5G ಫೋನ್‌ ಫೀಚರ್ಸ್‌ ಹೇಗಿದೆ?
ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ 6.79 ಇಂಚಿನ ಫುಲ್‌ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 2460 x 1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 30/48/60/90Hz ಅಡಾಪ್ಟಿವ್ ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 91% ಸ್ಕ್ರೀನ್-ಟು-ಬಾಡಿ ಅನುಪಾತದಲ್ಲಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಪಡೆದುಕೊಂಡಿದೆ.

ಪೊಕೊ M6 ಪ್ರೊ 5G ಫೋನ್‌ ಪ್ರೊಸೆಸರ್‌ ಯಾವುದು?
ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯನ್ನೂ ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ ಬರೋಬ್ಬರಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.

ಪೊಕೊದ ಈ ಫೋನಿಗೆ ಬರೋಬ್ಬರಿ 31% ಡಿಸ್ಕೌಂಟ್‌ ಲಭ್ಯ: ಮೊಬೈಲ್‌ ಪ್ರಿಯರಿಗೆ ಅಚ್ಚರಿ

ಪೊಕೊ M6 ಪ್ರೊ 5G ಕ್ಯಾಮೆರಾ ಸೆಟಪ್‌ ಏನಿದೆ?
ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು ಎಲ್‌ಇಡಿ ಫ್ಲಾಶ್ ಲೈಟ್‌ ಆಯ್ಕೆ ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮರಾವನ್ನು ಪಡೆದುಕೊಂಡಿದೆ.

ಪೊಕೊ M6 ಪ್ರೊ 5G ಫೋನ್‌ ಬ್ಯಾಟರಿ ಹಾಗೂ ಇತರೆ
ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ. ಈ ಫೋನ್ 8.17mm ಸ್ಲಿಮ್ ಆಗಿದ್ದು, ಮತ್ತು ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP53 ರೇಟಿಂಗ್‌ ನೊಂದಿಗೆ ಪ್ಯಾಕ್‌ ಆಗಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆಯನ್ನು ಸಹ ಒಳಗೊಂಡಿದೆ.

Best Mobiles in India

English summary
POCO M6 Pro 5G phone Gets 31% Discount in amazon website: Offer Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+