ಪೊಕೊದ ಈ ಹೊಸ 5G ಫೋನ್ ಭಾರೀ ಡಿಸ್ಕೌಂಟ್ ಬೆಲೆಗೆ ಲಭ್ಯ!
ಫ್ಲಿಪ್‌ಕಾರ್ಟ್ ತಾಣದಲ್ಲಿ ಈಗ ಬಿಗ್ ಬಿಲಿಯನ್ ಡೇಸ್ ಸೇಲ್ ನಡೆಯುತ್ತಿದೆ. ಈ ಮಾರಾಟದಲ್ಲಿ ಫೋನ್‌ಗಳು, ಲ್ಯಾಪ್‌ಟಾಪ್, ಸ್ಮಾರ್ಟ್ ಟಿವಿ ಸೇರಿದಂತೆ ಇತರೆ ಹಲವು ಉತ್ಪನ್ನಗಳಿಗೆ ಹೆಚ್ಚಿನ ರಿಯಾಯಿತಿ ಲಭ್ಯ ಮಾಡಲಾಗಿದೆ. ಅದರಲ್ಲಿಯೂ ಮೊಬೈಲ್‌ಗಳು ಅಧಿಕ ಡಿಸ್ಕೌಂಟ್ ಪಡೆದಿವೆ. ಕೊಡುಗೆಯಲ್ಲಿ ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ ಗಮನ ಸೆಳೆದಿದೆ.
ಹೌದು, ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ 2023 ಮಾರಾಟದಲ್ಲಿ ಮೊಬೈಲ್‌ಗಳ ಆಫರ್ ಗ್ರಾಹಕರನ್ನು ಆಕರ್ಷಿಸಿವೆ. ಈ ಫೋನ್ 6GB RAM + 128GB ವೇರಿಯಂಟ್ ಮಾಡೆಲ್ ಲಭ್ಯ ಇರುವ ಎಲ್ಲ ಕೊಡುಗೆ ಸೇರಿದಂತೆ 9,999ರೂ. ಗಳ ರಿಯಾಯಿತಿ ದರದಲ್ಲಿ ಖರೀದಿಗೆ ಸಿಗಲಿದೆ. ಇದರ ಜೊತೆಗೆ ಆಯ್ದ ಬ್ಯಾಂಕ್‌ಗಳ ಮೂಲಕ ಹೆಚ್ಚುವರಿ ಕೊಡುಗೆ ಕೂಡಾ ದೊರೆಯುತ್ತದೆ.

ಹಾಗೆಯೇ ಈ ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್ ಪವರ್ ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಡ್ಯುಯಲ್ ಕ್ಯಾಮೆರಾ ರಚನೆ ಇದ್ದು, 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಮುಖ್ಯ ಕ್ಯಾಮೆರಾ ಇದೆ. ಹಾಗಾದರೆ ಪೊಕೊ M6 ಪ್ರೊ 5G ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಹಾಗೂ ವಿನ್ಯಾಸ ಹೇಗಿದೆ
ಪೊಕೊ M6 ಪ್ರೊ 5G ಫೋನ್ 6.79 ಇಂಚಿನ ಫುಲ್ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದಿದ್ದು, 2460 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿದೆ. ಇದರ ಜೊತೆಗೆ 90Hz ಅಡಾಪ್ಟಿವ್ ರಿಫ್ರೆಶ್ ರೇಟ್ ಆಯ್ಕೆ ಇದ್ದು, 91% ಸ್ಕ್ರೀನ್-ಟು-ಬಾಡಿ ಅನುಪಾತ, 550 nits ಬ್ರೈಟ್‌ನೆಸ್ ಸೌಲಭ್ಯ ಹೊಂದಿದೆ. ಅಲ್ಲದೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಇದೆ.
ಪ್ರೊಸೆಸರ್ ಪವರ್ ಹೇಗಿದೆ
ಪೊಕೊ ಸಂಸ್ಥೆಯ ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಬೆಂಬಲ ಸಹ ಪಡೆದಿದೆ. ಹಾಗೆಯೇ 6GB + 64 GB ಮತ್ತು 6GB + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಸಹ ಇದೆ. ಅಲ್ಲದೇ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಕೂಡಾ ಇದೆ.
ಕ್ಯಾಮೆರಾ ಸೆನ್ಸಾರ್ ಹೇಗಿದೆ
ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ನ ಸೆನ್ಸಾರ್ ಅನ್ನು ಹೊಂದಿದ್ದು, ಜೊತೆಗೆ ಎಲ್‌ಇಡಿ ಫ್ಲಾಶ್ ಲೈಟ್ ಆಯ್ಕೆ ಸಹ ಪಡೆದಿದೆ. ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ನ ಡೆಪ್ತ್ ಸೆನ್ಸರ್ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ.
ಬ್ಯಾಟರಿ ಹಾಗೂ ಇತರೆ ಆಯ್ಕೆಗಳು ಏನು
ಪೊಕೊ ಕಂಪನಿಯ ಈ ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಪಡೆದಿದ್ದು, 18W ಫಾಸ್ಟ್ ಚಾರ್ಜಿಂಗ್‌ಗೆ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ 8.17mm ಸ್ಲಿಮ್ ರಚನೆ ಪಡೆದಿದ್ದು, ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP53 ರೇಟಿಂಗ್ ಸೌಲಭ್ಯ ಸಹ ಹೊಂದಿದೆ. ಇದರ ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆ ಇದೆ.


Click it and Unblock the Notifications








