Home
ಸುದ್ದಿಜಾಲ

Poco: 256GB ಸ್ಟೋರೇಜ್‌ ಆಯ್ಕೆಯಲ್ಲಿ ಪೊಕೊ M6 ಪ್ರೊ 5G ಲಾಂಚ್‌! ... ಬೆಲೆ ಮಾತ್ರ ಅಗ್ಗ

ಪೊಕೊ (Poco) ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಹೆಚ್ಚಿನ ಬೇಡಿಕೆ ಪಡೆದುಕೊಂಡಿವೆ. ಪೊಕೊ ಕಳೆದ ಆಗಸ್ಟ್‌ನಲ್ಲಿ ಭಾರತದಲ್ಲಿ ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್‌ (Poco M6 Pro 5G smartphone) ಅನ್ನು ಅನಾವರಣ ಮಾಡಿತ್ತು. ಈ ಫೋನ್‌ಗಳಿಗೆ ಭಾರತದಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾದ ಬೆನ್ನಲ್ಲೇ ಈಗ ಈ ಫೋನ್‌ನ ವಿಶೇಷ ವೇರಿಯಂಟ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಲಾಗಿದೆ.

ಹೌದು, ಬೇಡಿಕೆ ಹೆಚ್ಚಾದಂತೆ ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್‌ನ 256GB ಇಂಟರ್‌ ಸ್ಟೋರೇಜ್‌ ಆಯ್ಕೆಯ ಫೋನ್‌ ಅನ್ನು ಲಾಂಚ್‌ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್‌ ಕ್ಯಾಮೆರಾ ಆಯ್ಕೆ ಪಡೆದಿದ್ದು, ಈ ಬೆಲೆಯಲ್ಲಿ ಅತ್ಯುತ್ತಮ ಫೋನ್‌ ಆಗಿ ಗುರುತಿಸಿಕೊಂಡಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಭಾರತದಲ್ಲಿ ಇದರ ಬೆಲೆ ಎಷ್ಟು ಅನ್ನೋದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

256GB ಸ್ಟೋರೇಜ್‌ ಆಯ್ಕೆಯಲ್ಲಿ ಪೊಕೊ M6 ಪ್ರೊ 5G ಲಾಂಚ್‌! ... ಬೆಲೆ ಮಾತ್ರ ಅಗ್ಗ

ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್‌: ಮೊದಲೇ ತಿಳಿಸಿದಂತೆ ಪೊಕೊ ಕಳೆದ ಆಗಸ್ಟ್‌ನಲ್ಲಿ ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು 4GB RAM + 64GB ಇಂಟರ್‌ ಸ್ಟೋರೇಜ್‌ ಮತ್ತು 4GB RAM + 128GB ಇಂಟರ್‌ ಸ್ಟೋರೇಜ್‌ ಹಾಗೂ 6GB RAM + 128GB ಇಂಟರ್‌ ಸ್ಟೋರೇಜ್‌ನ ಮೂರು ವೇರಿಯಂಟ್‌ನಲ್ಲಿ ಲಾಂಚ್‌ ಮಾಡಲಾಗಿತ್ತು. ಆದರೆ, ಈಗ 8GB RAM + 256GB ಇಂಟರ್‌ ಸ್ಟೋರೇಜ್‌ ಆಯ್ಕೆಯೊಂದಿಗೆ ಹೊಸ ವೇರಿಯಂಟ್‌ ಅನ್ನು ಪರಿಚಯಿಸಲಾಗಿದೆ.

ಇನ್ನು ಇಷ್ಟೊಂದು ದೊಡ್ಡ ಸ್ಟೋರೇಜ್‌ ಆಯ್ಕೆಯ ಫೋನ್‌ ಹೆಚ್ಚಿನ ಬೆಲೆ ಹೊಂದಿರಬಹುದು ಎಂದು ನೀವು ಅಂದುಕೊಂಡರೆ ನಿಮ್ಮ ಅನಿಸಿಕೆ ತಪ್ಪು ಯಾಕೆಂದರೆ ಈ ಸ್ಟೋರೇಜ್‌ ಆಯ್ಕೆಯ ಫೋನ್‌ ಅನ್ನು 12,999 ರೂ.ಗಳ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ನ ಸಾಮಾನ್ಯ ದರ 14,999 ರೂ.ಗಳಾಗಿದ್ದು, ನೀವು ಆಯ್ದ ಬ್ಯಾಂಕ್‌ ಕಾರ್ಡ್ ಬಳಕೆ ಮಾಡುವ ಮೂಲಕ ಆಫರ್ 12,999 ರೂ.ಗಳಲ್ಲಿ ಖರೀದಿ ಮಾಡಬಹುದು.

ಇನ್ನು ಪೊಕೊ M6 ಪ್ರೊ 5G ಫೋನ್‌ನ 4GB RAM + 64GB ಸ್ಟೋರೇಜ್ ವೇರಿಯಂಟ್‌ಗೆ 9,999 ರೂ.ಗಳ ಬೆಲೆ ಇದ್ದರೆ, 4GB RAM + 128GB ಸ್ಟೋರೇಜ್ ವೇರಿಯಂಟ್‌ಗೆ 10,999 ರೂ., 6GB RAM + 128GB ಸ್ಟೋರೇಜ್ ವೇರಿಯಂಟ್‌ಗೆ 11,999 ರೂ.ಗಳ ಬೆಲೆ ನಿಗದಿ ಪಡಿಸಲಾಗಿದೆ. ಹಾಗಿದ್ರೆ ಮತ್ಯಾಕೆ ತಡ ಬನ್ನಿ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಕಡೆ ಕಣ್ಣಾಯಿಸೋಣ.

256GB ಸ್ಟೋರೇಜ್‌ ಆಯ್ಕೆಯಲ್ಲಿ ಪೊಕೊ M6 ಪ್ರೊ 5G ಲಾಂಚ್‌! ... ಬೆಲೆ ಮಾತ್ರ ಅಗ್ಗ

ಪೊಕೊ M6 ಪ್ರೊ 5G ಫೋನ್‌ ಡಿಸ್‌ಪ್ಲೇ ವಿವರ: ಈ ಸ್ಮಾರ್ಟ್‌ಫೋನ್ 6.79 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. 90Hz ರಿಫ್ರೆಶ್ ರೇಟ್, 500 ನಿಟ್ಸ್ ಬ್ರೈಟ್‌ನೆಸ್ ಆಯ್ಕೆ ಹಾಗೂ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಪಡೆದುಕೊಂಡಿದೆ. ಎಲ್ಲಕ್ಕಿಂತ ಮಿಗಿಲಾಗಿ ಈ ಫೋನ್‌ ವಿಶೇಷ ಹಾಗೂ ಆಕರ್ಷಕ ಶೈಲಿಯನ್ನು ಪಡೆದಿದೆ.

ಪೊಕೊ M6 ಪ್ರೊ 5G ಫೋನ್‌ ಪ್ರೊಸೆಸರ್‌ ಮಾಹಿತಿ: ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 4 ಜನ್ 2 4nm (Octa Core Snapdragon 4 Gen 2 4nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಅತ್ಯುತ್ತಮವಾಗಿ ಕೆಲಸ ಮಾಡಲಿದೆ. ಇದರೊಂದಿಗೆ ಈ ಫೋನ್‌ ಆಂಡ್ರಾಯ್ಡ್‌ 13 ಓಎಸ್‌ ಅನ್ನು ರನ್‌ ಮಾಡಲಿದೆ. ಪರಿಣಾಮ ವಿಡಿಯೋ ವೀಕ್ಷಣೆಯಲ್ಲಿ ಅಥವಾ ಗೇಮಿಂಗ್‌ನಲ್ಲಿ ಉತ್ತಮ ಅನುಭವ ಸಿಗಲಿದೆ.

ಪೊಕೊ M6 ಪ್ರೊ 5G ಫೋನ್‌ ಕ್ಯಾಮೆರಾ ರಚನೆ: ಇನ್ನು ಈ ಬಜೆಟ್‌ ಬೆಲೆಯ ಫೋನ್ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ ಹಾಗೂ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ನ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದ್ದು, ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 8 ಮೆಗಾಪಿಕ್ಸೆಲ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಈ ಸೆನ್ಸರ್‌ಗಳು ಎಲ್ಇಡಿ ಫ್ಲ್ಯಾಶ್‌ ನೊಂದಿಗೆ ಹಲವಾರು ಫೀಚರ್ಸ್‌ ಅನ್ನು ಪಡೆದುಕೊಂಡಿವೆ.

256GB ಸ್ಟೋರೇಜ್‌ ಆಯ್ಕೆಯಲ್ಲಿ ಪೊಕೊ M6 ಪ್ರೊ 5G ಲಾಂಚ್‌! ... ಬೆಲೆ ಮಾತ್ರ ಅಗ್ಗ

ಪೊಕೊ M6 ಪ್ರೊ 5G ಫೋನ್‌ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000mAh ಬ್ಯಾಟರಿಯೊಂದಿಗೆ ಕಾಣಿಸಿಕೊಂಡಿದ್ದು, ಇದು 18W ವೇಗದ ಚಾರ್ಜಿಂಗ್‌ಗೆ ಬೆಂಬಲ ನೀಡಲಿದೆ. ಇದರೊಂದಿಗೆ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್, ಇನ್‌ಫ್ರಾರೆಡ್ ಸೆನ್ಸರ್, ಡ್ಯುಯಲ್ ನ್ಯಾನೋ ಸಿಮ್ ಮತ್ತು ಎಸ್‌ಡಿ ಕಾರ್ಡ್ ಪೋರ್ಟ್, ಟೈಪ್-ಸಿ ಚಾರ್ಜಿಂಗ್ ಪೋರ್ಟ್, 3.5 ಎಂಎಂ ಆಡಿಯೊ ಜ್ಯಾಕ್, ಬಾಟಮ್ ಫೈರಿಂಗ್ ಲೌಡ್‌ಸ್ಪೀಕರ್ ಸೇರಿದಂತೆ ವಿವಿಧ ಸೌಲಭ್ಯ ಪಡೆದಿದೆ.

Best Mobiles in India

English summary
Poco M6 Pro 5G smartphone with 256GB internal storage option has been launched. This smartphone has got a 50 megapixel camera and is recognized as the best phone at this price.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+