ನಾಳೆ ಹೊಸ POCO ಫೋನ್ ಸೇಲ್; ಕೇವಲ 9,999 ರೂ.! ಆಫರ್ ಏನಿದೆ, ವಿಶೇಷತೆಗಳೇನು?
ಪೊಕೊ ಇತ್ತೀಚೆಗೆ ಹೊಸ 5G ಫೋನನ್ನು ಬಿಡುಗಡೆ ಮಾಡಿದೆ. ಇದನ್ನು ಬಜೆಟ್ ವಿಭಾಗದಲ್ಲಿ ಪರಿಚಯಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಪೊಕೊ M7 5G (POCO M7 5G) ಹೆಸರನೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಈಗಾಗಲೇ, ತನ್ನ ಸ್ಟೈಲಿಶ್ ಲುಕ್ ಮತ್ತು ವೈಶಿಷ್ಟ್ಯಗಳೊಂದಿಗೆ ಮೊಬೈಲ್ ಪ್ರಿಯರ ಗಮನ ಸೆಳೆದಿದೆ. ಅಂದಹಾಗೆ, ಈ ಪೊಕೊ ಮೊಬೈಲ್ ನಾಳೆ (ಮಾರ್ಚ್ 7) ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ. ಬನ್ನಿ, ಈ ಫೋನಿನ ಬೆಲೆ, ಲಭ್ಯತೆ ಮತ್ತು ಕಂಪನಿ ಯಾವೆಲ್ಲಾ ಆಫರ್ ನೀಡುತ್ತಿದೆ ಎನ್ನುವುದನ್ನು ತಿಳಿಯೋಣ.
ಪೊಕೊ M7 5G ಮೊಬೈಲ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗಲಿದೆ. ಇದರ ವಿಶೇಷತೆಗಳನ್ನು ನೋಡುವುದಾದರೆ, ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.88 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 8GB RAM + 128GB ಸ್ಟೋರೇಜ್, 5160mAh ಬ್ಯಾಟರಿ ಸೇರಿದಂತೆ ಹಲವು ವಿಶೇಷತೆಗಳೊಂದಿಗೆ ಬಿಡುಗಡೆಯಾಗಿದೆ. ಅಗ್ಗದ ಮೊಬೈಲ್ ಖರೀದಿಸಲು ಬಯಸುವವರಿಗೆ ಪೊಕೊ M7 5G ಉತ್ತಮ ಆಯ್ಕೆಯಾಗಿದೆ.

ಪೊಕೊ M7 5G ಬೆಲೆ ಮತ್ತು ಲಭ್ಯತೆ
ಪೊಕೊ M7 5G ಫೋನಿನ 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ ಕೇವಲ 9,999 ಆಗಿದೆ. 8GB RAM + 128GB ಸ್ಟೋರೇಜ್ ರೂಪಾಂತರವು 10,999 ರೂ.ಗೆ ಬಿಡುಗಡೆಯಾಗಲಿದೆ. ಮೊದಲ ದಿನ ಈ ಫೋನ್ ಖರೀದಿಸುವ ಗ್ರಾಹಕರಿಗೆ ವಿಶೇಷ ಉಡುಗೊರೆ ನೀಡಲಾಗುತ್ತದೆ. ಈ ಫೋನನ್ನು ಮೂರು ಬಣ್ಣ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ಗ್ರಾಹಕರು ಸ್ಯಾಟಿನ್ ಬ್ಲಾಕ್, ಮಿಂಟ್ ಗ್ರೀನ್ ಮತ್ತು ಓಷನ್ ಬ್ಲೂ ಬಣ್ಣಗಳಲ್ಲಿ ಖರೀದಿಸಬಹುದು. ಈ ಮೊಬೈಲ್ ಮಾರ್ಚ್ 7 ರಂದು ಇ-ಕಾಮರ್ಸ್ ಸೈಟ್ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ.
ಪೊಕೊ M7 5G ವೈಶಿಷ್ಟ್ಯಗಳು
ಪೊಕೊ M7 5G ಸ್ಮಾರ್ಟ್‌ಫೋನ್ 6.88 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 1,640 x 720 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಹೊಂದಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 600 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಪೊಕೊ ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ಶಿಯೋಮಿ ಹೈಪರ್ ಓಎಸ್ ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಅಡ್ರಿನೊ ಜಿಪಿಯು ಸಹ ಹೊಂದಿದೆ.
ಪೊಕೊ M7 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ. ಈ ಪೊಕೊ 5G ಮೊಬೈಲ್ 6GB RAM + 128GB ಮತ್ತು 8GB RAM + 128GB ಸ್ಟೋರೇಜ್ ಆಯ್ಕೆಗಳಲ್ಲಿ ಬರುತ್ತದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ವಿಸ್ತರಿಸಬಹುದು. ಈ ಫೋನ್ 8GB ವರೆಗಿನ ವರ್ಚುವಲ್ RAM ಅನ್ನು ಸಹ ಬೆಂಬಲಿಸುತ್ತದೆ.
ಪೊಕೊ M7 5G ಮೊಬೈಲ್ 5160mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 33W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸುತ್ತದೆ. ಈ ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ನೀರು ಮತ್ತು ಧೂಳಿನಿಂದ ರಕ್ಷಣೆಗಾಗಿ IP52 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, 4G LTE, ಡ್ಯುಯಲ್ ಬ್ಯಾಂಡ್ ವೈ-ಫೈ, ಬ್ಲೂಟೂತ್ 5.4, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








