ಇತ್ತೀಚಿಗೆ ಬಿಡುಗಡೆ ಆಗಿರುವ ಪೊಕೊ M7 ಪ್ರೊ ಮೊಬೈಲ್ ಬೆಲೆಯಲ್ಲಿ ಬಿಗ್ ಡಿಸ್ಕೌಂಟ್!
ಲೀಡಿಂಗ್ ಮೊಬೈಲ್ ಬ್ರ್ಯಾಂಡ್‌ಗಳ ಲಿಸ್ಟ್‌ನಲ್ಲಿ ಗುರುತಿಸಿಕೊಂಡಿರುವ ಪೊಕೊ ಸಂಸ್ಥೆಯು ಕೆಲವು ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನದೇ ಗ್ರಾಹಕ ಬಳಗ ಹೊಂದಿದೆ. ಆ ಪೈಕಿ ಸಂಸ್ಥೆಯ ನೂತನ ಪೊಕೊ M7 ಪ್ರೊ ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರು ಗಮನ ಸೆಳದಿದ್ದು, ಈ ಫೋನ್ ಬಜೆಟ್ ವಿಭಾಗದಲ್ಲಿ ಕಾಣಿಸಿಕೊಂಡಿದೆ. ಸದ್ಯ ಪೊಕೊ M7 ಪ್ರೊ (Poco M7 Pro 5G) ಮೊಬೈಲ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್‌ನಲ್ಲಿ ಲಭ್ಯ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಪೊಕೊ M7 ಪ್ರೊ (Poco M7 Pro 5G) ಸ್ಮಾರ್ಟ್‌ಫೋನ್ ಶೇ. 21% ರಷ್ಟು ನೇರ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಮೊಬೈಲ್‌ನ 6GB + 128GB ಸ್ಟೋರೇಜ್‌ನ ವೇರಿಯಂಟ್ 14,999ರೂ. ಗಳ ಸ್ಪೆಷಲ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಗ್ರಾಹಕರು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಪಡೆಯಬಹುದಾಗಿದೆ.

ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡುವ ಪೊಕೊ M7 ಪ್ರೊ ಸ್ಮಾರ್ಟ್‌ಫೋನ್ ಲ್ಯಾವೆಂಡ್ರಾ ಫ್ರಾಸ್ಟ್, ಲೂನಾರ್ ಡಸ್ಟ್ ಹಾಗೂ ಆಲೀವ್ ಟ್ವಿನ್‌ಲೈಟ್ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೇ ಪೊಕೊ M7 ಪ್ರೊ (Poco M7 Pro 5G) ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಪೊಕೊ M7 ಪ್ರೊ ಫೀಚರ್ಸ್ ಮಾಹಿತಿ
ಪೊಕೊ M7 ಪ್ರೊ ಮೊಬೈಲ್ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್ಪ್ಲೇ ಪಡೆದಿದ್ದು, ಇದು 1080 × 2400 ಪಿಕ್ಸೆಲ್ ರೆಸಲ್ಯೂಶನ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 2100 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್ ಸಪೋರ್ಟ್ ಹೊಂದಿದ್ದು, ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಪಡೆದಿದೆ.
ಪೊಕೊ M7 ಪ್ರೊ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಆಕ್ಟಾಕೋರ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ಶಿಯೋಮಿ ಹೈಪರ್ ಓಎಸ್‌ನಲ್ಲಿ ಸಪೋರ್ಟ್ ಕೂಡಾ ಪಡೆದಿದೆ. ಹಾಗೆಯೇ 6 GB RAM + 128 GB ಹಾಗೂ 8GB RAM + 256GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಇದರೊಂದಿಗೆ 8GB ವರ್ಚುವಲ್ ವಿಸ್ತರಣೆಯ ಸೌಲಭ್ಯ ಸಹ ಇದೆ. ಅಲ್ಲದೇ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ವಿಸ್ತರಿಸಬಹುದು.
ಪೊಕೊ M7 ಪ್ರೊ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಈ ಫೋನಿನ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಇದರ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್ ಬಲದಲ್ಲಿ ಇದೆ. ಜೊತೆಗೆ ಎಲ್‌ಇಡಿ ಫ್ಲಾಷ್ ಪಡೆದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 20 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ನೀಡಲಾಗಿದೆ.
ಪೊಕೊ M7 ಪ್ರೊ ಮೊಬೈಲ್ 5110mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಒಳಗೊಂಡಿದೆ. ಇದಕ್ಕೆ ಪೂರಕವಾಗಿ 45W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








