ನಾಳೆ ಈ ಜಬರ್ದಸ್ತ್ ಸ್ಮಾರ್ಟ್‌ಫೋನ್ ಫಸ್ಟ್ ಸೇಲ್ ಶುರು; ಅಚ್ಚರಿಯ ಬೆಲೆ!
ಜನಪ್ರಿಯ ಪೊಕೊ ಸಂಸ್ಥೆಯ ನೂತನ ಪೊಕೊ M7 ಪ್ರೊ 5G (Poco M7 Pro 5G) ಫೋನ್ ಬೆಲೆ ಹಾಗೂ ಫೀಚರ್ಸ್‌ಗಳಿಂದಾಗಿ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ನಾಳೆ (ಡಿಸೆಂಬರ್ 20 ರಂದು) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಮೊದಲ ಮಾರಾಟ ಪ್ರಾರಂಭ ಮಾಡಲಿದೆ. ಈ ಮೊಬೈಲ್‌ನ ಆರಂಭಿಕ ಕೊಡುಗೆಯ ಬೆಲೆ 14999ರೂ. ಆಗಿದೆ. ಇನ್ನು ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸಾಮರ್ಥ್ಯದಲ್ಲಿ ಇದೆ.
ಹೌದು, ಪೊಕೊ ಸಂಸ್ಥೆಯ ಹೊಸ ಪೊಕೊ M7 ಪ್ರೊ (Poco M7 Pro 5G) ಫೋನಿನ ಮಾರಾಟ ನಾಳೆ ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಪ್ರಾರಂಭ ಆಗಲಿದೆ. ಈ ಮೊಬೈಲ್‌ನ 6 GB RAM + 128 GB ಹಾಗೂ 8GB RAM + 256GB ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಇದರ ಜೊತೆಗೆ 5110 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಪಡೆದುಕೊಂಡಿದೆ.

ಪೊಕೊ M7 ಪ್ರೊ (Poco M7 Pro 5G) ಸ್ಮಾರ್ಟ್‌ಫೋನ್ ಡೈಮೆನ್ಸಿಟಿ 7025 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ಮಾಡಲಿದೆ. ಅಲ್ಲದೇ ಇದು ಲ್ಯಾವೆಂಡ್ರಾ ಫ್ರಾಸ್ಟ್, ಲೂನಾರ್ ಡಸ್ಟ್ ಹಾಗೂ ಆಲೀವ್ ಟ್ವಿನ್‌ಲೈಟ್ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಪೊಕೊ M7 ಪ್ರೊ (Poco M7 Pro 5G) ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಪೊಕೊ M7 ಪ್ರೊ ಫೀಚರ್ಸ್ ಹೀಗಿವೆ
ಪೊಕೊ M7 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್ಪ್ಲೇ ಪಡೆದಿದ್ದು, ಇದು 1080 × 2400 ಪಿಕ್ಸೆಲ್ ರೆಸಲ್ಯೂಶನ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 2100 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದ್ದು, ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ.
ಪೊಕೊ M7 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಆಕ್ಟಾಕೋರ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ಶಿಯೋಮಿ ಹೈಪರ್ ಓಎಸ್‌ನಲ್ಲಿ ಸಪೋರ್ಟ್ ಕೂಡಾ ಪಡೆದಿದೆ. ಹಾಗೆಯೇ 6 GB RAM + 128 GB ಹಾಗೂ 8GB RAM + 256GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಇದರೊಂದಿಗೆ 8GB ವರ್ಚುವಲ್ ವಿಸ್ತರಣೆಯ ಸೌಲಭ್ಯ ಸಹ ಇದೆ. ಅಲ್ಲದೇ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ವಿಸ್ತರಿಸಬಹುದು.
ಪೊಕೊ M7 ಪ್ರೊ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಇದರ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್ ಬಲದಲ್ಲಿ ಇದೆ. ಜೊತೆಗೆ ಎಲ್‌ಇಡಿ ಫ್ಲಾಷ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 20 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ನೀಡಲಾಗಿದೆ.
ಪೊಕೊ M7 ಪ್ರೊ ಸ್ಮಾರ್ಟ್‌ಫೋನ್ 5110mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ 45W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








