ಇತ್ತೀಚಿಗೆ ಬಿಡುಗಡೆ ಆದ ಈ ಹೊಸ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!.ಈ ಆಫರ್ ಬಿಡ್ತೀರಾ?
ಲೀಡಿಂಗ್ ಆನ್‌ಲೈನ್ ಪ್ಲಾಟ್‌ಫಾರ್ಮ್ ಎಂದೇ ಗುರುತಿಸಿಕೊಂಡಿರುವ ಫ್ಲಿಪ್‌ಕಾರ್ಟ್‌ನಲ್ಲಿ ( Flipkart ) ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ಸ್ಪೆಷಲ್ ಆಫರ್ ನೀಡುತ್ತಾ ಮುನ್ನಡೆದಿದೆ. ಆ ಪೈಕಿ ಇದೀಗ ಪೊಕೊ M7 ಪ್ರೊ (Poco M7 Pro 5G) ಮೊಬೈಲ್ ಬೊಂಬಾಟ್ ಬೆಲೆ ಇಳಿಕೆಯಲ್ಲಿ ಕಾಣಿಸಿಕೊಂಡಿದ್ದು, ಹೊಸ ಮೊಬೈಲ್ ಖರೀದಿಸುವ ಗ್ರಾಹಕರು ಅಚ್ಚರಿಯಿಂದ ನೋಡುವಂತೆ ಆಗಿದೆ.
ಹೌದು, ಫ್ಲಿಪ್‌ಕಾರ್ಟ್ ನಲ್ಲಿ ಪೊಕೊ ಕಂಪನಿಯ ಪೊಕೊ M7 ಪ್ರೊ (Poco M7 Pro 5G) ಮೊಬೈಲ್ ಶೇ. 21% ರಷ್ಟು ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನಿನ 6 GB RAM + 128 GB ಸ್ಟೋರೇಜ್‌ನ ವೇರಿಯಂಟ್ ಅನ್ನು ಖರೀದಿದಾರರು 14,999ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಆಕ್ಟಾಕೋರ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ.

ಇದರೊಂದಿಗೆ ಪೊಕೊ M7 ಪ್ರೊ (Poco M7 Pro 5G) ಮೊಬೈಲ್ ಡೈಮೆನ್ಸಿಟಿ 7025 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ಮಾಡಲಿದೆ. ಅಲ್ಲದೇ ಇದು ಲ್ಯಾವೆಂಡ್ರಾ ಫ್ರಾಸ್ಟ್, ಲೂನಾರ್ ಡಸ್ಟ್ ಹಾಗೂ ಆಲೀವ್ ಟ್ವಿನ್‌ಲೈಟ್ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೇ ಪೊಕೊ M7 ಪ್ರೊ (Poco M7 Pro 5G) ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಪೊಕೊ M7 ಪ್ರೊ ಫೋನ್ ಫೀಚರ್ಸ್ ಹೀಗಿವೆ
ಪೊಕೊ M7 ಪ್ರೊ ಮೊಬೈಲ್ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಪಡೆದಿದ್ದು, ಇದು 1080 × 2400 ಪಿಕ್ಸೆಲ್ ರೆಸಲ್ಯೂಶನ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 2100 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದ್ದು, ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ.
ಪೊಕೊ M7 ಪ್ರೊ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಆಕ್ಟಾಕೋರ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ಮಾಡಲಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ಶಿಯೋಮಿ ಹೈಪರ್ ಓಎಸ್‌ನಲ್ಲಿ ಸಪೋರ್ಟ್ ಕೂಡಾ ಪಡೆದಿದೆ. ಹಾಗೆಯೇ 6 GB RAM + 128 GB ಹಾಗೂ 8GB RAM + 256GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಇದರ ಜೊತೆಗೆ 8GB ವರ್ಚುವಲ್ ವಿಸ್ತರಣೆಯ ಸೌಲಭ್ಯ ಸಹ ಇದೆ. ಹಾಗೆಯೇ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ವಿಸ್ತರಿಸಬಹುದು.
ಪೊಕೊ M7 ಪ್ರೊ ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಈ ಫೋನಿನ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಇದರ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್ ಬಲದಲ್ಲಿ ಇದೆ. ಜೊತೆಗೆ LED ಫ್ಲಾಷ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 20 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ನೀಡಲಾಗಿದೆ.
ಪೊಕೊ M7 ಪ್ರೊ ಮೊಬೈಲ್ 5110mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ 45W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








