ಪೊಕೊ ನ್ಯೂ ಇಯರ್‌ ಸೇಲ್‌ 2021: ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ರಿಯಾಯಿತಿ!

|

ಭಾರತದಲ್ಲಿ ಜನಪ್ರಿಯ ಇ-ಕಾಮರ್ಸ್‌ ತಾಣಗಳು ವಿಶೇಷ ದಿನಗಳಲ್ಲಿ ಭರ್ಜರಿ ರಿಯಾಯಿತಿಯನ್ನು ನೀಡುವುದು ಸಾಮಾನ್ಯ. ಇನ್ನು ಹೊಸ ವರ್ಷದ ಪ್ರಯುಕ್ತ ಇ-ಕಾಮರ್ಸ್‌ ದೈತ್ಯ ಫ್ಲಿಪ್‌ಕಾರ್ಟ್‌ ರಿಯಾಯಿತಿ ದರದ ಸೇಲ್‌ ಅನ್ನೊ ಆಯೋಜಿಸಿರೋದು ನಿಮಗೆಲ್ಲಾ ತಿಳಿದೆ ಇದೆ. ಸದ್ಯ ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌ ಪೊಕೊ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿಯನ್ನು ನೀಡಲಾಗ್ತಿದೆ. ಕೈ ಕೈಗೆಟುಕುವ ಬೆಲೆಯಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುವ ಗ್ರಾಹಕರಿಗೆ ಪೊಕೊ ನ್ಯೂ ಇಯರ್‌ ಸ್ಮಾರ್ಟ್‌ಫೋನ್‌ ಸೇಲ್‌ ಉತ್ತಮ ಆಯ್ಕೆಯಾಗಿದೆ.

ಫ್ಲಿಪ್‌ಕಾರ್ಟ್‌

ಹೌದು, ಜನಪ್ರಿಯ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಪೊಕೊ ಸ್ಮಾರ್ಟ್‌ಫೋನ್‌ಗಳ ನ್ಯೂ ಇಯರ್‌ ಸೇಲ್‌ ನಡೆಯುತ್ತಿದೆ. ಈ ಸೇಲ್‌ನಲ್ಲಿ ಪೊಕೊ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿಗಳು ಮತ್ತು ಆಫರ್‌ಗಳನ್ನು ನೀಡಲಾಗುತ್ತಿದೆ. ಪೊಕೊ ಸ್ಮಾರ್ಟ್‌ಫೋನ್‌ಗಳ ಮೇಲೆ ರಿಯಾಯಿತಿಯಲ್ಲದೆ, ಫ್ಲಿಪ್‌ಕಾರ್ಟ್‌ ಕೆಲವು ಆಯ್ದ ಬ್ಯಾಂಕುಗಳೊಂದಿಗೆ ಕೈಜೋಡಿಸಿ 10% ಅಥವಾ ರೂ. 1,500 ರೂ. ವಹಿವಾಟು ಮೌಲ್ಯಗಳಲ್ಲಿ ಆಯಾ ಡೆಬಿಟ್ ಕಾರ್ಡ್‌ಗಳನ್ನು ಬಳಸುವಾಗ 1,500 ತ್ವರಿತ ರಿಯಾಯಿತಿಯನ್ನು ನೀಡುತ್ತಿದೆ. ಹಾಗಾದ್ರೆ ಈ ಸೇಲ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳನ್ನ ಖರೀದಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಪೊಕೊ C3

ಪೊಕೊ C3

ಪೊಕೊ ನ್ಯೂ ಇಯರ್‌ ಸ್ಮಾರ್ಟ್‌ಫೋನ್‌ ಸೇಲ್‌ನಲ್ಲಿ c3 ಸ್ಮಾರ್ಟ್‌ಫೋನ್‌ 30% ಆಫರ್‌ ಅನ್ನು ಹೊಂದಿದೆ. 10,999 ರೂ ಮೂಲ ಬೆಲೆಯ ಈ ಸ್ಮಾರ್ಟ್‌ಫೋನ್‌ ಕೇವಲ 6,999 ರೂ ಗಳಿಗೆ ಲಭ್ಯವಾಗಲಿದೆ. ಇದು 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53- ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 20: 9 IPS LCD ಡಾಟ್ ಡ್ರಾಪ್ ಸ್ಕ್ರೀನ್ ಅನ್ನು ಹೊಂದಿದೆ. ಇದು 2.3GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G 35 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ 5000mAh ಬ್ಯಾಟರಿಯನ್ನು ಹೊಂದಿದೆ.

ಪೊಕೊ M2 ಪ್ರೊ

ಪೊಕೊ M2 ಪ್ರೊ

ಪೊಕೊ M2 ಪ್ರೊ ಸ್ಮಾರ್ಟ್‌ಫೋನ್‌ ಮೇಲೆ 23% ಆಫರ್‌ ಅನ್ನು ನೀಡಲಾಗಿದೆ. 16,999 ರೂ ಮೂಲ ಬೆಲೆಯ ಸ್ಮಾರ್ಟ್‌ಫೋನ್‌ 12,999 ರೂ ಬೆಲೆಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.67-ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಹೊಂದಿದೆ. ಆಕ್ಟಾ- ಕೋರ್ ಸ್ನಾಪ್‌ಡ್ರಾಗನ್ 720 ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೇಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬಳಸಿ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನೊ ಹೊಂದಿದೆ. ಇದು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಪೊಕೊ M2

ಪೊಕೊ M2

ಪೊಕೊ M2 ಸ್ಮಾರ್ಟ್‌ಫೋನ್‌ ಮೂಲಬೆಲೆ 12,999 ರೂ ಆಗಿದ್ದು, ನ್ಯೂ ಇಯರ್‌ ಸೆಲ್‌ನಲ್ಲಿ 9,999 ರೂ ಗಳಿಗೆ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ 6.53-ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 400 ನಿಟ್ಸ್ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 13ಮೆಗಾಪಿಕ್ಸೆಲ್‌ ಅನ್ನು ಹೊಂದಿದೆ.

ಪೊಕೊ X3

ಪೊಕೊ X3

ಫ್ಲಿಪ್‌ಕಾರ್ಟ್ನಲ್ಲಿ ಪೊಕೊ X3 ಸ್ಮಾರ್ಟ್‌ಫೋನ್‌ 20% ರಿಯಾಯಿತಿಯನ್ನು ಹೊಂದಿದೆ. ಇದು 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 6GB RAM ಮತ್ತು 64GB / 128GB ಹಾಗೂ 8GB RAM+128 GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

Most Read Articles
Best Mobiles in India

English summary
Poco New Year Sale: Discount Offer On Poco Smartphones.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X