Just In
- 1 hr ago
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- 1 hr ago
ಜಿಯೋ ಟ್ರೂ 5G ಸೇವೆ ಈಗ ಚಿತ್ರದುರ್ಗದಲ್ಲಿಯೂ ಲಭ್ಯ!..5G ರೀಚಾರ್ಜ್ ಬೆಲೆ ಎಷ್ಟು?
- 2 hrs ago
ನೀವು ಎಸ್‌ಬಿಐ ಗ್ರಾಹಕರೇ?... ಯುಪಿಐ ಪೇಮೆಂಟ್ ಮಾಡುವಾಗ ಈ ಅಂಶಗಳ ಬಗ್ಗೆ ಎಚ್ಚರವಹಿಸಿ!
- 4 hrs ago
ಭಾರತದಲ್ಲಿ ಇನ್ಫಿನಿಕ್ಸ್ ಝೀರೋ ಬುಕ್ ಅಲ್ಟ್ರಾ ಲ್ಯಾಪ್ಟಾಪ್ ಲಾಂಚ್; ಏನೆಲ್ಲಾ ಫೀಚರ್ಸ್ ಇವೆ ಗೊತ್ತಾ!?
Don't Miss
- Sports
ಸಾಧು ಸಂತರಿಗೆ ಅನ್ನದಾನ ಮಾಡಿ ಆಶೀರ್ವಾದ ಪಡೆದ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ
- News
Assembly Election 2023: ಎಎಪಿಯ ಯೋಜನೆಗಳನ್ನೇ ಬಿಜೆಪಿ, ಕಾಂಗ್ರೆಸ್ ಅನುಸರಿಸುತ್ತಿವೆ: ಶಾಸಕಿ ಆರೋಪ
- Movies
'ಪಠಾಣ್' ಸುದ್ದಿಗೋಷ್ಠಿಯಲ್ಲಿ ಫ್ಲೋರಲ್ ಡ್ರೆಸ್ ನಲ್ಲಿ ಮಿಂಚಿದ ದೀಪಿಕಾ ಪಡುಕೋಣೆ: ದಿಪ್ಪಿ ಲುಕ್'ಗೆ ಫ್ಯಾನ್ಸ್ ಫಿದಾ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Finance
Economic Survey 2022-23: ಆರ್ಥಿಕ ಸಮೀಕ್ಷೆಯ ಪ್ರಮುಖಾಂಶ ಇಲ್ಲಿದೆ
- Lifestyle
ಥೈರಾಯ್ಡ್ ನಿಯಂತ್ರಣಕ್ಕೆ ಕೊತ್ತಂಬರಿ ಹೇಗೆ ಸಹಕಾರಿ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಡೇಟ್ ಬಹಿರಂಗಗೊಳಿಸಿದ ಪೊಕೊ!
ಫ್ಲಿಪ್‌ಕಾರ್ಟ್ ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣಗಳಲ್ಲಿ ಒಂದಾಗಿದೆ. ಹಬ್ಬದ ಸೀಸನ್‌ಗಳಲ್ಲಿ ಮಾತ್ರವಲ್ಲದೆ ವಿಶೇಷ ದಿನಗಳಲ್ಲಿ ಕೂಡ ಡಿಸ್ಕೌಂಟ್ ಸೇಲ್‌ಗಳನ್ನು ಆಯೋಜಿಸುತ್ತಾ ಬಂದಿದೆ. ಸದ್ಯ ಇದೀಗ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಬಿಗ್ ಬಿಲಿಯನ್ ಡೇಸ್ ಸೇಲ್ ಆಯೋಜಿಸಲು ಮುಂದಾಗಿದೆ. ಈ ಸೇಲ್ ಇದೇ ತಿಂಗಳ ಅಂತ್ಯದಲ್ಲಿ ನಡೆಯುವುದ ಪಕ್ಕಾ ಆಗಿದ್ದು, ಪೊಕೊ ಟ್ವಿಟರ್ ಹ್ಯಾಂಡಲ್ ಸೇಲ್ ಡೇಟ್ ಅನ್ನು ಬಹಿರಂಗಗೊಳಿಸಿದೆ. ಪೊಕೊ ಬ್ರ್ಯಾಂಡ್ ತನ್ನ ಹೊಸ ಬಜೆಟ್ ಫೋನ್ ಬಗ್ಗೆ ಪ್ರಮೋಷನ್ ಮಾಡುವಾಗ ಸೇಲ್ ಡೇಟ್ ರಿವೀಲ್ ಮಾಡಿದೆ.

ಹೌದು, ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಡೇಟ್ ಬಹಿರಂಗವಾಗಿದೆ. ಪೊಕೊ ಕಂಪೆನಿ ತನ್ನ ಬಜೆಟ್ ಸ್ಮಾರ್ಟ್‌ಫೋನ್ ಪ್ರಮೋಷನ್ ಮಾಡುವಾಗ ಸೇಲ್ ಡೇಟ್ ಬಹಿರಂಗ ಪಡಿಸಿದೆ. ಪೊಕೊ ಕಂಪೆನಿಯ ಟ್ವಿಟರ್ ಹ್ಯಾಂಡಲ್‌ನಲ್ಲಿ ಫ್ಲಿಪ್‌ಕಾರ್ಟ್‌ನ ವಿಶೇಷ ಬಿಗ್ ಬಿಲಿಯನ್ ಡೇಸ್ ಸೇಲ್ ಸೆಪ್ಟೆಂಬರ್ 13 ರಂದು ಪ್ರಾರಂಭವಾಗಲಿದೆ ಎಂದು ಬಹಿರಂಗವಾಗಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಏನೆಲ್ಲಾ ಡಿಸ್ಕೌಂಟ್ ದೊರೆಯಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫ್ಲಿಪ್‌ಕಾರ್ಟ್‌ನ ಬಿಗ್ ಬಿಲಿಯನ್ ಡೇಸ್ ಸೇಲ್ ಸಮಯದಲ್ಲಿ ಗ್ರಾಹಕರು ಐಸಿಐಸಿಐ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್ ಕಾರ್ಡ್‌ಗಳ ಮೂಲಕ 10% ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ. ಇದರಿಂದ ಗ್ರಾಹಕರು ಎಲೆಕ್ಟ್ರಾನಿಕ್ಸ್ ಮತ್ತು ಪರಿಕರಗಳ ಮೇಲೆ ಶೇಕಡಾ 80 ರಷ್ಟು ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಗ್ರಾಹಕರು ಸೇಲ್ ಟೈಂನಲ್ಲಿ ಹೆಡ್‌ಫೋನ್‌ಗಳು, ವಾಯರ್‌ಲೆಸ್ ಇಯರ್‌ಫೋನ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳ ಮೇಲೆ ಬಿಗ್ ಡಿಸ್ಕೌಂಟ್ ಪಡೆದುಕೊಳ್ಳುವುದು ಪಕ್ಕಾ ಆಗಿದೆ.

ಇದಲ್ಲದೆ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ ರಿಯಲ್‌ಮಿ, ಪೊಕೊ, ವಿವೋ, ಆಪಲ್ ಮತ್ತು ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳ ಮೇಲೆ ಕೂಡ ಬಿಗ್ ಡಿಸ್ಕೌಂಟ್‌ಗಳನ್ನು ನೀಡಲಿದೆ ಎಂದು ವರದಿಯಾಗಿದೆ. ಇದಲ್ಲದೆ ಎಲೆಕ್ಟ್ರಾನಿಕ್ಸ್, ಪರಿಕರಗಳು, ಟಿವಿಗಳು ಮತ್ತು ಉಪಕರಣಗಳ ಮೇಲೆ ಖರೀದಿದಾರರು 80% ವರೆಗೆ ರಿಯಾಯಿತಿ ಪಡೆಯಬಹುದು. ಸದ್ಯ ಫ್ಲಿಪ್‌ಕಾರ್ಟ್‌ನಲ್ಲಿ ಐಫೋನ್ 13 ಅನ್ನು 69,999 ರೂಗಳಿಗೆ ಸೇಲ್ ಮಾಡುತ್ತಿದೆ. ನೀವು HDFC ಕ್ರೆಡಿಟ್ ಕಾರ್ಡ್ ಹೊಂದಿದ್ದರೆ, 2000ರೂ. ಹೆಚ್ಚುವರಿ ರಿಯಾಯಿತಿ ಕೂಡ ಲಭ್ಯವಾಗಲಿದೆ.

ಸೆಪ್ಟೆಂಬರ್ 7 ರಂದು ಐಫೋನ್ 14 ಬಿಡುಗಡೆ ಆಗುವುದರಿಂದ ಐಫೋನ್ 13 ಮೇಲೆ ಎಷ್ಟು ಡಿಸ್ಕೌಂಟ್ ಸಿಗಲಿದೆ ಅನ್ನೊದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹಿಂದಿನ ಟ್ರೆಂಡ್‌ಗಳನ್ನು ಪರಿಗಣಿಸಿದರೆ ಐಫೋನ್ 13 ಮತ್ತು ಐಫೋನ್ 12ನ ಬೆಲೆಗಳು ಕಡಿಮೆಯಾಗುವ ನಿರೀಕ್ಷೆಯಿದೆ. ಇನ್ನು ಪೊಕೊ ಕಂಪೆನಿ ತನ್ನ ಹೊಸ ಪೊಕೊ M5 ಸ್ಮಾರ್ಟ್‌ಫೋನ್ ಅನ್ನು ಡಿಸ್ಕೌಂಟ್‌ನಲ್ಲಿ ಸೇಲ್ ಮಾಡಲಿದೆ. ಇದರಿಂದ ಈ ಸ್ಮಾರ್ಟ್‌ಫೋನ್ 10,999 ರೂಗಳ ಆರಂಭಿಕ ಬೆಲೆಯಲ್ಲಿ ನೀಡಲಿದೆ.

ಇದೇ ಸಮಯದಲ್ಲಿ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2022 ಕೂಡ ನಡೆಯಲಿದೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಸೇಲ್ ಲೈವ್ ಆಗಲಿದೆ ಎಂದು ಅಮೆಜಾನ್ ಘೋಷಿಸಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಸ್ಮಾರ್ಟ್‌ವಾಚ್‌ಗಳು, ಕಂಪ್ಯೂಟರ್ ಪೆರಿಫೆರಲ್ಸ್, ಸ್ಮಾರ್ಟ್ ಗ್ಯಾಜೆಟ್‌ಗಳು ಮತ್ತು ಅಮೆಜಾನ್ ಅಲೆಕ್ಸಾ-ಚಾಲಿತ ಸಾಧನಗಳು ಸೇರಿದಂತೆ ಹಲವಾರು ವಸ್ತುಗಳ ಮೇಲೆ ಡೀಲ್‌ಗಳು, ರಿಯಾಯಿತಿಗಳು ಮತ್ತು ಆಫರ್‌ಗಳನ್ನು ನೀಡಲಾಗುತ್ತದೆ ಎಂದು ಅಮೆಜಾನ್ ಹೇಳಿಕೊಂಡಿದೆ.

ಇನ್ನು ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2022 ಸೇಲ್‌ನಲ್ಲಿ ಬ್ಯಾಂಕ್ ಆಪರ್‌ಗಳಿಗಾಗಿ ಅಮೆಜಾನ್ ಎಸ್‌ಬಿಐ ಜೊತೆಗೆ ಪಾಲುದಾರಿಕೆ ಹೊಂದಿದೆ. ಇದರಿಂದ SBI ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 10% ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಅಲ್ಲದೆ ಅಮೆಜಾನ್‌ನಲ್ಲಿ ಮೊದಲ ಬಾರಿಗೆ ಶಾಪಿಂಗ್ ಮಾಡುವವರು 10% ಪ್ಲಾಟ್ ಕ್ಯಾಶ್‌ಬ್ಯಾಕ್ ಆಫರ್ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ ಎಂದು ಹೇಳಲಾಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470