ಬಹುನಿರೀಕ್ಷಿತ ಪೊಕೊ M3 ಸ್ಮಾರ್ಟ್‌ಫೋನ್ ಬಿಡುಗಡೆಗೆ ದಿನಾಂಕ ಫಿಕ್ಸ್‌!

|

ಕಡಿಮೆ ಅವಧಿಯಲ್ಲಿ ಮೊಬೈಲ್ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿರುವ ಪೊಕೊ ಬ್ರ್ಯಾಂಡ್‌ ಈಗಾಗಲೇ ಕೆಲವು ಮಾಡೆಲ್‌ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಕಂಪನಿಯು M ಸರಣಿಯಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ಪೊಕೊ M2 ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸರಣಿಯ ಮುಂದುವರಿದ ಭಾಗವಾಗಿ ಸಂಸ್ಥೆಯು ಇದೀಗ ಹೊಸದಾಗಿ ಪೊಕೊ M3 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಲು ದಿನಾಂಕ ಫಿಕ್ಸ್‌ ಮಾಡಿದೆ.

ಪೊಕೊ

ಹೌದು, ಪೊಕೊ ಕಂಪೆನಿ ತನ್ನ ಬಹುನಿರೀಕ್ಷಿತ ಪೊಕೊ M3 ಸ್ಮಾರ್ಟ್‌ಫೋನ್‌ ಅನ್ನು ಇದೇ ನವೆಂಬರ್ 24ರಂದು ಅಧಿಕೃತವಾಗಿ ಅನಾವರಣ ಮಾಡಲಿದೆ. ಪೊಕೊ M3 ಸ್ಮಾರ್ಟ್‌ಫೋನ್‌ ಪೊಕೊ M2 ಫೋನಿನ ಅಪ್‌ಡೇಟ್ ಆವೃತ್ತಿ ಆಗಿರಲಿದೆ. ಈ ಸ್ಮಾರ್ಟ್‌ಫೋನ್ 5000mAh ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿರುವುದು ಬಹುತೇಕ ಖಚಿತವಾಗಿದೆ. ಇನ್ನುಳಿದಂತೆ ಯಾವೆಲ್ಲಾ ಫೀಚರ್ಸ್‌ ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಪೊಕೊ M3 ಸ್ಮಾರ್ಟ್‌ಪೋನ್‌ 1,080x2,400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53 ಇಂಚಿನ ಡಿಸ್‌ಪ್ಲೇಯನ್ನ ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಗಿದ್ದು, 60 Hz ರೀಫ್ರೇಶ್ ರೇಟ್ ಅನ್ನು ಹೊಂದಿರಲಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್‌ ಸೌಲಭ್ಯವನ್ನು ಪಡೆದಿರಲಿದೆ.

ಯಾವ ಪ್ರೊಸೆಸರ್‌

ಯಾವ ಪ್ರೊಸೆಸರ್‌

ಪೊಕೊ M3 ಸ್ಮಾರ್ಟ್‌ಪೋನ್‌ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್‌ ಬೆಂಬಲವನ್ನು ಪಡೆದಿರಲಿದೆ. 6GB RAM ಮತ್ತು 64GB ಹಾಗೂ 6GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿರಲಿದೆ. ಇದಲ್ಲದೆ ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾದ ಅವಕಾಶ ಇರಲಿದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಪೊಕೊ M3 ಸ್ಮಾರ್ಟ್‌ಪೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8ಎಂಪಿ ಕ್ಯಾಮೆರಾ ಸೆನ್ಸಾರ್‌, ಮೂರನೇ ಕ್ಯಾಮೆರಾ 5ಎಂಪಿ ಮತ್ತು ನಾಲ್ಕನೇ ಕ್ಯಾಮೆರಾ 2ಎಂಪಿ ಸೆನ್ಸಾರ್ ಅನ್ನು ಒಳಗೊಂಡಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿರಲಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಪೊಕೊ M3 ಸ್ಮಾರ್ಟ್‌ಪೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದ್ದು, 18W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Poco M3 set to launch on November 24 and is said to be a much-upgraded version of the predecessor Poco M2.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X