ಪೊಕೊ X2 ಸ್ಮಾರ್ಟ್‌ಫೋನ್ ಬಿಡುಗಡೆಗೆ ದಿನಾಂಕ ಫಿಕ್ಸ್!..ಅಚ್ಚರಿಯ ಬೆಲೆ!
ಶಿಯೋಮಿ ಸಂಸ್ಥೆಯು ಸಬ್ ಬ್ರ್ಯಾಂಡ್ ಪೊಕೊ ಸ್ಮಾರ್ಟ್‌ಫೋನ್‌ಗಳು ಈಗಾಗಲೇ ಮಾರುಕಟ್ಟೆಯಲ್ಲಿ ಭಾರಿ ಸದ್ದು ಮಾಡಿವೆ. ಇತ್ತೀಚಿಗಷ್ಟೆ ಶಿಯೋಮಿ ಕಂಪನಿಯು ಪೊಕೊ ಬ್ರ್ಯಾಂಡ್ ಅನ್ನು ಪ್ರತ್ಯೇಕ ಬ್ರ್ಯಾಂಡ್ ಆಗಿ ಘೋಷಿಸಿದೆ. ಬಹುನಿರೀಕ್ಷಿತ ಪೊಕೊ X2 ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಜ್ಜಾಗಿದ್ದು, ಪೊಕೊ ಸ್ವತಂತ್ರ ಬ್ರ್ಯಾಂಡ್ ಆದ ಬಳಿಕ ಬಿಡುಗಡೆ ಆಗಲಿರುವ ಮೊದಲ ಸ್ಮಾರ್ಟ್‌ಫೋನ್ ಇದಾಗಿದೆ. ಈ ಫೋನಿನ ಫೀಚರ್ಸ್ ಮತ್ತು ಬೆಲೆ ಫೋನ್ ಪ್ರಿಯರಲ್ಲಿ ಕುತೂಹಲ ಮೂಡಿಸಿದೆ.

ಹೌದು, ಪೊಕೊ ಕಂಪನಿಯು ಇದೀಗ ಪೊಕೊ X2 ಫೋನ್ ಬಿಡುಗಡೆ ಮಾಡಲು ತಯಾರಿನಡೆಸಿದೆ. ಇದೇ ಫೆಬ್ರುವರಿ 4ರಂದು ಭಾರತೀಯ ಮಾರುಕಟ್ಟೆಗೆ ಲಾಂಚ್ ಮಾಡುವುದು ಬಹುತೇಕ ಖಚಿತವಾಗಿದೆ. ಸದ್ಯ ಈ ಸ್ಮಾರ್ಟ್‌ಫೋನಿನ ಬೆಲೆ ಲೀಕ್ ಆಗಿದ್ದು, ಭಾರತದಲ್ಲಿ ಈ ಫೋನ್ ಆರಂಭಿಕ ಬೆಲೆಯು 18,999ರೂ. ಆಗಿರಲಿದೆ ಎನ್ನಲಾಗಿದೆ. ಇನ್ನು ಈ ಫೋನ್ 120Hz ಸಾಮರ್ಥ್ಯದ ಡಿಸ್‌ಪ್ಲೇ ಹೊಂದಿರಲಿದೆ.

ಹಾಗೆಯೇ ಪೊಕೊ X2 ಸ್ಮಾರ್ಟ್‌ಫೋನ್ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಹೊಂದಿರಲಿದ್ದು, ಅವುಗಳು 20ಎಂಪಿ ಮತ್ತು 2ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿರಲಿವೆ. ಹಾಗೆಯೆ ಈ ಫೋನ್ ಎರಡು ವೇರಿಯಂಟ್‌ಗಳ ಆಯ್ಕೆ ಹೊಂದಿರಲಿದ್ದು, ಹಿಂಬದಿಯಲ್ಲಿ 64ಎಂಪಿ ಕ್ಯಾಮೆರಾ ಇರುವ ಸಾಧ್ಯತೆಗಳು ಅಧಿಕ. ಇದರೊಂದಿಗೆ 4,500mAh ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿರುವುದು ಖಚಿತ ಎನ್ನಲಾಗಿದೆ. ಇನ್ನುಳಿದ ಫೀಚರ್ಸ್‌ಗಳು ಹೇಗಿರಲಿವೆ ಎನ್ನುವುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಹೇಗಿರಲಿದೆ
ಪೊಕೊ X2 ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.67 ಇಂಚಿನ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿರಲಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು ಶೇ.84.8% ಆಗಿರಲಿದೆ. ಇನ್ನು ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 395ppi ಆಗಿರಲಿದ್ದು, ಡಿಸ್‌ಪ್ಲೇಯು 120Hz ಸಾಮರ್ಥ್ಯವನ್ನು ಪಡೆದಿರಲಿದೆ. ಹಾಗೆಯೇ ಗೊರಿಲ್ಲಾ ಗ್ಲಾಸ್ 5 ಸಹ ಇರಲಿದೆ.

ಪ್ರೊಸೆಸರ್ ಸಾಮರ್ಥ್ಯ
ಪೊಕೊ X2 ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 730G ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿರಲಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿರಲಿದೆ. ಇದರೊಂದಿಗೆ 64GB ಸ್ಟೋರೇಜ್ + 6GB RAM ಮತ್ತು 128GB ಸ್ಟೋರೇಜ್ + 6GB RAM ಸಾಮರ್ಥ್ಯ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿರಲಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಸಹ ಇರಲಿದೆ ಎನ್ನಲಾಗಿದೆ.

ಕ್ಯಾಮೆರಾ ವಿಶೇಷ
ಪೊಕೊ X2 ಸ್ಮಾರ್ಟ್‌ಫೋನ್ ಮುಖ್ಯ ಕ್ಯಾಮೆರಾವು ಸೋನಿಯ IMX686 ಸೆನ್ಸಾರ್ ಒಳಗೊಂಡ 64ಎಂಪಿ ಕ್ಯಾಮೆರಾ ಆಗಿರಲಿದೆ. ಇನ್ನು ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿರಲಿದೆ. ಹಾಗೆಯೇ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಇರಲಿದ್ದು, ಅವುಗಳು 20ಎಂಪಿ ಮತ್ತು 2ಎಂಪಿ ಸೆನ್ಸಾರ್ ಹೊಂದಿರಲಿವೆ. ಸೆಲ್ಫಿ ಕ್ಯಾಮೆರಾವು ಪಂಚ್ ಹೋಲ್ ಮಾದರಿಯಲ್ಲಿ ಇರಲಿದೆ ಎನ್ನಲಾಗಿದೆ.

ಬ್ಯಾಟರಿ ಬಲವೇನು
ಪೊಕೊ X2 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿರಲಿದ್ದು, ಇದರೊಂದಿಗೆ 27W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸುವ ಸಾಧ್ಯತೆಗಳಿವೆ. ಹಾಗೆಯೆ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಆಯ್ಕೆಗಳು ಇರಲಿವೆ. ಬ್ಲೂ, ರೆಡ್ ಮತ್ತು ಪರ್ಪಲ್ ಬಣ್ಣಗಳಲ್ಲಿ ಲಾಂಚ್ ಆಗುವ ಸಾಧ್ಯತೆಗಳು ಹೆಚ್ಚಾಗಿವೆ.


Click it and Unblock the Notifications








