ಪೊಕೊ X2 ಸ್ಮಾರ್ಟ್‌ಫೋನ್ ಬಿಡುಗಡೆ!..ರಿಯಲ್‌ ಮಿ X2 ಕಥೆ ಫಿನಿಶ್!

|

ಪೊಕೊ ಸಂಸ್ಥೆಯ ಬಹುನಿರೀಕ್ಷಿತ ಪೊಕೊ X2 ಸ್ಮಾರ್ಟ್‌ಫೋನ್ ಇಂದು ಭಾರತೀಯ ಮಾರುಕಟ್ಟೆಗೆ ಅದ್ದೂರಿಯಾಗಿ ಬಿಡುಗಡೆ ಆಗಿದೆ. ಶಿಯೋಮಿಯ ಸಬ್‌ಬ್ರ್ಯಾಂಡ್‌ ಆಗಿದ್ದ ಪೊಕೊ ಇತ್ತೀಚಿಗಷ್ಟೆ ಸ್ವತಂತ್ರ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಪೊಕೊ ಎಕ್ಸ್‌2 ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದ್ದು, ಮಾರುಕಟ್ಟೆಯಲ್ಲಿ ಈ ಫೋನ್ ನೇರವಾಗಿ ರಿಯಲ್‌ ಮಿ X2 ಸ್ಮಾರ್ಟ್‌ಫೋನ್‌ಗೆ ಪೈಪೋಟಿ ನೀಡುವ ಲಕ್ಷಣಗಳನ್ನು ಸೂಚಿಸಿದೆ.

ಪೊಕೊ ಎಕ್ಸ್2

ಹೌದು, ಪೊಕೊ ಸಂಸ್ಥೆಯು ಇಂದು (ಫೆ.4) ದೇಶಿಯ ಮಾರುಕಟ್ಟೆಯಲ್ಲಿ ಪೊಕೊ ಎಕ್ಸ್2 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 120Hz ಸಾಮರ್ಥ್ಯದ ಡಿಸ್‌ಪ್ಲೇ ಹೊಂದಿದ್ದು, 6GB RAM ಮತ್ತು 8GB RAM ಸಾಮರ್ಥ್ಯಗಳನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಇದೇ ಫೆಬ್ರುವರಿ 11 ರಿಂದ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಮೊದಲ ಸೇಲ್ ಆರಂಭಿಸಲಿದೆ.

ಪೊಕೊ ಎಕ್ಸ್‌2 ಸ್ಮಾರ್ಟ್‌ಫೋನ್

ಪೊಕೊ ಎಕ್ಸ್‌2 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಒಳಗೊಂಡಿದೆ. ಹಾಗೆಯೇ ನಾಲ್ಕು ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಡ್ಯುಯಲ್ ಸೆಲ್ಫಿ ಕ್ಯಾಮೆರಾ ಸೌಲಭ್ಯವನ್ನು ಪಡೆದಿದೆ. ಅಥ್ಲೇಟಿಕ್ ಬ್ಲೂ, ಮ್ಯಾಟ್ರಿಕ್ಸ್ ಪರ್ಪಲ್ ಮತ್ತು ಫಿನಿಕ್ಸ್‌ ರೆಡ್ ಬಣ್ಣಗಳ ಆಯ್ಕೆಗಳನ್ನು ಪಡೆದಿದೆ. ಹಾಗಾದರೆ ಪೊಕೊ ಎಕ್ಸ್‌2 ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಪೊಕೊ X2 ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.67 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು ಶೇ.84.8% ಆಗಿದೆ. ಇನ್ನು ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 395ppi ಆಗಿದ್ದು, ಡಿಸ್‌ಪ್ಲೇಯು 120Hz ರೀಫ್ರೇಶಿಂಗ್ ರೇಟ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಗೊರಿಲ್ಲಾ ಗ್ಲಾಸ್ 5 ಸಹ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ

ಪ್ರೊಸೆಸರ್ ಸಾಮರ್ಥ್ಯ

ಪೊಕೊ X2 ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 730G ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಆಂಡ್ರಾಯ್ಡ್‌ 10 ಓಎಸ್‌ ಬೆಂಬಲ ಪಡೆದುಕೊಂಡಿದೆ. ಅಡದರೆನೊ 618 ಗ್ರಾಫಿಕ್ಸ್‌ ಪಡೆದಿದೆ. ಇದರೊಂದಿಗೆ 6GB RAM + 64GB, 6GB RAM + 128GB ಮತ್ತು 8GB RAM + 256GB ಸಾಮರ್ಥ್ಯ ಮೂರು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಸಹ ಇದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಪೊಕೊ X2 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ನಾಲ್ಕು ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಮುಖ್ಯ ಕ್ಯಾಮೆರಾವು ಸೋನಿಯ IMX686 ಸೆನ್ಸಾರ್ ಒಳಗೊಂಡ 64ಎಂಪಿ ಕ್ಯಾಮೆರಾ ಆಗಿದೆ. ಸೆಕೆಂಡರಿ ಕ್ಯಾಮೆರಾವು ಅಲ್ಟ್ರಾ ವೈಲ್ಡ್‌ ಆಂಗಲ್‌ನ 8ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿವೆ. ಇನ್ನು ಮುಂಬದಿ ಡ್ಯುಯಲ್ ಸೆಲ್ಫಿ ಕ್ಯಾಮೆರಾ ನೀಡಲಾಗಿದ್ದು, ಅವುಗಳು 20ಎಂಪಿ ಮತ್ತು 2ಎಂಪಿ ಸೆನ್ಸಾರ್ ಹೊಂದಿವೆ.

ಬ್ಯಾಟರಿ ಬಲ

ಬ್ಯಾಟರಿ ಬಲ

ಪೊಕೊ X2 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿದೆ. ಇದರೊಂದಿಗೆ 27W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೆ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ 802.11ac, ಎನ್‌ಎಫ್‌ಸಿ, ಜಿಪಿಎಸ್‌, ಯುಎಸ್‌ಬಿ, ಬ್ಲೂಟೂತ್, ಆಯ್ಕೆಗಳು ಇರಲಿವೆ. ಬ್ಲೂ, ರೆಡ್ ಮತ್ತು ಪರ್ಪಲ್ ಬಣ್ಣಗಳಲ್ಲಿ ಲಾಂಚ್ ಆಗುವ ಸಾಧ್ಯತೆಗಳು ಹೆಚ್ಚಾಗಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಪೊಕೊ ಎಕ್ಸ್‌2 ಸ್ಮಾರ್ಟ್‌ಫೋನ್ ಒಟ್ಟು ಮೂರು ವೇರಿಯಂಟ್‌ ಮಾದರಿಗಳಲ್ಲಿ ಲಾಂಚ್ ಆಗಿದ್ದು, 6GB RAM + 64GB ಬೇಸಿಕ್ ವೇರಿಯಂಟ್ ಬೆಲೆಯು 15,999ರೂ ಆಗಿದೆ. ಇನ್ನು 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 16,999ರೂ ಆಗಿದ್ದು, 8GB RAM + 256GB ಸಾಮರ್ಥ್ಯದ ಹೈಎಂಡ್ ವೇರಿಯಂಟ್ ಬೆಲೆಯು 19,999ರೂ.ಗಳಾಗಿದೆ. ಇನ್ನು ಪೊಕೊ ಎಕ್ಸ್‌2 ಫೋನ್ ಸೇಲ್ ಇದೇ ಫೆಬ್ರುವರಿ 11ರಿಂದ ಶುರುವಾಗಲಿದೆ.

Best Mobiles in India

English summary
Poco X2 has officially launched in India. Qualcomm Snapdragon 730G under the hood and 64-megapixel quad-rear camera setup.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X