ಸೆಪ್ಟೆಂಬರ್ 7ರಂದು ಲಾಂಚ್ ಆಗಲಿದೆ ಪೊಕೊ X3 ಸ್ಮಾರ್ಟ್‌ಫೋನ್!
ಪೊಕೊ ಕಂಪನಿಯು ಶಿಯೋಮಿಯಿಂದ ಬೇರ್ಪಟ್ಟು ನಂತರ ಬಿಡುಗಡೆ ಮಾಡಿದ ಪೊಕೊ X2 ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಅದರ ಮುಂದುವರಿದ ಭಾಗವಾಗಿ ಪೊಕೊ ಇದೀಗ ಪೊಕೊ X3 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಹೊಸ ಪೊಕೊ X3 ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಈಗ ಲೀಕ್ ಆಗಿದ್ದು, ಸ್ಮಾರ್ಟ್‌ಫೋನ್ ಪ್ರಿಯರ ಕುತೂಹಲ ಹೆಚ್ಚಿಸಿವೆ.

ಹೌದು, ಪೊಕೊ ಸಂಸ್ಥೆಯು ಹೊಸದಾಗಿ ಪೊಕೊ X3 ಸ್ಮಾರ್ಟ್‌ಫೋನ್ ಪರಿಚಯಿಸಲು ಸಜ್ಜಾಗಿದೆ. ಇದೇ ಸೆಪ್ಟಂಬರ್ 7 ರಂದು ಅಧಿಕೃತವಾಗಿ ಲಾಂಚ್ ಮಾಡಲಾಗುವುದು ಎಂದು ಕಂಪನಿಯು ಟ್ವಿಟ್ವರ್‌ನಲ್ಲಿ ಮಾಹಿತಿ ಹೊರಹಾಕಿದೆ. ಇನ್ನು ಈ ಸ್ಮಾರ್ಟ್‌ಫೋನಗ್ ಕ್ವಾಡ್ ಕ್ಯಾಮೆರಾ ಹೊಂದಿರಲಿದ್ದು, ಮುಖ್ಯ ಕ್ಯಾಮೆರಾ ಸೆನ್ಸಾರ್ 64ಎಂಪಿ ಸಾಮರ್ಥ್ಯದಲ್ಲಿ ಇರುವುದು ಬಹುತೇಕ ಖಚಿತವಾಗಿದೆ. ಇನ್ನುಳಿದಂತೆ ಈ ಫೋನ್ ಯಾವೆಲ್ಲಾ ಫೀಚರ್ಸ್‌ಗಳು ಇರಲಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಮತ್ತು ರಚನೆ
ಪೊಕೊ X3 ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.6ಇಂಚಿನ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿರಲಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು ಶೇ.84.7% ಆಗಿರಲಿದೆ. ಹಾಗೆಯೇ ಸ್ಕ್ರೀನ್ ರಕ್ಷಣೆಗೆ ಗೊರಿಲ್ಲಾ ಗ್ಲಾಸ್ 5 ಸಹ ಇರುವ ಸಾಧ್ಯತೆಗಳಿವೆ.

ಪ್ರೊಸೆಸರ್ ಸಾಮರ್ಥ್ಯವೆನು
ಪೊಕೊ X3 ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 732G SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿರಲಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದುಕೊಂಡಿರಲಿದೆ. ಹಾಗೆಯೇ ಇದರಲ್ಲಿ ಅಡ್ರೆನೊ 618 ಗ್ರಾಫಿಕ್ಸ್ ಪಡೆದಿದೆ. ಇದರೊಂದಿಗೆ 6GB RAM ಮತ್ತು 8GB RAM ವೇರಿಯಂಟ್ ಆಯ್ಕೆಗಳ ಜೊತೆ 256GB ಸ್ಟೋರೇಜ್ ಸಾಮರ್ಥ್ಯ ಪಡೆದಿರುವ ನಿರೀಕ್ಷೆಗಳಿವೆ.

ಕ್ವಾಡ್ ಕ್ಯಾಮೆರಾ ರಚನೆ
ಪೊಕೊ X3 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ನಾಲ್ಕು ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು ಸೋನಿಯ IMX686 ಸೆನ್ಸಾರ್ ಒಳಗೊಂಡ 64ಎಂಪಿ ಕ್ಯಾಮೆರಾ ಆಗಿರಲಿದೆ. ಸೆಕೆಂಡರಿ ಕ್ಯಾಮೆರಾವು ಅಲ್ಟ್ರಾ ವೈಲ್ಡ್ ಆಂಗಲ್‌ನ 12ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ತೃತೀಯ 8 ಮತ್ತು ನಾಲ್ಕನೇ ಕ್ಯಾಮೆರಾಗಳು 5ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿವೆ. ಇನ್ನು ಮುಂಬದಿ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಇರಲಿದ್ದು, ಅವುಗಳು 16ಎಂಪಿ ಮತ್ತು 8ಎಂಪಿ ಸೆನ್ಸಾರ್ ಹೊಂದಿರಲಿವೆ.

ಬ್ಯಾಟರಿ ಬಲ
ಪೊಕೊ X3 ಸ್ಮಾರ್ಟ್‌ಫೋನ್ 5,160mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿರಲಿದೆ. ಇದರೊಂದಿಗೆ 33W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿರುವ ಸಾಧ್ಯತೆಗಳಿವೆ. ಹಾಗೆಯೇ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ 802.11ac, ಎನ್‌ಎಫ್‌ಸಿ, ಜಿಪಿಎಸ್, ಯುಎಸ್‌ಬಿ, ಬ್ಲೂಟೂತ್, ಆಯ್ಕೆಗಳು ಇರಲಿವೆ.


Click it and Unblock the Notifications








