ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಪೊಕೊ X3 NFC ಸ್ಮಾರ್ಟ್‌ಫೋನ್‌! ವಿಶೇಷ ಎನಿಸುವ ಫೀಚರ್ಸ್‌!

|

ಶಿಯೋಮಿ ಸಂಸ್ಥೆಯಿಂದ ಸ್ವತಂತ್ರಗೊಂಡ ನಂತರ ಪೊಕೊ ಸಂಸ್ಥೆ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುತ್ತಲೇ ಬಂದಿದೆ. ಮಾರುಕಟ್ಟೆಯಲ್ಲಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸಂಚಲನ ಮೂಡಿಸುವ ಪೊಕೊ ಇದೀಗ ತನ್ನ ಪೊಕೊ X3 NFC ಸರಣಿಯ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಸದ್ಯ ಪೊಕೊ ಸಂಸ್ಥೆಯ ಎಕ್ಸ್-ಸೀರೀಸ್ ಸ್ಮಾರ್ಟ್‌ಫೋನ್‌ಗಳ ಮುಂದುವರೆದ ಭಾಗವಾಗಿ ಈ ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ.

ಪೊಕೊ X3 NFC ಸ್ಮಾರ್ಟ್‌ಫೋನ್

ಹೌದು, ಪೊಕೊ ಸಂಸ್ಥೆಯ ಪೊಕೊ X3 NFC ಸ್ಮಾರ್ಟ್‌ಫೋನ್‌ ಜಾಗತಿಕವಾಗಿ ಬಿಡುಗಡೆಯಾಗಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್, ಸ್ಲಿಮ್ ಬೆಜೆಲ್‌ ಡಿಸ್‌ಪ್ಲೇ ವಿನ್ಯಾಸ ಮತ್ತು ಆಕ್ಟಾ-ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನು ಪೊಕೊ X3 NFC ಸ್ಮಾರ್ಟ್‌ಫೋನ್‌ 6GB RAM +64GB ಮತ್ತು 6GB RAM +128GGB ಸ್ಟೋರೇಜ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.ಇದು ಈ ವರ್ಷದ ಫೆಬ್ರವರಿಯಲ್ಲಿ ಬಿಡುಗಡೆಯಾದ ಪೊಕೊ X2 ಸ್ಮಾರ್ಟ್‌ಫೋನ್‌ನ ಉತ್ತರಾಧಿಕಾರಿ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಪೊಕೊ X3 NFC ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಎಲ್‌ಸಿಡಿ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದ್ದು 20:9 ಸ್ಕ್ರೀನ್‌ ಅನುಪಾತವನ್ನು ಹೊಂದಿದೆ.ಇನ್ನು ಈ ಡಿಸ್‌ಪ್ಲೇ 120Hz ರಿಫ್ರೇಶ್‌ ರೇಟ್‌ ಮತ್ತು 240Hz touch sampling ರೇಟ್‌ ಅನ್ನು ಹೊಂದಿದೆ. ಇದು ಸ್ಮೂತ್‌ ಗೇಮಿಂಗ್‌ ಅನುಭವಕ್ಕೆ ಉಪಯುಕ್ತವಾಗಲಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC, ಪ್ರೊಸೆಸರ್‌ ವೇಗವನ್ನು ಹೊಂದಿದ್ದು,ಆಂಡ್ರಾಯ್ಡ್ 10 ಆಧಾರಿತ ಎಂಐಯುಐ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6GB RAM +64GB ಮತ್ತು 6GB RAM +128GGB ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಪೊಕೊ X3 NFC ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX682 f/ 1.73 ಲೆನ್ಸ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, 119 ಡಿಗ್ರಿ ವೈಡ್-ಆಂಗಲ್ ಲೆನ್ಸ್. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 5,160mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, 4G, GPS, IR ಬ್ಲಾಸ್ಟರ್, NFC, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಪೊಕೊ X3 NFC ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 6GB RAM + 64GB ಶೇಖರಣಾ ರೂಪಾಂತರಕ್ಕೆ ಯುರೋ 229 (ಸುಮಾರು ರೂ. 19,900) ಮತ್ತು 6GB RAM+ 128GB ಶೇಖರಣಾ ರೂಪಾಂತರದ ಬೆಲೆ ಯುರೋ 269 (ಸುಮಾರು 23,400 ರೂ.) ಆಗಿದೆ. ಇನ್ನು ಪೊಕೊ X3 NFC ಕೋಬಾಲ್ಟ್ ಬ್ಲೂ ಮತ್ತು ಶ್ಯಾಡೋ ಗ್ರೇ ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Poco X3 NFC is priced at EUR 229 (roughly Rs. 19,900) for the base 6GB + 64GB model. It features a 120Hz refresh rate display.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X