Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ನಲ್ಲಿ ಪೊಕೊ X3 ಸ್ಮಾರ್ಟ್‌ಫೋನ್ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ!

ಪ್ರತಿ ಗ್ರಾಹಕರು ರಿಯಾಯಿತಿ ದರದಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಲು ಬಯಸುತ್ತಾರೆ. ಅದಕ್ಕಾಗಿ ಇ-ಕಾಮರ್ಸ್‌ಗಳ ವಿಶೇಷ ಸೇಲ್‌ ದಿನಗಳನ್ನು ಬಹುತೇಕರು ಎದುರು ನೋಡುತ್ತಿರುತ್ತಾರೆ. ಈ ರೀತಿ ನೀವು ಡಿಸ್ಕೌಂಟ್‌ ಬೆಲೆಯಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬೇಕೆಂದರೇ ಅದಕ್ಕೆ ಪೊಕೊ ಇದೀಗ ವೇದಿಕೆ ಸಿದ್ಧಪಡಿಸಿದೆ. ಸದ್ಯ ಪೊಕೊ ಆನಿವರ್ಸರಿ ಸೇಲ್‌ ಆಯೋಜಿಸಿ ಗ್ರಾಹಕರನ್ನು ಸೆಳೆದಿದೆ.

ಆನಿವರ್ಸರಿ

ಹೌದು, ಪೊಕೊ ಮೊಬೈಲ್‌ ಕಂಪನಿಯು ಫ್ಲಿಪ್‌ಕಾರ್ಟ್‌ನಲ್ಲಿ ಪೊಕೊ ಆನಿವರ್ಸರಿ ಸೇಲ್‌ ಆಯೋಜಿಸಿದ್ದು, ತನ್ನ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ಕೊಡುಗೆ ಘೋಷಿಸಿದೆ. ಇನ್ನು ಈ ಸೇಲ್‌ ವೇಳವು ಫೆ.4(ನೆನ್ನೆಯಿಂದ) ಶುರುವಾಗಿದ್ದು, ಫೆ.7ರ ವರೆಗೂ ಚಾಲ್ತಿ ಇರಲಿದೆ. ಈ ಸೇಲ್‌ನಲ್ಲಿ ಫ್ಲ್ಯಾಗ್‌ಶಿಪ್‌ ಮಾದರಿಯ ಫೀಚರ್ಸ್‌ಗಳಿಂದ ಗಮನ ಸೆಳೆದಿರುವ ಪೊಕೊ X3 ಸ್ಮಾರ್ಟ್‌ಫೋನ್ ಭರ್ಜರಿ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯ.

ಸ್ಮಾರ್ಟ್‌ಫೋನ್

ಪೊಕೊ X3 ಸ್ಮಾರ್ಟ್‌ಫೋನ್ 6GB + 64GB, 6GB + 128GB ಹಾಗೂ 8GB RAM ಮತ್ತು 128GB ಸ್ಟೋರೇಜ್‌ನ ಮೂರು ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಇವುಗಳಲ್ಲಿ 6GB + 64GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 14,999ರೂ. ಆಗಿದೆ. ಹಾಗೆಯೇ 128GB ಸ್ಟೋರೇಜ್‌ನ ಮಾಡೆಲ್‌ 15,999ರೂ. ಪ್ರೈಸ್‌ಟ್ಯಾಗ್‌ ಪಡೆದುಕೊಂಡಿದೆ. ಹಾಗಾದರೇ ಪೊಕೊ X3 ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಪೊಕೊ X3 ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು HDR10 ಅನ್ನು ಹೊಂದಿದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಪೊಕೊ X3 ಸ್ಮಾರ್ಟ್‌ಫೋನ್ ಆಕ್ಟಾ- ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ ಪೊಕೊ X3 ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 6GB + 64GB, 6GB + 128GB ಹಾಗೂ 8GB RAM ಮತ್ತು 128GB ಸಂಗ್ರಹ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯನ್ನ ಹೊಂದಿದೆ. ಜೊತೆಗೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್‌ ಕ್ಯಾಮೆರಾ ಸೆನ್ಸಾರ್

ಕ್ವಾಡ್‌ ಕ್ಯಾಮೆರಾ ಸೆನ್ಸಾರ್

ಪೊಕೊ X3 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX682 ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ 119 ಡಿಗ್ರಿ ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌, ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ X3 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, GPS, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್ ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್‌ ಸ್ಕ್ಯಾನರ್ ಅನ್ನು ಸಹ ಹೊಂದಿದೆ.

Best Mobiles in India

English summary
The POCO Anniversary Sale is already live on Flipkart. Amazing offer on poco x3 phone.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+