ಇಂದು ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಪೊಕೊ X3 ಪ್ರೊ ಸ್ಮಾರ್ಟ್‌ಫೋನ್‌!

|

ಜನಪ್ರಿಯ ಪೊಕೊ ಕಂಪೆನಿಯ ಪೊಕೊ X3 ಪ್ರೊ ಮತ್ತು ಪೊಕೊ F3 ಸ್ಮಾರ್ಟ್‌ಫೋನ್‌ಗಳು ಇಂದು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಲಿವೆ. ಡಿಜಿಟಲ್ ಈವೆಂಟ್ ಮೂಲಕ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ (5:30 PM IST) ಬಿಡುಗಡೆ ಆಗುವ ನಿರೀಕ್ಷೆ ಇದೆ. ಇನ್ನು ಪೊಕೊ X3 ಪ್ರೊ ಆಕ್ಟಾ ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ ಡ್ರಾನ್‌ 860 SoC ಪ್ರೊಸೆಸರ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ 8GB RAM+256GB ಹಾಗೂ 6GB RAM+128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ.

ಪೊಕೊ X3

ಹೌದು, ಬಹು ನಿರೀಕ್ಷಿತ ಪೊಕೊ X3 ಪ್ರೊ ಸ್ಮಾರ್ಟ್‌ಫೋನ್‌ ಇಂದು ಜಾಗತಿಕ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ. ಇದು 6.67 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನು ಪೊಕೊ F3 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಮತ್ತು ಇನ್ಫಿನಿಟಿ-ಒ-ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಎರಡೂ ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ವಿಶೇಷತೆ ಒಳಗೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ X3 ಪ್ರೊ

ಪೊಕೊ X3 ಪ್ರೊ

ಪೊಕೊ ‍X3 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಇದು 120Hz ರಿಫ್ರೆಶ್ ರೇಟ್‌ ಮತ್ತು ಗೊರಿಲ್ಲಾ ಗ್ಲಾಸ್ 6 ರಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 860 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಜೊತೆಗೆ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರುವ ಸಾದ್ಯತೆ ಇದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಣೆ ಮಾಡುವ ಅವಕಾಶವನ್ನು ಒಳಗೊಂಡಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಪ್ರೈಮರಿ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ ಎನ್ನಲಾಗಿದೆ.

ಪೊಕೊ F3

ಪೊಕೊ F3

ಪೊಕೊ F3 ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದ್ದು, ಇನ್ಫಿನಿಟಿ-ಒ-ಡಿಸ್‌ಪ್ಲೇ ಆಗಿದೆ. ಇದು ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎಂದು ನಿರೀಕ್ಷಿಸಲಾಗಿದೆ. ಇದು 4,520mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33 W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಪೊಕೊ X3 ಪ್ರೊ ಸ್ಮಾರ್ಟ್‌ಫೋನ್‌ 8GB RAM + 256GB ಶೇಖರಣಾ ರೂಪಾಂತರಕ್ಕೆ ಬೆಲೆ VND 7,990,000 (ಸುಮಾರು 25,200 ರೂ.) ಎಂದು ನಿರೀಕ್ಷಿಸಲಾಗಿದೆ. ಆದಾಗ್ಯೂ, 6GB RAM + 128GB ಶೇಖರಣಾ ಮಾದರಿಯು ಸುಮಾರು $ 300 ಅಥವಾ $ 322 (ಅಂದಾಜು ರೂ. 21,700-23,300) ದಲ್ಲಿ ಲಭ್ಯವಾಗಲಿದೆ. ಇದಲ್ಲದೆ ಪೊಕೊ F3 ಬೆಲೆ ಅಂದಾಜು 22,500 ರೂ. ಇರಲಿದೆ ಎಂದು ಹೇಳಲಾಗಿದೆ.ಇನ್ನು ಪೊಕೊ ಮಾರ್ಚ್ 30 ರಂದು ಭಾರತದಲ್ಲಿ ಕೂಡ ಈವೆಂಟ್‌ ಅನ್ನು ಆಯೋಜಿಸಿದೆ. ಈ ಸಮಯದಲ್ಲಿ ಪೊಕೊ ಎಕ್ಸ್ 3 ಪ್ರೊ ಅನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

Best Mobiles in India

English summary
Poco X3 Pro And Poco F3 Launch at Global Event Today.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X