Home
ಸುದ್ದಿಜಾಲ

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ಆಗಲಿದೆ ಪೊಕೊ X3 ಪ್ರೊ ಸ್ಮಾರ್ಟ್‌: ಬೆಲೆ ಎಷ್ಟಿರಬಹುದು?

ಪೊಕೊ ಕಂಪನಿಯು ಈಗಾಗಲೇ ಬಿಡುಗಡೆ ಮಾಡಿದ ಪೊಕೊ X ಸ್ಮಾರ್ಟ್‌ಫೋನ್ ಸರಣಿ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಆ ಸರಣಿಯಲ್ಲಿ ಸಂಸ್ಥೆಯು ಇತ್ತೀಚಿಗೆ ಲಾಂಚ್ ಮಾಡಿದ್ದ ಪೊಕೊ X3 ಸ್ಮಾರ್ಟ್‌ಫೋನ್ ಸದ್ದು ಮಾಡಿತು. ಇದೀಗ ಕಂಪನಿಯು ಅದರ ಮುಂದುವರಿದ ಭಾಗವಾಗಿ ಪೊಕೊ X3 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣ ಮಾಡಲು ತಯಾರಿ ನಡೆಸಿದೆ.

ಪೊಕೊ

ಹೌದು, ಪೊಕೊ ಸಂಸ್ಥೆಯು ಹೊಸದಾಗಿ ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಪರಿಚಯಿಸಲು ಸಜ್ಜಾಗಿದೆ. ಸಂಸ್ಥೆಯು ಮುಂದಿನ ತಿಂಗಳು ಪೊಕೊ X3 ಪ್ರೊ ಫೋನ್‌ ಅನ್ನು ಅಧಿಕೃತವಾಗಿ ಲಾಂಚ್ ಮಾಡಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಲೀಕ್ ಫೀಚರ್ಸ್‌ಗಳು ಫೋನ್ ಬಗ್ಗೆ ಗ್ರಾಹಕರಲ್ಲಿ ಕುತೂಹನ ಮೂಡಿಸಿವೆ. ಲೀಕ್ ಮಾಹಿತಿಯಂತೆ ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಹಾಗೂ ಬೆಲೆ ಎಷ್ಟು ಎಂಬ ಮಾಹಿತಿಗಳನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಮತ್ತು ರಚನೆ

ಡಿಸ್‌ಪ್ಲೇ ಮತ್ತು ರಚನೆ

ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.7 ಇಂಚಿನ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿರಲಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು ಶೇ.84.7% ಆಗಿರಲಿದೆ. ಹಾಗೆಯೇ ಸ್ಕ್ರೀನ್ ರಕ್ಷಣೆಗೆ ಗೊರಿಲ್ಲಾ ಗ್ಲಾಸ್ 5 ಸಹ ಇರುವ ಸಾಧ್ಯತೆಗಳಿವೆ.

ಪ್ರೊಸೆಸರ್ ಸಾಮರ್ಥ್ಯವೆನು

ಪ್ರೊಸೆಸರ್ ಸಾಮರ್ಥ್ಯವೆನು

ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿರಲಿದ್ದು, ಆಂಡ್ರಾಯ್ಡ್‌ 11 ಓಎಸ್‌ ಬೆಂಬಲ ಪಡೆದುಕೊಂಡಿರಲಿದೆ. ಹಾಗೆಯೇ ಇದರಲ್ಲಿ ಅಡ್ರೆನೊ ಗ್ರಾಫಿಕ್ಸ್‌ ಪಡೆದಿದೆ. ಇದರೊಂದಿಗೆ 6GB RAM ಮತ್ತು 128 GB ವೇರಿಯಂಟ್ ಆಯ್ಕೆ ಪಡೆದಿರುವ ನಿರೀಕ್ಷೆಗಳಿವೆ. ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ವಿಸ್ತರಿಸುವ ಅವಕಾಶ ನೀಡುವ ಸಾಧ್ಯತೆಗಳಿವೆ.

ಕ್ವಾಡ್‌ ಕ್ಯಾಮೆರಾ ರಚನೆ

ಕ್ವಾಡ್‌ ಕ್ಯಾಮೆರಾ ರಚನೆ

ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ನಾಲ್ಕು ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಕ್ಯಾಮೆರಾ ಆಗಿರಲಿದೆ. ಸೆಕೆಂಡರಿ ಕ್ಯಾಮೆರಾವು ಅಲ್ಟ್ರಾ ವೈಲ್ಡ್‌ ಆಂಗಲ್‌ನ 13ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿರಲಿದ್ದು. ಹಾಗೆಯೇ ತೃತೀಯ 2 ಮತ್ತು ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿರಲಿವೆ. ಇನ್ನು ಮುಂಬದಿ ಸೆಲ್ಫಿ ಕ್ಯಾಮೆರಾ 20ಎಂಪಿ ಸೆನ್ಸಾರ್ ಹೊಂದಿರಲಿದೆ.

ಬ್ಯಾಟರಿ ಬಲ

ಬ್ಯಾಟರಿ ಬಲ

ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿರಲಿದೆ. ಇದರೊಂದಿಗೆ 33W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿರುವ ಸಾಧ್ಯತೆಗಳಿವೆ. ಹಾಗೆಯೇ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ 802.11ac, ಎನ್‌ಎಫ್‌ಸಿ, ಜಿಪಿಎಸ್‌, ಯುಎಸ್‌ಬಿ, ಬ್ಲೂಟೂತ್, ಆಯ್ಕೆಗಳು ಇರಲಿವೆ. ಇನ್ನು ಭಾರತದಲ್ಲಿ ಈ ಸ್ಮಾರ್ಟ್‌ಫೋನ್ ಬೆಲೆಯು 30,000ರೂ.ಗಳ ಆಸುಪಾಸಿನಲ್ಲಿರಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Poco is soon expected to launch the Poco X3 Pro, a variant of the Poco X3 in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+