Just In
- 20 hrs ago
ಕಳೆದು ಹೋದ ಸ್ಮಾರ್ಟ್ಫೋನ್ನಲ್ಲಿನ ನಿಮ್ಮ ವಾಟ್ಸಾಪ್ ಅಕೌಂಟ್ ಮತ್ತೆ ಪಡೆಯುವುದು ಹೇಗೆ?
- 24 hrs ago
ರಿಯಲ್ಮಿ C25 ಫಸ್ಟ್ ಲುಕ್: ಬಜೆಟ್ ದರದಲ್ಲಿ ಜಬರ್ದಸ್ತ್ ಕಾರ್ಯವೈಖರಿಯ ಫೋನ್!
- 1 day ago
ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಮತ್ತು ವೀಡಿಯೊಗಳನ್ನು ಸೇವ್ ಮಾಡುವುದು ಹೇಗೆ?
- 1 day ago
ವಾಟ್ಸಾಪ್ ಬಳಕೆದಾರರನ್ನು ಕಂಗಾಲು ಮಾಡಿದ Pink WhatsApp ಲಿಂಕ್!
Don't Miss
- Automobiles
ಬೊಲೆರೊ ಕಾರು ಮಾದರಿಯಾಗಿ ಸ್ಪೋರ್ಟಿ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಹೀಂದ್ರಾ
- News
ಕೊರೊನಾ ಹೆಚ್ಚಳ, ನೈತಿಕ ಹೊಣೆಹೊತ್ತು ಮೋದಿ ರಾಜೀನಾಮೆ ನೀಡಲಿ: ಮಮತಾ
- Sports
'ದಕ್ಷಿಣ ಆಫ್ರಿಕಾಕ್ಕೆ ಮತ್ತೆ ಆಡುವಂತಾದರೆ ಅದು ಅದ್ಭುತವೆನಿಸಲಿದೆ'
- Lifestyle
ಸೋಮವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Finance
ಕೊರೊನಾವೈರಸ್ ಎರಡನೇ ಅಲೆ: ಆರ್ಥಿಕ ಅನಿಶ್ಚಿತತೆಗೆ ಕಾರಣವಾಗಬಹುದು!
- Movies
ಮೂರು ಕತೆ, ಮೂರು ನಿರ್ದೇಶಕರು 'ಶಾಂತಿಯನ್ನು ಕಳೆದುಕೊಳ್ಳಬೇಡಿ' ಎನ್ನುತ್ತಿರುವುದೇಕೆ?
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇಂದು ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಫಸ್ಟ್ ಸೇಲ್: ಬೆಲೆ ಎಷ್ಟು?
ಪೊಕೊ ಮೊಬೈಲ್ ಸಂಸ್ಥೆಯು ಇತ್ತೀಚಿಗಷ್ಟೆ ಹೊಸದಾಗಿ ಪರಿಚಯಿಸಿರುವ ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಏ.6) ಮಧ್ಯಾಹ್ನ 12 ರಿಂದ ಇ-ಕಾಮರ್ಸ್ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಫಸ್ಟ್ ಸೇಲ್ ಆರಂಭವಾಗಲಿದೆ. ಇನ್ನು 5,160mAh ಬ್ಯಾಟರಿ ಪವರ್ ಹಾಗೂ ಕ್ವಾಡ್ ಕ್ಯಾಮೆರಾ ಫೀಚರ್ಸ್‌ಗಳು ಈ ಸ್ಮಾರ್ಟ್‌ಫೋನಿನ ಪ್ರಮುಖ ಹೈಲೈಟ್ಸ್‌ಗಳಾಗಿವೆ.

ಹೌದು, ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಇಂದು ಮೊದಲ ಮಾರಾಟ ನಡೆಯಲಿದೆ. ಈ ಫೋನ್ ಕ್ವಾಡ್ ಕ್ಯಾಮೆರಾ ಹೊಂದಿದ್ದು, ಮುಖ್ಯ ಸೆನ್ಸಾರ್ 48 ಎಂಪಿ ಆಗಿದೆ. ಫಾಸ್ಟ್ ಚಾರ್ಜಿಂಗ್ ಬೆಂಬಲಿತ 5,160mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಈ ಫೋನ್ 6GB + 64GB, 6GB + 128GB ಹಾಗೂ 8GB RAM ಮತ್ತು 128GB ಸಂಗ್ರಹ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಯನ್ನು ಪಡೆದಿದೆ. ಇನ್ನು ಈ ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 18,999 ರೂ ಆಗಿದೆ. ಇನ್ನುಳಿದಂತೆ ಈ ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67-ಇಂಚಿನ ಫುಲ್-ಹೆಚ್‌ಡಿ + ಡಾಟ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ 120Hz ಡೈನಾಮಿಕ್ ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಸಹ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 6 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು
ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಗನ್ 860 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM+ 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶವನ್ನು ನೀಡಲಾಗಿದೆ.

ಕ್ವಾಡ್ ಕ್ಯಾಮೆರಾ ಸ್ಪೆಷಲ್
ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದರೊಂದಿಗೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ V 5.0, GPS/ A-GPS, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಡ್ಯುಯಲ್ ಸ್ಪೀಕರ್‌ಗಳನ್ನು ಹೊಂದಿದ್ದು, ಇದು ಹೈರೆಸ್ ಆಡಿಯೋ ಪ್ರಮಾಣೀಕರಣವನ್ನು ಹೊಂದಿರುತ್ತದೆ.

ಬೆಲೆ ಮತ್ತು ಲಭ್ಯತೆ
ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ 6GB RAM + 128GB ಸ್ಟೋರೇಜ್ ರೂಪಾಂತರಕ್ಕೆ 18,999 ರೂ.ಬೆಲೆಯನ್ನು ಹೊಂದಿದೆ. ಜೊತೆಗೆ 8GB RAM+ 128GB ಸ್ಟೋರೇಜ್ ಮಾದರಿಯು 20,999. ರೂ ಬೆಲೆಯನ್ನು ಹೊಂದಿದೆ. ಪೊಕೊ X3 ಪ್ರೊನಲ್ಲಿ ಲಾಂಚ್ ಆಫರ್ 10% ರಿಯಾಯಿತಿಯನ್ನು ಪಡೆದುಕೊಳ್ಳಬಹುದು. ಅಲ್ಲದೆ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಥವಾ EMI ವಹಿವಾಟಿನ ಮೂಲಕ ಖರೀದಿಸುವ ಗ್ರಾಹಕರಿಗೆ 1,000 ರೂ. ರಿಯಯಿತಿ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಗೋಲ್ಡನ್ ಕಂಚು, ಗ್ರ್ಯಾಫೈಟ್ ಬ್ಲ್ಯಾಕ್ ಮತ್ತು ಸ್ಟೀಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999