ಹೊಸ ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಈಗ ಭರ್ಜರಿ ಡಿಸ್ಕೌಂಟ್ ಕೊಡುಗೆ!
ಪೊಕೊ ಮೊಬೈಲ್ ಕಂಪನಿಯು ಹೊಸದಾಗಿ ಬಿಡುಗಡೆ ಮಾಡಿರುವ ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಪೊಕೊ F1 ಸ್ಮಾರ್ಟ್‌ಫೋನ್ ಬಳಕೆ ಮಾಡುತ್ತಿರುವ ಗ್ರಾಹಕರಿಗೆ ಪೊಕೊ X3 ಪ್ರೊ ಖರೀದಿಯಲ್ಲಿ ಈಗ ಭರ್ಜರಿ ಡಿಸ್ಕೌಂಟ್ ಸಿಗಲಿದೆ. ಈ ವಿಶೇಷ ಆಫರ್ ಎಕ್ಸ್‌ಚೇಂಜ್ ರಿಯಾಯಿತಿ, ಆಯ್ದ ಬ್ಯಾಂಕ್‌ಗಳ ಇನ್‌ಸ್ಟಂಟ್ ಡಿಸ್ಕೌಂಟ್‌ಗಳನ್ನು ಒಳಗೊಂಡಿದೆ.

ಹೌದು, ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಈಗ ರಿಯಾಯಿತಿ ದಲ್ಲಿ ಲಭ್ಯವಿದೆ. ಗ್ರಾಹಕರು ತಮ್ಮ ಹಳೆಯ ಪೊಕೊ F1 ಸ್ಮಾರ್ಟ್‌ಫೋನ್ ಅನ್ನು ಎಕ್ಸ್‌ಚೇಂಜ್ ಮಾಡಿಕೊಂಡರೇ ಸುಮಾರು 7,000 ರೂ.ಗಳ ರಿಯಾಯಿತಿ ಸಿಗಲಿದೆ. ಫ್ಲಿಪ್‌ಕಾರ್ಟ್ ತಾಣದಲ್ಲಿ ಐಸಿಐಸಿಐ ಬ್ಯಾಂಕ್ ಕಾರ್ಡ್ ಬಳಕೆ ಮೂಲಕ ಖರೀದಿಸದರೇ ಸುಮಾರು 1000ರೂ.ಗಳ ಇನ್‌ಸ್ಟಂಟ್ ಡಿಸ್ಕೌಂಟ್ ಲಭ್ಯವಾಗಲಿದೆ. ಈ ಕೊಡುಗೆಯಿಂದ 6GB+128GB ವೇರಿಯಂಟ್ ಫೋನ್ 10,999 ರೂ.ಗಳಿಗೆ ಸಿಗಲಿದೆ ಮತ್ತು 8GB+128GB ವೇರಿಯಂಟ್ ಮಾಡೆಲ್ 12,999ರೂ.ಗಳಿಗೂ ಲಭ್ಯ ಆಗಲಿದೆ. ಹಾಗಾದರೇ ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್‌ಗಳೇನು ಎನ್ನುವ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67-ಇಂಚಿನ ಫುಲ್-ಹೆಚ್‌ಡಿ + ಡಾಟ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ 120Hz ಡೈನಾಮಿಕ್ ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಸಹ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 6 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು
ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಗನ್ 860 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM+ 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶವನ್ನು ನೀಡಲಾಗಿದೆ.

ಕ್ವಾಡ್ ಕ್ಯಾಮೆರಾ ವಿಶೇಷತೆ
ಪೊಕೊ X3 ಪ್ರೊ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದರೊಂದಿಗೆ 20 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ V 5.0, GPS/ A-GPS, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಡ್ಯುಯಲ್ ಸ್ಪೀಕರ್‌ಗಳನ್ನು ಹೊಂದಿದ್ದು, ಇದು ಹೈರೆಸ್ ಆಡಿಯೋ ಪ್ರಮಾಣೀಕರಣವನ್ನು ಹೊಂದಿರುತ್ತದೆ.


Click it and Unblock the Notifications