ಭಾರತದಲ್ಲಿ ಪೊಕೊ X3 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌! ವಿಶೇಷತೆ ಏನು?

|

ಶಿಯೋಮಿಯಿಂದ ಪ್ರತ್ಯೇಕ ಗೊಂಡ ನಂತರ ಪೊಕೊ ಹಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಪೊಕೊ X3 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ಟ್ಯಾಂಡರ್ಡ್ ಪೊಕೊ X3 ಸ್ಮಾರ್ಟ್‌ಫೋನ್‌ನ ಅಪ್‌ಗ್ರೇಡ್ ಆವೃತ್ತಿಯಾಗಿದೆ. ಪೊಕೊ X3 ಪ್ರೊ ಕ್ವಾಲ್ಕಾಮ್ ಸ್ನಾಪ್‌ಡ್ರಗನ್ 860 SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಪೊಕೊ X3 ಪ್ರೊ

ಹೌದು, ಪೊಕೊ ಕಂಪೆನಿ ಹೊಸ ಪೊಕೊ X3 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇದು 6.67 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಪಡೆದುಕೊಂಡಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ 6GB RAM+ 128GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಪೊಕೊ X3 ಪ್ರೊ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌-ಹೆಚ್‌ಡಿ + ಡಾಟ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ 120Hz ಡೈನಾಮಿಕ್ ರಿಫ್ರೆಶ್ ರೇಟ್‌ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಸಹ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 6 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಪೊಕೊ X3 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಗನ್ 860 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM+ 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶವನ್ನು ನೀಡಲಾಗಿದೆ.

ಕ್ವಾಡ್‌ ಕ್ಯಾಮೆರಾ ವಿಶೇಷ

ಕ್ವಾಡ್‌ ಕ್ಯಾಮೆರಾ ವಿಶೇಷ

ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದರೊಂದಿಗೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ X3 ಪ್ರೊ ಸ್ಮಾರ್ಟ್‌ಫೋನ್‌ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ V 5.0, GPS/ A-GPS, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಡ್ಯುಯಲ್ ಸ್ಪೀಕರ್‌ಗಳನ್ನು ಹೊಂದಿದ್ದು, ಇದು ಹೈರೆಸ್ ಆಡಿಯೋ ಪ್ರಮಾಣೀಕರಣವನ್ನು ಹೊಂದಿರುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಪೊಕೊ X3 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ 6GB RAM + 128GB ಸ್ಟೋರೇಜ್ ರೂಪಾಂತರಕ್ಕೆ 18,999 ರೂ.ಬೆಲೆಯನ್ನು ಹೊಂದಿದೆ. ಜೊತೆಗೆ 8GB RAM+ 128GB ಸ್ಟೋರೇಜ್ ಮಾದರಿಯು 20,999. ರೂ ಬೆಲೆಯನ್ನು ಹೊಂದಿದೆ. ಪೊಕೊ X3 ಪ್ರೊನಲ್ಲಿ ಲಾಂಚ್ ಆಫರ್ 10% ರಿಯಾಯಿತಿಯನ್ನು ಪಡೆದುಕೊಳ್ಳಬಹುದು. ಅಲ್ಲದೆ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಥವಾ EMI ವಹಿವಾಟಿನ ಮೂಲಕ ಖರೀದಿಸುವ ಗ್ರಾಹಕರಿಗೆ 1,000 ರೂ. ರಿಯಯಿತಿ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಗೋಲ್ಡನ್ ಕಂಚು, ಗ್ರ್ಯಾಫೈಟ್ ಬ್ಲ್ಯಾಕ್ ಮತ್ತು ಸ್ಟೀಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಏಪ್ರಿಲ್ 6 ರ ಮಧ್ಯಾಹ್ನ 12 ರಿಂದ (ಮಧ್ಯಾಹ್ನ) ಫ್ಲಿಪ್ಕಾರ್ಟ್ ಮೂಲಕ ಖರೀದಿಸಲು ಲಭ್ಯವಿರುತ್ತದೆ.

Best Mobiles in India

English summary
Poco X3 Pro With Quad Rear Cameras, Snapdragon 860 SoC Launched in India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X