ಸದ್ಯದಲ್ಲೇ ಭಾರತದ ಮಾರುಕಟ್ಟೆಯಲ್ಲಿ ಪೊಕೊ X3 ಸ್ಮಾರ್ಟ್‌ಫೋನ್ ಬಿಡುಗಡೆ!
ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿ ಶಿಯೋಮಿಯಿಂದ ಪ್ರತ್ಯೇಕ ಗೊಂಡ ನಂತರ ಪೊಕೊ ತನ್ನ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಈಗಾಗಲೇ ವೈವಿಧ್ಯಮಯ ಫೀಚರ್ಸ್‌ಗಳನ್ನ ಒಳಗೊಂಡ ಸ್ಮಾರ್ಟ್‌ಫೋನ್ ಪರಿಚಯಿಸಿರುವ ಪೊಕೊ, ಇದೀಗ ತನ್ನ ಪೊಕೊ X3 ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಲು ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಸೆಪ್ಟೆಂಬರ್ 22 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಬಿಡುಗಡೆಯ ಕುರಿತು ಫ್ಲಿಪ್‌ಕಾರ್ಟ್‌ನಲ್ಲಿ ಪಟ್ಟಿ ಮಾಡಲಾಗಿರುವುದರಿಂದ ಬಿಡುಗಡೆಯ ದಿನಾಂಕ ಅಧಿಕೃತವಾಗಿದೆ.

ಹೌದು, ಪೊಕೊ ಸಂಸ್ಥೆ ತನ್ನ ಹೊಸ ಪೊಕೊ X3 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಇದೇ ಸೆಪ್ಟೆಂಬರ್ 22 ರಂದು ಬಿಡುಗಡೆ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಸಹಭಾಗಿತ್ವದಲ್ಲಿ ಸ್ಮಾರ್ಟ್‌ಫೋನ್ ಪ್ರತ್ಯೇಕವಾಗಿ ಲಭ್ಯವಿರುತ್ತದೆ. ಪೊಕೊ X3 ಜಾಗತಿಕ ಮಾರುಕಟ್ಟೆಯಲ್ಲಿ ಈಗಾಗಲೇ ಬಿಡುಗಡೆ ಆಗಿದ್ದು, ಥೇಟ್ ಇದೇ ಮಾದರಿಯಂತೆಯೇ ಭಾರತದಲ್ಲಿಯೂ ಲಭ್ಯವಾಗಲಿದೆ. ಅಲ್ಲದೆ ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 732G ಪ್ರೊಸೆಸರ್ ಅನ್ನು ಹೊಂದಿರಲಿದೆ ಎಂದು ಫ್ಲಿಪ್ಕಾರ್ಟ್ ಬಹಿರಂಗಪಡಿಸಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಪೊಕೊ X3 ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಜೊತೆಗೆ HDR10 ಪ್ರಮಾಣೀಕರಣವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್ ಬಲ
ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 732G ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಇದು ಅಡ್ರಿನೊ 618GPU ಅನ್ನು ಹೊಂದಿದೆ. ಹಾಗೇಯೇ ಇದು 6GB RAM ಮತ್ತು 64GB ಮತ್ತು 128GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಇದರ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಪೊಕೊ ಕಂಪನಿಯು ಈ ಫೋನ್‌ನಲ್ಲಿ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ನೀಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX682 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5,160mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, ಇದು ಯುಎಸ್‌ಬಿ ಟೈಪ್ ಸಿ ಮೂಲಕ 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಆದರೆ ಭಾರತದಲ್ಲಿ ಬಿಡುಗಡೆ ಆಗುವ ಸ್ಮಾರ್ಟ್‌ಫೋನ್ ಇದೇ ಮಾದರಿಯನ್ನು ಹೊಂದಿರಲಿದೆ ಎನ್ನುವುದಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಬೆಲೆ ಮತ್ತು ಲಭ್ಯತೆ
ಪೊಕೊ X3 ಸ್ಮಾರ್ಟ್‌ಫೋನ್ ಬೆಲೆ ಭಾರತದಲ್ಲಿ 18,999 ಮತ್ತು 19,999 ರೂ. ಆಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಸೆಪ್ಟೆಂಬರ್ 22 ರಂದು, ಮಧ್ಯಾಹ್ನ 12ಗಂಟೆಯ ನಂತರ ಫ್ಲಿಪ್‌ಕಾರ್ಟ್‌ನಲ್ಲಿ ಬಿಡುಗಡೆ ಆಗಲಿದ್ದು, ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications