Home
ಸುದ್ದಿಜಾಲ

ಭಾರತದಲ್ಲಿ ಪೊಕೊ X3 ಸ್ಮಾರ್ಟ್‌ಫೋನ್‌ ಬಿಡುಗಡೆ!..6,000mAh ಬ್ಯಾಟರಿ ವಿಶೇಷತೆ!

ಶಿಯೋಮಿಯಿಂದ ಪ್ರತ್ಯೇಕಗೊಂಡ ನಂತರ ಪೊಕೊ ಸಂಸ್ಥೆ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸಂಚಲನ ಮೂಡಿಸಿದೆ. ಇದೀಗ ತನ್ನ ಪೊಕೊ X3 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಈ ವರ್ಷದ ಫೆಬ್ರವರಿಯಲ್ಲಿ ಬಿಡುಗಡೆಯಾದ ಪೊಕೊ X2ನ ಮುಂದುವರೆದ ಆವೃತ್ತಿಯ ಸ್ಮಾರ್ಟ್‌ಫೋನ್‌ ಆಗಿದೆ. ಸದ್ಯ ಪೊಕೊ X3 ಸ್ಮಾರ್ಟ್‌ಫೋನ್‌ನ ಭಾರತೀಯ ರೂಪಾಂತರವು ಮೂರು RAM ಮತ್ತು ಶೇಖರಣಾ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಇದು ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ.

ಪೊಕೊ X3

ಹೌದು, ಪೊಕೊ ಸಂಸ್ಥೆ ತನ್ನ ಹೊಸ ಪೊಕೊ X3 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಜೊತೆಗೆ 120Hz ರಿಪ್ರೆಶ್ ರೇಟ್‌ ಹೊಂದಿರುವ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಅಲ್ಲದೆ ಆಕ್ಟಾ-ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಪೊಕೊ X3 ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು HDR10 ಅನ್ನು ಹೊಂದಿದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ- ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ ಪೊಕೊ X3 ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 6GB + 64GB, 6GB + 128GB ಹಾಗೂ 8GB RAM ಮತ್ತು 128GB ಸಂಗ್ರಹ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯನ್ನ ಹೊಂದಿದೆ. ಜೊತೆಗೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್‌ ರಿಯರ್‌ ಕ್ಯಾಮೆರಾ

ಕ್ವಾಡ್‌ ರಿಯರ್‌ ಕ್ಯಾಮೆರಾ

ಪೊಕೊ X3 ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX682 ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ 119 ಡಿಗ್ರಿ ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌, ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, GPS, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್ ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್‌ ಸ್ಕ್ಯಾನರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಪೊಕೊ X3 ಬೇಸ್‌ ಮಾಡೆಲ್‌ 6GB RAM + 64GB ಶೇಖರಣಾ ಮಾದರಿಗೆ 16,999 ರೂ. 6GB RAM + 128GB ಶೇಖರಣಾ ಮಾದರಿಗೆ 18,499 ರೂ, ಮತ್ತು 8GB RAM + 128GB ಸ್ಟೋರೇಜ್ ಹೊಂದಿರುವ ಟಾಪ್-ಟೈರ್ ರೂಪಾಂತರದ ಬೆಲೆ 19,999.ರೂ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕೋಬಾಲ್ಟ್ ಬ್ಲೂ ಮತ್ತು ಶ್ಯಾಡೋ ಗ್ರೇ ಎಮಬ ಎರಡು ಬಣ್ಣಗಳ ಆಯ್ಕೆಯಲ್ಲಿ ಲಬ್ಯವಾಗಲಿದೆ. ಇದು ಸೆಪ್ಟೆಂಬರ್ 29, ಮಧ್ಯಾಹ್ನ 12 ರಿಂದ ಫ್ಲಿಪ್ಕಾರ್ಟ್ ಮೂಲಕ ದೇಶದಲ್ಲಿ ಮಾರಾಟವಾಗಲಿದೆ.

Best Mobiles in India

English summary
Poco X3 comes with up to 128GB of UFS 2.1 onboard storage that is expandable via microSD card (up to 256GB).to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+