ಗ್ರ್ಯಾಂಡ್‌ ಎಂಟ್ರಿ ಕೊಟ್ಟ 'ಪೊಕೊ X4 GT ಫೋನ್‌'!..ಎಷ್ಟು ಎಂಪಿ ಕ್ಯಾಮೆರಾ ಇದೆ?

|

ಮೊಬೈಲ್‌ ಮಾರುಕಟ್ಟೆಯಲ್ಲಿ ಪೊಕೊ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ತನ್ನ ವಿಭಿನ್ನ ಮಾದರಿಯ ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿದೆ. ಸದ್ಯ ಇದೀಗ ಹೊಸದಾಗಿ ತನ್ನ ಹೊಸ ಪೊಕೊ X4 GT ಫೋನ್‌ ಬಿಡುಗಡೆ ಮಾಡಿದೆ. ಈ ಫೋನ್ ಮೀಡಿಯಾ ಟೆಕ್‌ Dimensity 8100 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಡಿಸ್‌ಪ್ಲೇ

ಹೌದು, ಪೊಕೊ ಕಂಪೆನಿ ಹೊಸದಾಗಿ ಪೊಕೊ X4 GT ಫೋನ್‌ ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡ್‌ರೇಂಜ್‌ ಪ್ರೈಸ್‌ ಟ್ಯಾಗ್‌ ಅನ್ನು ಹೊಂದಿದ್ದು, ಹಾಗೆಯೇ 144 Hz ಡಿಸ್‌ಪ್ಲೇ ರಿಫ್ರೇಶ್‌ ರೇಟ್‌ ಜೊತೆಗೆ Dolby Vision ಸಪೋರ್ಟ್‌ ಸಹ ಒಳಗೊಂಡಿದೆ. ಇದರೊಂದಿಗೆ 8GB RAM ಮತ್ತು 256 GB ಆಂತರಿಕ ಸಂಗ್ರಹಣೆಯ ಆಯ್ಕೆಯನ್ನು ಒಳಗೊಂಡಿದೆ. ಹಾಗೆಯೇ 5080mAh ಬ್ಯಾಟರಿ ಬ್ಯಾಕ್‌ಅಪ್‌ ಬೆಂಬಲ ಪಡೆದಿದೆ.

ಮೆಗಾ

ಇನ್ನು ಪೊಕೊ X4 GT ಫೋನ್‌ ಕ್ಯಾಮೆರಾ ವಿಭಾಗದಲ್ಲಿಯೂ ಗಮನ ಸೆಳೆವ ಆಯ್ಕೆಗಳನ್ನು ಹೊಂದಿದ್ದು, ಈ ಫೋನಿನ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಸಾಮರ್ಥ್ಯದಲ್ಲಿದೆ. ಹಾಗಾದರೇ ಇನ್ನುಳಿದಂತೆ ಪೊಕೊ X4 GT ಫೋನಿನ ಇತರೆ ಫೀಚರ್ಸ್‌ಗಳೆನು ಹಾಗೂ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಹಾಗೂ ರಚನೆ

ಡಿಸ್‌ಪ್ಲೇ ಹಾಗೂ ರಚನೆ

ಪೊಕೊ X4 GT ಫೋನ್‌ ಅಧಿಕ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.6 ಇಂಚಿನ ಪೂರ್ಣ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಇದರೊಂದಿಗೆ ಇದು 144 Hz ಸ್ಕ್ರೀನ್ ರಿಫ್ರೆಶ್ ರೇಟ್‌ ಸಹ ಪಡೆದಿದೆ. ಇನ್ನು ಈ ಡಿಸ್‌ಪ್ಲೇಯ ಅನುಪಾತವು 20.5:9 ಆಗಿದೆ. ಇವುಗಳೊಂದಿಗೆ ಡಾಲ್ಬಿ ವಿಷನ್ ಅನ್ನು ಸಹ ಬೆಂಬಲಿಸುತ್ತದೆ.

ಪ್ರೊಸೆಸರ್‌ ಪವರ್‌

ಪ್ರೊಸೆಸರ್‌ ಪವರ್‌

ಪೊಕೊ X4 GT ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 SoC ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್ ಸಹ ಒಳಗೊಂಡಿದೆ. ಹಾಗೆಯೇ ನಾಲ್ಕು ಪ್ರೀಮಿಯಂ ಆರ್ಮ್ ಕಾರ್ಟೆಕ್ಸ್-A78 ಕೋರ್‌ಗಳೊಂದಿಗೆ 2.85GHz ಗಡಿಯಾರದ ವೇಗ ಮತ್ತು ನಾಲ್ಕು ಕಾರ್ಟೆಕ್ಸ್-A55 ಕೋರ್‌ಗಳನ್ನು ಹೊಂದಿದೆ. ಇದರೊಂದಿಗೆ 8GB + 128GB ಮತ್ತು 8GB RAM ಹಾಗೂ 256 GB ಆಂತರಿಕ ಸಂಗ್ರಹಣೆಯ ಆಯ್ಕೆಯನ್ನು ಒಳಗೊಂಡಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ಪೊಕೊ X4 GT ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ವೈಡ್ ಆಂಗಲ್ ಲೆನ್ಸ್ ಹೊಂದಿದೆ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಪೊಕೊ X4 GT ಸ್ಮಾರ್ಟ್‌ಫೋನ್ 5080mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಇದಕ್ಕೆ ಪೂರಕವಾಗಿ 67W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್‌ಗೆ ಸಪೋರ್ಟ್‌ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, ಬ್ಲೂಟೂತ್ 5.1, ವೈಫೈ, ಹಾಟ್‌ಸ್ಪಾಟ್‌, ಡ್ಯುಯಲ್ ಸ್ಪೀಕರ್‌, 3.5mm ಹೆಡ್‌ಫೋನ್ ಜ್ಯಾಕ್ ಹಾಗೂ ಹೈ-ರೆಸ್ ಆಡಿಯೊ ಪ್ರಮಾಣೀಕರಣವನ್ನು ಹೊಂದಿದೆ. ಜೊತೆಗೆ VC ಲಿಕ್ವಿಡ್‌ ಕೂಲಿಂಗ್ ಸೌಲಭ್ಯ ಹೊಂದಿದೆ. ಇನ್ನು ಈ ಫೋನ್ 163.6×74.3×8.8mm ಸುತ್ತಳತೆ ಹೊಂದಿದ್ದು, 200 ಗ್ರಾಂ ತೂಕ ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಪೊಕೊ X4 GT ಸ್ಮಾರ್ಟ್‌ಫೋನ್ 8GB + 128 GB ಮತ್ತು 8GB RAM ಹಾಗೂ 256 GB ಸ್ಟೋರೇಜ್ ರೂಪಾಂತರದ ಆಯ್ಕೆಗಳನ್ನು ಹೊಂದಿದೆ. 8GB + 128 GB ವೇರಿಯಂಟ್‌ ಬೆಲೆಯು EUR 379 (ಭಾರತದಲ್ಲಿ ಅಂದಾಜು 31,200ರೂ. ಆಗಿದೆ). ಅದೇ ರೀತಿ 8GB RAM ಹಾಗೂ 256 GB ಸ್ಟೋರೇಜ್ ವೇರಿಯಂಟ್ ಬೆಲೆಯು EUR 429 (ಭಾರತದಲ್ಲಿ ಅಂದಾಜು 35,300 ರೂ. ಆಗಿದೆ). ಇನ್ನು ಈ ಫೋನ್ ನೀಲಿ, ಕಪ್ಪು ಮತ್ತು ಬೆಳ್ಳಿ ಬಣ್ಣದ ಆಯ್ಕೆಗಳ ಆಯ್ಕೆ ಹೊಂದಿದೆ.

ಪೊಕೊ F4 5G ಸ್ಮಾರ್ಟ್‌ಫೋನ್‌ ಫೀಚರ್ಸ್‌

ಪೊಕೊ F4 5G ಸ್ಮಾರ್ಟ್‌ಫೋನ್‌ ಫೀಚರ್ಸ್‌

ಹಾಗೆಯೇ ಪೊಕೊ ಪೊಕೊ F4 5G ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದೆ. ಈ ಫೋನ್ 6.67 ಇಂಚಿನ ಫುಲ್‌ HD+ E4 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಡಿಸ್‌ಪ್ಲೇ DCI-P3 ಬಣ್ಣದ ಹರವು ಸಹ ಒಳಗೊಂಡಿದ್ದು, 120Hz ರಿಫ್ರೆಶ್ ರೇಟ್‌ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ.

ಸ್ಮಾರ್ಟ್‌ಫೋನ್‌

ಪೊಕೊ F4 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿರುವ f/1.8 ಲೆನ್ಸ್‌ನೊಂದಿಗೆ ಬರುತ್ತದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Most Read Articles
Best Mobiles in India

English summary
Poco X4 GT with 144 Hz Display Launched: Price, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X